ಕಲಬುರಗಿ| ಸರ್ಕಾರಿ ಅಭಿಯೋಜಕರಿಗೆ ₹5 ಸಾವಿರ ಲಂಚ ನೀಡಲು ಯತ್ನಿಸಿದ ತಂದೆ-ಮಗ ಲೋಕಾ ವಶಕ್ಕೆ

Date:

Share post:

ಕಲಬುರಗಿ: ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಅನುಕೂಲವಾಗುವಂತೆ ಸಹಕರಿಸುವ ಉದ್ದೇಶದಿಂದ ಸರ್ಕಾರಿ ಅಭಿಯೋಜಕರಿಗೆ ₹5,000 ಲಂಚ ನೀಡಲು ಯತ್ನಿಸಿದ ತಂದೆ-ಮಗನನ್ನು ಕರ್ನಾಟಕ ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ.

 

ಕರ್ನಾಟಕ ಲೋಕಾಯುಕ್ತ ಕಲಬುರಗಿ ಪೊಲೀಸ್ ಅಧೀಕ್ಷಕ ಸಿದ್ದರಾಜು ಸಿ. ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಹಿರಿಯ ಕಾನೂನು ಅಧಿಕಾರಿ ಹಾಗೂ ಸರ್ಕಾರಿ ಅಭಿಯೋಜಕರಾದ ಪ್ರಾಣೇಶ ಸಿದ್ದಪ್ಪ ಭರತನೂರ ಅವರ ದೂರಿನ ಮೇರೆಗೆ ಕ್ರಮ ಜರುಗಿಸಲಾಗಿದೆ.

ಆಳಂದ ಪೊಲೀಸ್ ಠಾಣೆ ವ್ಯಾಪ್ತಿಯ ಎಸ್‌ಸಿ/ಎಸ್‌ಟಿ ಪ್ರಕರಣವೊಂದು ಕಲಬುರಗಿಯ 2ನೇ ಅಪರ ಜಿಲ್ಲಾ ಮತ್ತು ಸತ್ರ (ಎಸ್‌ಸಿ/ಎಸ್‌ಟಿ) ನ್ಯಾಯಾಲಯದಲ್ಲಿ ವಿಚಾರಣೆಯ ಹಂತದಲ್ಲಿದೆ. ಈ ಪ್ರಕರಣದಲ್ಲಿ ಆರೋಪಿತನಿಗೆ ಅನುಕೂಲವಾಗುವಂತೆ ಪ್ರಕರಣವನ್ನು ಸಾಗುಹಾಕಲು ಹಾಗೂ ಸಹಕಾರ ನೀಡುವಂತೆ ಒತ್ತಡ ಹೇರುವ ಉದ್ದೇಶದಿಂದ ಆರೋಪಿತನ ಪರವಾಗಿ ಆತನ ಅಣ್ಣ ಸಂಜೀವನ್ ದತ್ತಾಜಿ ಪಾಟೀಲ್ (80) ಹಾಗೂ ಪುತ್ರ ಸುರೇಶ ಸಂಜೀವನ್ ಪಾಟೀಲ್ (44) ಅವರು ಸರ್ಕಾರಿ ಅಭಿಯೋಜಕರಿಗೆ ₹5,000 ನಗದು ಹಣವನ್ನು ಕವರಿನಲ್ಲಿ ಇಟ್ಟು ನೀಡಲು ಯತ್ನಿಸಿದ್ದಾರೆ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.

 

ದೂರಿನ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಅಧಿಕಾರಿಗಳು, ಲಂಚದ ಹಣ ನೀಡುವ ವೇಳೆ ಇಬ್ಬರನ್ನೂ ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅಗತ್ಯ ದಾಖಲೆಗಳು ಹಾಗೂ ಸಾಕ್ಷ್ಯಾಧಾರಗಳನ್ನು ಕಲೆ ಹಾಕುತ್ತಿದ್ದಾರೆ ಎಂದು ತಿಳಿದುಬಂದಿದೆ.

 

ಕಾರ್ಯಾಚರಣೆಯ ನೇತೃತ್ವವನ್ನು ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್ ರಾಜಶೇಖರ ಬಡದೇಸಾರ ವಹಿಸಿಕೊಂಡಿದ್ದು, ಪೊಲೀಸ್ ಇನ್ಸ್ಪೆಕ್ಟರ್‌ಗಳಾದ ಅರುಣ್ ಕುಮಾರ್ ಮತ್ತು ರವಿ ಪವಾರ್ ಸೇರಿದಂತೆ ಸಿಬ್ಬಂದಿ ಭಾಗವಹಿಸಿದ್ದರು.

ಪ್ರಕರಣದ ತನಿಖೆ ಮುಂದುವರಿದಿದ್ದು, ತನಿಖೆ ಪೂರ್ಣಗೊಂಡ ಬಳಿಕ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿಯಲ್ಲಿ ಜೋಯಾಲುಕ್ಕಾಸ್‌ನ ‘ಬ್ರಿಲಿಯನ್ಸ್ ಡೈಮಂಡ್ ಜ್ಯುವೆಲ್ಲರಿ ಶೋ’

ಕಲಬುರಗಿ: ಜಗತ್ತಿನ ಪ್ರಸಿದ್ಧ ಜ್ಯುವೆಲ್ಲರಿ ಬ್ರ್ಯಾಂಡ್ ಜೋಯಾಲುಕ್ಕಾಸ್, ಕಲಬುರಗಿ ನಗರದ ತನ್ನ...

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...