ಕಲಬುರಗಿ| “ರೈತರ ಸಾಲ ಮನ್ನಾ..”: ಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದೇನು?

Date:

Share post:

ಕಲಬುರಗಿ: ರಾಜ್ಯದಲ್ಲಿ ಉಂಟಾಗಿರುವ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರ ಸಾಲ ಮನ್ನಾ ಕುರಿತಂತೆ ಸಮಗ್ರ ಪರಿಶೀಲನೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಕಲಬುರಗಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದ ವಿವಿಧ ಭಾಗಗಳಲ್ಲಿ ಉಂಟಾಗಿರುವ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಅದರ ಬಗ್ಗೆ ಅಧಿಕಾರಿಗಳೊಂದಿಗೆ ಸವಿಸ್ತಾರವಾಗಿ ಚರ್ಚಿಸಲಾಗುತ್ತಿದೆ ಎಂದು ಹೇಳಿದರು.

ಕಲಬುರಗಿ ವಿಭಾಗದ ಅಧಿಕಾರಿಗಳ ಸಭೆಯನ್ನು ಇಂದು ನಡೆಸಲಾಗುತ್ತಿದ್ದು, ಬರ ನಿರ್ವಹಣೆ, ಕುಡಿಯುವ ನೀರು, ಮೇವು ಹಾಗೂ ರೈತರ ಸಮಸ್ಯೆಗಳ ಕುರಿತು ಪರಾಮರ್ಶೆ ನಡೆಸಲಾಗುವುದು. ಇದೇ ರೀತಿ ಮುಂದಿನ ಎರಡು–ಮೂರು ದಿನಗಳಲ್ಲಿ ಬೆಳಗಾವಿಗೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಯನ್ನೂ ಪರಿಶೀಲಿಸಲಾಗುವುದು ಎಂದು ತಿಳಿಸಿದರು.

 

ರೈತರ ಸಾಲ ಮನ್ನಾ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, “ಯಾವ ಸಾಲ? ಯಾರ ಸಾಲ? ಯಾವ ರೀತಿಯ ಸಾಲ? ಎಷ್ಟು ಪ್ರಮಾಣದ ಸಾಲ? ಎಂಬ ಎಲ್ಲ ಅಂಶಗಳನ್ನು ಪರಿಶೀಲಿಸಿದ ಬಳಿಕವೇ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಲಿದೆ” ಎಂದು ಸ್ಪಷ್ಟಪಡಿಸಿದರು.

ರಾಜ್ಯದಲ್ಲಿ ಉಂಟಾಗಿರುವ ಬರ ಪರಿಸ್ಥಿತಿಗೆ ತಕ್ಕಂತೆ ರೈತರ ಹಿತದೃಷ್ಟಿಯಿಂದ ಅಗತ್ಯ ಕ್ರಮಗಳನ್ನು ಸರ್ಕಾರ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಭರವಸೆ ನೀಡಿದರು.

Share post:

spot_imgspot_img

Popular

More like this
Related

ಕಲಬುರಗಿಯಲ್ಲಿ ಜೋಯಾಲುಕ್ಕಾಸ್‌ನ ‘ಬ್ರಿಲಿಯನ್ಸ್ ಡೈಮಂಡ್ ಜ್ಯುವೆಲ್ಲರಿ ಶೋ’

ಕಲಬುರಗಿ: ಜಗತ್ತಿನ ಪ್ರಸಿದ್ಧ ಜ್ಯುವೆಲ್ಲರಿ ಬ್ರ್ಯಾಂಡ್ ಜೋಯಾಲುಕ್ಕಾಸ್, ಕಲಬುರಗಿ ನಗರದ ತನ್ನ...

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...