ಕಲಬುರಗಿ| ಲಂಚ ಪಡೆದ ತಹಸೀಲ್ದಾರರಿಗೆ 4 ವರ್ಷ ಜೈಲು ಶಿಕ್ಷೆ, 20 ಸಾವಿರ ದಂಡ!

Date:

ಕಲಬುರಗಿ: ಲಂಚ ಸ್ವೀಕರಿಸಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಫಜಲಪುರ ತಾಲೂಕಿನ ತಹಸೀಲ್ದಾರರಾಗಿದ್ದ ಶ್ರೀಮತಿ ಶಶಿಕಲಾ ಪಾದಗಟ್ಟಿ ಹಾಗೂ ಖಾಸಗಿ ವ್ಯಕ್ತಿ ಶಿವಾನಂದ ಜಮಖಂಡಿ ಅವರಿಗೆ ಕಲಬುರಗಿ ಪ್ರಧಾನ ಜಿಲ್ಲಾ ಮತ್ತು ವಿಶೇಷ ನ್ಯಾಯಾಲಯವು ತಲಾ 4 ವರ್ಷ ಜೈಲು ಶಿಕ್ಷೆ ಹಾಗೂ 20 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.

ಪ್ರಕರಣದ ವಿವರದಂತೆ, ಅಫಜಲಪುರ ತಾಲೂಕಿನ ಕರಜಗಿ ನಾಡ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಡಾಟಾ ಎಂಟ್ರಿ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ ಶಿವಲಿಂಗಯ್ಯ ಬಸಯ್ಯ ಮಠ ಅವರ ವಿರುದ್ಧ ಸಾರ್ವಜನಿಕರಿಂದ ಹಣ ಪಡೆಯುತ್ತಾರೆ ಎಂಬ ದೂರುಗಳು ಬಂದಿದ್ದವು. ಈ ಕುರಿತು ತಮ್ಮ ವಿರುದ್ಧದ ಅರ್ಜಿಯನ್ನು ಬಗೆಹರಿಸಲು ಸಹಾಯ ಮಾಡುವಂತೆ ತಹಸೀಲ್ದಾರ್ ಶಶಿಕಲಾ ಪಾದಗಟ್ಟಿ ಅವರನ್ನು ವಿಚಾರಿಸಿದಾಗ, ಒಂದು ಲಕ್ಷ ರೂ. ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿತ್ತು.

ಲಂಚ ನೀಡದಿದ್ದರೆ ಕರ್ತವ್ಯ ನಿರ್ವಹಿಸುವ ಸ್ಥಳಕ್ಕೆ ಬೇರೆಯವರನ್ನು ನೇಮಕ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದರು ಎಂದು ಆರೋಪಿಸಿ ಶಿವಲಿಂಗಯ್ಯ ಅವರು 2017ರ ಆಗಸ್ಟ್ 31ರಂದು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.

ದೂರು ಆಧರಿಸಿ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದರು. ತನಿಖೆಯಲ್ಲಿ ತಹಸೀಲ್ದಾರ್ ಶಶಿಕಲಾ ಪಾದಗಟ್ಟಿ ಅವರು ಲಂಚದ ಹಣವನ್ನು ಶಿವಾನಂದ ಜಮಖಂಡಿ ಎಂಬುವವರ ಮೂಲಕ ಸ್ವೀಕರಿಸಲು ಸೂಚಿಸಿದ್ದರು ಎಂದು ಆರೋಪಪಟ್ಟಿಯಲ್ಲಿ ಉಲ್ಲೇಖಿಸಲಾಗಿತ್ತು. ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದರು.

ಪ್ರಕರಣದ ವಿಚಾರಣೆ ಕಲಬುರಗಿ ಪ್ರಧಾನ ಜಿಲ್ಲಾ ಮತ್ತು ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಜಿ.ಎಲ್. ಲಕ್ಷ್ಮೀನಾರಾಯಣ ಅವರ ಮುಂದೆ ನಡೆದಿದ್ದು, ಸಾಕ್ಷ್ಯಾಧಾರಗಳು ಹಾಗೂ ಎರಡೂ ಪಕ್ಷಗಳ ವಾದಗಳನ್ನು ಆಲಿಸಿದ ಬಳಿಕ ಆರೋಪಿಗಳು ತಪ್ಪಿತಸ್ಥರೆಂದು ತೀರ್ಪು ನೀಡಿದರು.

ತಹಸೀಲ್ದಾರ್ ಶಶಿಕಲಾ ಪಾದಗಟ್ಟಿ ಅವರಿಗೆ ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆಯ ಕಲಂ 7, 13(1)(ಡಿ) ಜೊತೆಗೆ 13(2) ಅಡಿಯಲ್ಲಿ ಹಾಗೂ ಶಿವಾನಂದ ಜಮಖಂಡಿ ಅವರಿಗೆ ಕಲಂ 8ರಡಿ ತಲಾ 4 ವರ್ಷ ಶಿಕ್ಷೆ ಮತ್ತು 20 ಸಾವಿರ ದಂಡ ವಿಧಿಸಿ 2026ರ ಜುಲೈ 8ರಂದು ತೀರ್ಪು ಪ್ರಕಟಿಸಲಾಯಿತು.

ಸರಕಾರದ ಪರವಾಗಿ ಲೋಕಾಯುಕ್ತ ವಿಶೇಷ ಸರಕಾರಿ ಅಭಿಯೋಜಕ ಅಶೋಕ ಎಸ್. ಚಾಂದಕವಠ ಅವರು ವಾದ ಮಂಡಿಸಿದರು. ಲೋಕಾಯುಕ್ತ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ಹಣಮಂತರಾಯ (ಎಚ್‌ಸಿ) ಹಾಗೂ ಗುಂಡುರಾವ್ (ಪಿಸಿ) ಅವರು ಸಾಕ್ಷಿದಾರರನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಲ್ಲಿ ಸಹಕರಿಸಿದರು.

LEAVE A REPLY

Please enter your comment!
Please enter your name here

Share post:

spot_imgspot_img

Popular

More like this
Related

ಕಲಬುರಗಿ| ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: ಜೆಸ್ಕಾಂ ಎಇಇ ಅಮೃತರಾವ್ ಯಲಾಲ್ ನಿವಾಸ ಮೇಲೆ ಲೋಕಾಯುಕ್ತ ದಾಳಿ

ಕಲಬುರಗಿ: ಆದಾಯ ಮೀರಿ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಾಯುಕ್ತ...

ಕಲಬುರಗಿ| ಗನ್‌ನಿಂದ ಗುಂಡು ಹಾರಿಸಿಕೊಂಡು ಸಿಎಆರ್ ಪೇದೆ ಆತ್ಮಹತ್ಯೆ

ಕಲಬುರಗಿ: ಕರ್ತವ್ಯ ನಿರತ ಸಿಎಆರ್ (ಸಶಸ್ತ್ರ ಮೀಸಲು ಪಡೆ) ಪೊಲೀಸ್ ಪೇದೆಯೊಬ್ಬರು...

ಕಲಬುರಗಿ: ಸಾರ್ವಜನಿಕರ ಅಹವಾಲು ಅಲಿಸಿದ‌ ಮುಖ್ಯಮಂತ್ರಿ ಡಿಕೆ ಶಿವಕುಮಾರ್ 

ಕಲಬುರಗಿ: ಕಲಬುರಗಿ‌ ವಿಭಾಗ ಮಟ್ಟದ ಬರ ಪರಿಸ್ಥಿತಿ ಅವಲೊಕಿಸಲು ಜಿಲ್ಲೆಗೆ ಅಗಮಿಸಿರುವ...

ಕಲಬುರಗಿ| “ರೈತರ ಸಾಲ ಮನ್ನಾ..”: ಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದೇನು?

ಕಲಬುರಗಿ: ರಾಜ್ಯದಲ್ಲಿ ಉಂಟಾಗಿರುವ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರ ಸಾಲ ಮನ್ನಾ...