ಕಲಬುರಗಿ| ರೌಡಿಶೀಟರ್ ಬಾಂಬೆ ಅಸ್ಲಂ ಗುಂಡಾ ಕಾಯ್ದೆಯಡಿ ಬಂಧನ

Date:

Share post:

ಕಲಬುರಗಿ: ನಗರದ ರಾಘವೇಂದ್ರ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿಶೀಟರ್ ಅಸ್ಲಂ ಪಟೇಲ್ ಅಲಿಯಾಸ್ ಬಾಂಬೆ ಅಸ್ಲಂ (32) ಎಂಬಾತನನ್ನು ಗುಂಡಾ ಕಾಯ್ದೆಯಡಿ ಬಂಧಿಸಿ, ಮೈಸೂರು ಕೇಂದ್ರ ಕಾರಾಗೃಹದಲ್ಲಿ ಇರಿಸಲು ಆದೇಶಿಸಲಾಗಿದೆ.

ಆರೋಪಿತನ ವಿರುದ್ಧ 2012ರಿಂದ 2026ರವರೆಗೆ ಕಲಬುರಗಿ ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಕೊಲೆ, ಕೊಲೆ ಯತ್ನ, ಹಲ್ಲೆ, ಜೀವ ಬೆದರಿಕೆ ಸೇರಿದಂತೆ ವಿವಿಧ ಆರೋಪಗಳಿಗೆ ಸಂಬಂಧಿಸಿದಂತೆ ಒಟ್ಟು 20 ಪ್ರಕರಣಗಳು ದಾಖಲಾಗಿವೆ. ಈತನನ್ನು ‘ಎ’ ರೌಡಿ ಎಂದು ಗುರುತಿಸಲಾಗಿದ್ದು, ರೌಡಿಶೀಟ್ ಚಾಲ್ತಿಯಲ್ಲಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

ಆರೋಪಿತನ ಕಾನೂನುಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ರಾಘವೇಂದ್ರ ನಗರ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್ ವಾಜೀದ್ ಪಟೇಲ್ ಸಲ್ಲಿಸಿದ ವರದಿಯ ಆಧಾರದ ಮೇಲೆ, ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ. ಅವರ ಪರಿಶೀಲನೆಯ ನಂತರ ಗುಂಡಾ ಕಾಯ್ದೆಯಡಿ ಬಂಧನಕ್ಕೆ ಆದೇಶಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಮೂವರು ಆರೋಪಿಗಳ ಬಂಧನ

5.50 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಬೆಳ್ಳಿ ವಸ್ತುಗಳು ಹಾಗೂ ಬೈಕ್...

ಕಲಬುರಗಿ| ನಾಲವಾರದ ಪೂಜ್ಯರ ಜನ್ಮದಿನದ ಅಂಗವಾಗಿ 155ಕ್ಕೂ ಹೆಚ್ಚು ಮಂದಿಗೆ ಉಚಿತ ಕ್ಷೌರ ಸೇವೆ

ಕಲಬುರಗಿ: ಚಿತ್ತಾಪುರ ತಾಲೂಕಿನ ನಾಲವಾರ ಗ್ರಾಮದ ಸದ್ಗುರು ಶ್ರೀ ಕೋರಿಸಿದ್ದೇಶ್ವರ ಮಠದ...

ಕಲಬುರಗಿ| ಸಾರಿಗೆ ಸಿಬ್ಬಂದಿಯ ಪ್ರಾಮಾಣಿಕತೆಗೆ ಸಾರ್ವಜನಿಕರಿಂದ ಭಾರೀ ಮೆಚ್ಚುಗೆ

ಕಲಬುರಗಿ: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಕರೊಬ್ಬರು ಮರೆತು ಬಿಟ್ಟುಹೋಗಿದ್ದ ಬೆಳ್ಳಿ ಹಾಗೂ ಬಂಗಾರದ...

Kalaburagi: ಮಕ್ಕಳ ಹೃದಯ ಕಾಯಿಲೆಗಳನ್ನು ಆರಂಭದಲ್ಲೇ ಪತ್ತೆಹಚ್ಚುವುದು ಅಗತ್ಯ: ಡಾ. ಶತಾಬ್ದಿ ಗಿರಿ

ಕಲಬುರಗಿ: ಮಕ್ಕಳ ಆರೋಗ್ಯಕರ ಬೆಳವಣಿಗೆ ಹಾಗೂ ವಿಕಾಸಕ್ಕೆ ಹೃದಯದ ಆರೋಗ್ಯ ಅತ್ಯಂತ...