ಕಲಬುರಗಿ| ಸಾರಿಗೆ ಸಿಬ್ಬಂದಿಯ ಪ್ರಾಮಾಣಿಕತೆಗೆ ಸಾರ್ವಜನಿಕರಿಂದ ಭಾರೀ ಮೆಚ್ಚುಗೆ

Date:

Share post:

ಕಲಬುರಗಿ: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಕರೊಬ್ಬರು ಮರೆತು ಬಿಟ್ಟುಹೋಗಿದ್ದ ಬೆಳ್ಳಿ ಹಾಗೂ ಬಂಗಾರದ ಆಭರಣಗಳನ್ನು ಸುರಕ್ಷಿತವಾಗಿ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಚಾಲಕ ಮತ್ತು ನಿರ್ವಾಹಕರು ಪ್ರಾಮಾಣಿಕತೆ ಮೆರೆದಿದ್ದಾರೆ.

ಅಫಜಲಪುರ ತಾಲೂಕಿನ ಅರ್ಜುಣಗಿ ಬಸ್ ನಿಲ್ದಾಣಕ್ಕೆ ಬಸ್ ತಲುಪಿದ ಸಂದರ್ಭದಲ್ಲಿ ಪ್ರಯಾಣಿಕರೊಬ್ಬರು ಬಸ್‌ನಲ್ಲಿಯೇ ಬಿಟ್ಟುಹೋಗಿದ್ದ ಬೆಳ್ಳಿ ಹಾಗೂ ಬಂಗಾರದ ಆಭರಣಗಳು ಸಿಬ್ಬಂದಿಯ ಗಮನಕ್ಕೆ ಬಂದಿವೆ. ತಕ್ಷಣ ಕಾರ್ಯಪ್ರವೃತ್ತರಾದ ಚಾಲಕ ಮತ್ತು ನಿರ್ವಾಹಕರು, ಗ್ರಾಮಸ್ಥರ ಸಮ್ಮುಖದಲ್ಲಿ ಆಭರಣಗಳನ್ನು ಪರಿಶೀಲಿಸಿ, ಸಂಬಂಧಪಟ್ಟ ವಾರಸುದಾರರನ್ನು ಪತ್ತೆಹಚ್ಚಿ ಅವುಗಳನ್ನು ಸುರಕ್ಷಿತವಾಗಿ ಹಸ್ತಾಂತರಿಸಿದ್ದಾರೆ.

ಪ್ರಾಮಾಣಿಕತೆ ಹಾಗೂ ಕರ್ತವ್ಯನಿಷ್ಠೆ ಮೆರೆದ ಸಾರಿಗೆ ಸಿಬ್ಬಂದಿಯಾದ ಚಾಲಕ ಮೌನೇಶ ಸುತಾರ ಮತ್ತು ನಿರ್ವಾಹಕ ಮಾಳಪ್ಪ ಪೂಜಾರಿ ಹಿಂಚಗೇರಾ ಅವರ ಕಾರ್ಯಕ್ಕೆ ಸಾರ್ವಜನಿಕರು ಹಾಗೂ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.

ಪ್ರಯಾಣಿಕರ ಅಮೂಲ್ಯ ವಸ್ತುಗಳನ್ನು ಸುರಕ್ಷಿತವಾಗಿ ಮರಳಿಸುವ ಮೂಲಕ ಸಾರಿಗೆ ಸಿಬ್ಬಂದಿ ಸಾರ್ವಜನಿಕರ ವಿಶ್ವಾಸಕ್ಕೆ ಪಾತ್ರರಾಗಿದ್ದಾರೆ. ಇಂತಹ ಪ್ರಾಮಾಣಿಕ ಕಾರ್ಯಗಳು ಸಮಾಜಕ್ಕೆ ಮಾದರಿಯಾಗಿವೆ ಎಂದು ಗ್ರಾಮಸ್ಥರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಈ ಸಂದರ್ಭದಲ್ಲಿ ಅರ್ಜುಣಗಿ ಗ್ರಾಮದ ಯುವ ಮುಖಂಡ ರಹಿಮಾನ ಮನಿಯಾರ ಉಪಸ್ಥಿತರಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ನಾಲವಾರದ ಪೂಜ್ಯರ ಜನ್ಮದಿನದ ಅಂಗವಾಗಿ 155ಕ್ಕೂ ಹೆಚ್ಚು ಮಂದಿಗೆ ಉಚಿತ ಕ್ಷೌರ ಸೇವೆ

ಕಲಬುರಗಿ: ಚಿತ್ತಾಪುರ ತಾಲೂಕಿನ ನಾಲವಾರ ಗ್ರಾಮದ ಸದ್ಗುರು ಶ್ರೀ ಕೋರಿಸಿದ್ದೇಶ್ವರ ಮಠದ...

ಕಲಬುರಗಿ| ರೌಡಿಶೀಟರ್ ಬಾಂಬೆ ಅಸ್ಲಂ ಗುಂಡಾ ಕಾಯ್ದೆಯಡಿ ಬಂಧನ

ಕಲಬುರಗಿ: ನಗರದ ರಾಘವೇಂದ್ರ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿಶೀಟರ್ ಅಸ್ಲಂ...

Kalaburagi: ಮಕ್ಕಳ ಹೃದಯ ಕಾಯಿಲೆಗಳನ್ನು ಆರಂಭದಲ್ಲೇ ಪತ್ತೆಹಚ್ಚುವುದು ಅಗತ್ಯ: ಡಾ. ಶತಾಬ್ದಿ ಗಿರಿ

ಕಲಬುರಗಿ: ಮಕ್ಕಳ ಆರೋಗ್ಯಕರ ಬೆಳವಣಿಗೆ ಹಾಗೂ ವಿಕಾಸಕ್ಕೆ ಹೃದಯದ ಆರೋಗ್ಯ ಅತ್ಯಂತ...

ಕಲಬುರಗಿ| ಚಂದ್ರಂಪಳ್ಳಿ ಜಲಾಶಯದಿಂದ ಕಾಲುವೆಗಳಿಗೆ ನೀರು ಹರಿಸಲು ರೈತರ ಮನವಿ

ಕಲಬುರಗಿ: ಚಂದ್ರಂಪಳ್ಳಿ ಜಲಾಶಯದಲ್ಲಿ ಸಂಗ್ರಹವಾಗಿರುವ ನೀರನ್ನು ಎಡ ಮತ್ತು ಬಲದಂಡೆ ಕಾಲುವೆಗಳ...