ಕಲಬುರಗಿ| ನಾಲವಾರದ ಪೂಜ್ಯರ ಜನ್ಮದಿನದ ಅಂಗವಾಗಿ 155ಕ್ಕೂ ಹೆಚ್ಚು ಮಂದಿಗೆ ಉಚಿತ ಕ್ಷೌರ ಸೇವೆ

Date:

Share post:

ಕಲಬುರಗಿ: ಚಿತ್ತಾಪುರ ತಾಲೂಕಿನ ನಾಲವಾರ ಗ್ರಾಮದ ಸದ್ಗುರು ಶ್ರೀ ಕೋರಿಸಿದ್ದೇಶ್ವರ ಮಠದ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ಷ.ಬ್ರ. ಡಾ. ಸಿದ್ಧ ತೋಟೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳ 62ನೇ ಜನ್ಮದಿನದ ಅಂಗವಾಗಿ ಕಲಬುರಗಿ ನಗರದ ಬಿದ್ದಾಪುರ ಕಾಲೋನಿಯಲ್ಲಿರುವ ಅನಾಥ ಮತ್ತು ನಿರ್ಗತಿಕರ ಕೇಂದ್ರದಲ್ಲಿ 155ಕ್ಕೂ ಹೆಚ್ಚು ಅನಾಥರು ಹಾಗೂ ಬೌದ್ಧಿಕ ವಿಕಲಚೇತನರಿಗೆ ಉಚಿತ ಕ್ಷೌರ ಸೇವೆ ಸಲ್ಲಿಸಲಾಯಿತು.

ಜಿಲ್ಲಾ ಹಡಪದ ಅಪ್ಪಣ್ಣ ಸಮಾಜದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಹಾಗೂ ಸಮಾಜಸೇವಕ ಮಲ್ಲಿಕಾರ್ಜುನ ಬಿ. ಹಡಪದ ಸುಗೂರ ಎನ್. ಅವರು ಕಳೆದ 18 ವರ್ಷಗಳಿಂದ ಪೂಜ್ಯರ ಜನ್ಮದಿನದ ಅಂಗವಾಗಿ ವಿಭಿನ್ನ ಸಮಾಜಮುಖಿ ಕಾರ್ಯಗಳನ್ನು ನಡೆಸಿಕೊಂಡು ಬರುತ್ತಿದ್ದಾರೆ. ಅದರಂತೆ ಈ ವರ್ಷವೂ ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ಉಚಿತ ಕ್ಷೌರ ಸೇವೆ ಸಲ್ಲಿಸುವ ಮೂಲಕ ಮಾನವೀಯತೆ ಮೆರೆದರು.

ಈ ಸಂದರ್ಭದಲ್ಲಿ ಮಾತನಾಡಿದ ಪರಮಪೂಜ್ಯ ಶ್ರೀ ರಾಜಶಿವಯೋಗಿ ಮಹಾಸ್ವಾಮಿಗಳು, “ಪೂಜ್ಯರ ಜನ್ಮದಿನದಂದು ಅನಾಥರು ಹಾಗೂ ಬೌದ್ಧಿಕ ವಿಕಲಚೇತನರಿಗೆ ಉಚಿತ ಕ್ಷೌರ ಸೇವೆ ಸಲ್ಲಿಸುವ ಮೂಲಕ ಮಲ್ಲಿಕಾರ್ಜುನ ಬಿ. ಹಡಪದ ಸುಗೂರ ಎನ್. ಅವರು ನಿಸ್ವಾರ್ಥ ಸಮಾಜಸೇವೆ ಮಾಡುತ್ತಿದ್ದಾರೆ. ಇಂತಹ ಸೇವಾ ಕಾರ್ಯಗಳು ಸಮಾಜಕ್ಕೆ ಮಾದರಿಯಾಗಿವೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ನಾಗಲಿಂಗಯ್ಯ ಹಿರೇಮಠ ಮಹಾಸ್ವಾಮಿಗಳು ಹಾಗೂ ವೀರಶೈವ ಸಮಾಜದ ಮುಖಂಡರು ಮಾತನಾಡಿ, “ಬಡ ಕುಟುಂಬದಲ್ಲಿ ಹುಟ್ಟಿ, ಬಡವರು ಹಾಗೂ ಅನಾಥರ ಸೇವೆಗೆ ತಮ್ಮನ್ನು ಸಮರ್ಪಿಸಿಕೊಂಡಿರುವ ಮಲ್ಲಿಕಾರ್ಜುನ ಬಿ. ಹಡಪದ ಸುಗೂರ ಎನ್. ಅವರ ಕಾರ್ಯ ಶ್ಲಾಘನೀಯ. ಅವರೊಂದಿಗೆ ಸೇವೆಯಲ್ಲಿ ತೊಡಗಿಸಿಕೊಂಡಿರುವ ಎಲ್ಲ ಕಾಯಕ ಬಂಧುಗಳ ಮೇಲೂ ಮಹಾಗುರುವಿನ ಆಶೀರ್ವಾದ ಸದಾ ಇರಲಿ” ಎಂದು ಹಾರೈಸಿದರು.

 

ಕಲಬುರಗಿ ಜಿಲ್ಲಾ ಹಡಪದ ಅಪ್ಪಣ್ಣ ಸಮಾಜದ ಜಿಲ್ಲಾಧ್ಯಕ್ಷ ಈರಣ್ಣ ಸಿ. ಹಡಪದ ಸಣ್ಣೂರ ಮಾತನಾಡಿ, “ನಮ್ಮ ಸಮಾಜದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಹಾಗೂ ಸಮಾಜಸೇವಕ ಮಲ್ಲಿಕಾರ್ಜುನ ಬಿ. ಹಡಪದ ಸುಗೂರ ಎನ್. ಅವರು ಪರಮಪೂಜ್ಯ ಶ್ರೀ ಷ.ಬ್ರ. ಡಾ. ಸಿದ್ಧ ತೋಟೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳ ಜನ್ಮದಿನದ ಅಂಗವಾಗಿ ವಿವಿಧೆಡೆ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಮೆಚ್ಚುವಂತಹ ಕಾರ್ಯವಾಗಿದೆ. ಮುಂದೆಯೂ ಇಂತಹ ಹತ್ತು ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಿ ಸಮಾಜದ ಕೀರ್ತಿಯನ್ನು ಮತ್ತಷ್ಟು ಹೆಚ್ಚಿಸಲಿ. ಗುರುವಿನ ಆಶೀರ್ವಾದ ಅವರ ಕುಟುಂಬದವರು ಹಾಗೂ ಅವರೊಂದಿಗೆ ಸೇವೆ ಸಲ್ಲಿಸುತ್ತಿರುವ ಕಾಯಕ ಸಮಾಜದ ಬಂಧುಗಳ ಮೇಲೆ ಸದಾ ಇರಲಿ” ಎಂದು ಹಾರೈಸಿದರು.

 

ಕಾರ್ಯಕ್ರಮದಲ್ಲಿ ನಿರ್ಗತಿಕರ ಕೇಂದ್ರದ ವೀರೇಶ ಸರ್, ಕಲಬುರಗಿ ಜಿಲ್ಲಾ ಹಡಪದ ಅಪ್ಪಣ್ಣ ಸಮಾಜದ ಗೌರವಾಧ್ಯಕ್ಷ ಬಸವರಾಜ ಹಡಪದ ಸುಗೂರ ಎನ್., ಜಿಲ್ಲಾ ಕಾರ್ಯಾಧ್ಯಕ್ಷ ಭಗವಂತ ಶಿಕ್ಷಕರು ಕಿರಣಗಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಮೇಶ ನೀಲೂರ, ರಾಜ್ಯದ ಮಾಜಿ ಸಂಘಟನಾ ಕಾರ್ಯದರ್ಶಿ ಬಸವರಾಜ ಹಡಪದ ಶಹಾಬಾದ, ಜಿಲ್ಲಾ ಸಹಕಾರ್ಯದರ್ಶಿ ಮಹಾದೇವ ರಾವೂರ, ಕಲಬುರಗಿ ತಾಲೂಕು ಅಧ್ಯಕ್ಷ ಚಂದ್ರಶೇಖರ ತೋನಸನಹಳ್ಳಿ, ಪ್ರಧಾನ ಕಾರ್ಯದರ್ಶಿ ವಿನೋದ ಅಂಬಲಗಾ, ನಾಲವಾರ ಕಸಾಪ ಅಧ್ಯಕ್ಷ ಅಂಜುನಾಥ ಎಸ್. ನಾಯ್ಕಲ್, ಶಂಭುಲಿಂಗ ಹಡಪದ ಯಲಗೋಡ, ವಿಶ್ವನಾಥ ಹಡಪದ ಸುಗೂರ ಎನ್., ಮಲ್ಲಿಕಾರ್ಜುನ ಬೆಳಗುಪ್ಪಿ, ಶಂಕರ ಹಡಪದ ಹರವಾಳ ಸೇರಿದಂತೆ ನಿರ್ಗತಿಕರ ಕೇಂದ್ರದ ಸಿಬ್ಬಂದಿ ಉಪಸ್ಥಿತರಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಜಿಲ್ಲೆಯಾದ್ಯಂತ ಸಂಭ್ರಮದ ರಾಜ್ಯೋತ್ಸವ ಆಚರಣೆಗೆ ನಿರ್ಧಾರ: ಜಿಲ್ಲಾಧಿಕಾರಿ ಇಕ್ರಮ್ ಶರೀಫ್

ಕಲಬುರಗಿ: ಮುಂಬರುವ ನವೆಂಬರ್ 1 ರಂದು ಜಿಲ್ಲೆಯಾದ್ಯಂತ ಕರ್ನಾಟಕ ರಾಜ್ಯೋತ್ಸವವನ್ನು ಅತ್ಯಂತ...

ಕಲಬುರಗಿ| ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಮೂವರು ಆರೋಪಿಗಳ ಬಂಧನ

5.50 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಬೆಳ್ಳಿ ವಸ್ತುಗಳು ಹಾಗೂ ಬೈಕ್...

ಕಲಬುರಗಿ| ಸಾರಿಗೆ ಸಿಬ್ಬಂದಿಯ ಪ್ರಾಮಾಣಿಕತೆಗೆ ಸಾರ್ವಜನಿಕರಿಂದ ಭಾರೀ ಮೆಚ್ಚುಗೆ

ಕಲಬುರಗಿ: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಕರೊಬ್ಬರು ಮರೆತು ಬಿಟ್ಟುಹೋಗಿದ್ದ ಬೆಳ್ಳಿ ಹಾಗೂ ಬಂಗಾರದ...

ಕಲಬುರಗಿ| ರೌಡಿಶೀಟರ್ ಬಾಂಬೆ ಅಸ್ಲಂ ಗುಂಡಾ ಕಾಯ್ದೆಯಡಿ ಬಂಧನ

ಕಲಬುರಗಿ: ನಗರದ ರಾಘವೇಂದ್ರ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿಶೀಟರ್ ಅಸ್ಲಂ...