ಕಲಬುರಗಿ| ಜಿಲ್ಲೆಯಾದ್ಯಂತ ಸಂಭ್ರಮದ ರಾಜ್ಯೋತ್ಸವ ಆಚರಣೆಗೆ ನಿರ್ಧಾರ: ಜಿಲ್ಲಾಧಿಕಾರಿ ಇಕ್ರಮ್ ಶರೀಫ್

Date:

ಕಲಬುರಗಿ: ಮುಂಬರುವ ನವೆಂಬರ್ 1 ರಂದು ಜಿಲ್ಲೆಯಾದ್ಯಂತ ಕರ್ನಾಟಕ ರಾಜ್ಯೋತ್ಸವವನ್ನು ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ತಿಳಿಸಿದ್ದಾರೆ.

ಗುರುವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರತಿ ವರ್ಷದಂತೆ ಈ ಬಾರಿಯೂ ನವೆಂಬರ್ 1 ರಂದ ಬೆಳಿಗ್ಗೆ 9 ಗಂಟೆಗೆ ಗಂಜ್‌ ಪ್ರದೇಶದ ನಗರೇಶ್ವರ ಶಾಲಾ ಮೈದಾನದಲ್ಲಿ ನಾಡ‌ದೇವತೆ ಶ್ರೀ ಭುವನೇಶ್ವರಿ ದೇವಿಯ ಪೂಜೆಯೊಂದಿಗೆ ಕಾರ್ಯಕ್ರಮ ಆರಂಭವಾಗಲಿದೆ.

 

ಶಿಷ್ಠಚಾರದಂತೆ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರೆವೇರಿಸಿ ರಾಜ್ಯೋತ್ಸವ ಸಂದೇಶ ನೀಡಲಿದ್ದಾರೆ. ಕಾರ್ಯಕ್ರಮ ವ್ಯವಸ್ಥಿತವಾಗಿ ಸಂಘಟಿಸಬೇಕು. ಕಾರ್ಯಕ್ರಮ‌ ಯಶಸ್ಸಿಗೆ ವಿವಿಧ ಸಮಿತಿಗಳನ್ನು ರಚಿಸಿ ಅಧಿಕಾರಿಗಳಿಗೆ ಜವಾಬ್ದಾರಿ ನೀಡಲಾಗುತ್ತದೆ. ಅಧಿಕಾರಿಗಳು ತಮಗೆ ನೀಡಲಾದ ಜವಾಬ್ದಾರಿಯನ್ನು ಯಾವುದೇ ಲೋಪವಿಲ್ಲದೆ ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ಹೇಳಿದರು.

 

ನಗರೇಶ್ವರ ಶಾಲಾ ಆವರಣ ಸಂಪೂರ್ಣ ಸ್ವಚ್ಛತಾ ಕಾರ್ಯ ಕೈಗೊಳ್ಳಬೇಕು. ಶಾಲಾ-ಕಾಲೇಜು ಮಕ್ಕಳು ಆಗಮಿಸುವುದರಿಂದ ಶ್ಯಾಮಿಯಾನ ಹಾಕಬೇಕು. ಕುಡಿಯುವ ನೀರಿನ ವ್ಯವಸ್ಥೆ, ಆಸನದ ವ್ಯವಸ್ಥೆ ಮಾಡಬೇಕು. ನಗರೇಶ್ವರ ಶಾಲೆಯಿಂದ ರಂಗಮಂದಿರ ವರೆಗೆ ಮೆರವಣಿಗೆ ಸಾಗಲಿರುವುದರಿಂದ ಸಾರ್ವಜನಿಕರಿಗೆ ಯಾವುದೇ ಸಂಚಾರ ದಟ್ಟಣೆಯಾಗದಂತೆ ಸೂಕ್ತ ಟ್ರಾಫಿಕ್ ಮ್ಯಾನೇಜ್‍ಮೆಂಟ್ ಮಾಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಡಿ.ಸಿ. ನಿರ್ದೇಶಿಸಿದರು.

 

ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಶಾಲಾ ಮಕ್ಕಳು ಹಾಗೂ ಸಾರ್ವಜನಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ತುರ್ತು ಪರಿಸ್ಥಿತಿ ಎದುರಿಸಲು ಆರೋಗ್ಯ ಇಲಾಖೆಯ ಸಿಬ್ಬಂದಿ, ಆಂಬುಲೆನ್ಸ್ ಹಾಗೂ ಅಗ್ನಿಶಾಮಕ ವಾಹನಗಳನ್ನು ಸಿದ್ಧ ಸ್ಥಿತಿಯಲ್ಲಿಡಲು ಸೂಚಿಸಲಾಯಿತು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಡಿ.ಸಿ.ಪಿ ಶಾಲು, ಹೆಚ್ಚುವರಿ ಪೊಲೀಸ ವರಿಷ್ಠಾಧಿಕಾರಿ ಮಹೇಶ ಮೇಘಣ್ಣನವರ್, ಕಲಬುರಗಿ ಉಪ ವಿಭಾಗದ ಸಹಾಯಕ ಆಯುಕ್ತರಾದ ರಿತಿಕಾ ವರ್ಮಾ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Share post:

spot_imgspot_img

Popular

More like this
Related

ಕಲಬುರಗಿ| ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಮೂವರು ಆರೋಪಿಗಳ ಬಂಧನ

5.50 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಬೆಳ್ಳಿ ವಸ್ತುಗಳು ಹಾಗೂ ಬೈಕ್...

ಕಲಬುರಗಿ| ನಾಲವಾರದ ಪೂಜ್ಯರ ಜನ್ಮದಿನದ ಅಂಗವಾಗಿ 155ಕ್ಕೂ ಹೆಚ್ಚು ಮಂದಿಗೆ ಉಚಿತ ಕ್ಷೌರ ಸೇವೆ

ಕಲಬುರಗಿ: ಚಿತ್ತಾಪುರ ತಾಲೂಕಿನ ನಾಲವಾರ ಗ್ರಾಮದ ಸದ್ಗುರು ಶ್ರೀ ಕೋರಿಸಿದ್ದೇಶ್ವರ ಮಠದ...

ಕಲಬುರಗಿ| ಸಾರಿಗೆ ಸಿಬ್ಬಂದಿಯ ಪ್ರಾಮಾಣಿಕತೆಗೆ ಸಾರ್ವಜನಿಕರಿಂದ ಭಾರೀ ಮೆಚ್ಚುಗೆ

ಕಲಬುರಗಿ: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಕರೊಬ್ಬರು ಮರೆತು ಬಿಟ್ಟುಹೋಗಿದ್ದ ಬೆಳ್ಳಿ ಹಾಗೂ ಬಂಗಾರದ...

ಕಲಬುರಗಿ| ರೌಡಿಶೀಟರ್ ಬಾಂಬೆ ಅಸ್ಲಂ ಗುಂಡಾ ಕಾಯ್ದೆಯಡಿ ಬಂಧನ

ಕಲಬುರಗಿ: ನಗರದ ರಾಘವೇಂದ್ರ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿಶೀಟರ್ ಅಸ್ಲಂ...