ಕಲಬುರಗಿ| ಟಿಕೆಟ್ ಇಲ್ಲದೆ ಪ್ರಯಾಣಿಸಿದವರಿಂದ 10.14 ಲಕ್ಷ ರೂ. ದಂಡ ವಸೂಲಿ

Date:

Share post:

ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ (ಕೆಕೆಆರ್‌ಟಿಸಿ) ತನಿಖಾ ತಂಡಗಳು ನಡೆಸಿದ ವಿಶೇಷ ತಪಾಸಣಾ ಕಾರ್ಯಾಚರಣೆಯಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ 4,344 ಪ್ರಯಾಣಿಕರಿಂದ ಒಟ್ಟು ₹10,14,614 ದಂಡ ವಸೂಲಿ ಮಾಡಲಾಗಿದೆ ಎಂದು ನಿಗಮದ ಕಲಬುರಗಿ ಕೇಂದ್ರ ಕಚೇರಿಯ ಮುಖ್ಯ ಸಂಚಾರ ವ್ಯವಸ್ಥಾಪಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಗಮದ ಆದಾಯ ಸೋರಿಕೆಯನ್ನು ತಡೆಗಟ್ಟುವ ಉದ್ದೇಶದಿಂದ 2026ರ ಜುಲೈನಿಂದ ಅಕ್ಟೋಬರ್‌ವರೆಗೆ ತನಿಖಾ ತಂಡಗಳು ವಿಶೇಷ ತಪಾಸಣಾ ಕಾರ್ಯಾಚರಣೆ ನಡೆಸಿವೆ. ಈ ಅವಧಿಯಲ್ಲಿ ರಾಜ್ಯ ಹಾಗೂ ನೆರೆಯ ರಾಜ್ಯಗಳಲ್ಲಿ ಸಂಚರಿಸುವ ನಿಗಮದ ವ್ಯಾಪ್ತಿಯ ಒಟ್ಟು 66,762 ಬಸ್‌ಗಳನ್ನು ತಪಾಸಣೆ ಮಾಡಲಾಗಿದೆ.

ತಪಾಸಣೆಯ ಸಂದರ್ಭದಲ್ಲಿ ಒಟ್ಟು 5,459 ಪ್ರಕರಣಗಳನ್ನು ಪತ್ತೆಹಚ್ಚಲಾಗಿದ್ದು, ನಿಗಮದ ಆದಾಯ ಸೋರಿಕೆಯಾಗುತ್ತಿದ್ದ ₹2,52,335 ಮೊತ್ತವನ್ನು ಪತ್ತೆಹಚ್ಚಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪ್ರಯಾಣಿಕರು ದಂಡಕ್ಕೆ ಒಳಗಾಗುವುದನ್ನು ತಪ್ಪಿಸಲು ಬಸ್‌ಗಳಲ್ಲಿ ಪ್ರಯಾಣಿಸುವಾಗ ಕಡ್ಡಾಯವಾಗಿ ಸರಿಯಾದ ಟಿಕೆಟ್ ಅಥವಾ ಪಾಸ್ ಪಡೆದುಕೊಳ್ಳಬೇಕು ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮವು ಮನವಿ ಮಾಡಿದೆ.

Share post:

spot_imgspot_img

Popular

More like this
Related

ಕಲಬುರಗಿ| ಚಿಂಚೋಳಿ‌ ಭಾಗದ ಕಬ್ಬು ನುರಿಸಲು ಎನ್.ಎಸ್.ಎಲ್, ರೇಣುಕಾ‌ ಶುಗರ್ಸ್, ಕೆ.ಪಿ.ಆರ್ ಕಾರ್ಖಾನೆಗೆ ಹಂಚಿಕೆ ಮಾಡಿ ಡಿ.ಸಿ. ಆದೇಶ

ಕಲಬುರಗಿ: ಜಿಲ್ಲೆಯ ಚಿಂಚೋಳಿ ಸಿದ್ದಸಿರಿ ಸಕ್ಕರೆ ಕಾರ್ಖಾನೆಯು ಪ್ರಸಕ್ತ 2026-27ನೇ ಸಾಲಿಗೆ...

ಕಲಬುರಗಿ| ಬೆಳೆ ವಿಮೆ ಮಧ್ಯಂತರ ಪರಿಹಾರ: 375 ಕೋಟಿ ರೂ. ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ: ಇಕ್ರಮ್ ಶರೀಫ್

ಕಲಬುರಗಿ: ಪ್ರಸಕ್ತ 2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಮಳೆ ಕೈಕೊಟ್ಟು ಬರಗಾಲ...

ಕಲಬುರಗಿ| ಬೆಂಬಲ ಬೆಲೆ ಯೋಜನೆಯಡಿ ಉದ್ದಿನ ಕಾಳು ಖರೀದಿಗೆ ನಿರ್ಧಾರ: ಡಿ.ಸಿ ಮಾಹಿತಿ

ಕಲಬುರಗಿ: ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ 2026-27ನೇ ಸಾಲಿನ ಮುಂಗಾರು...