ಕಲಬುರಗಿ| ನ.28 ರಂದು ಜಿಲ್ಲೆಯಾದ್ಯಂತ ಹೋಬಳಿ ಮಟ್ಟದ ‘ಪ್ರಜಾ ಸೇವೆ’ ಸಭೆ: ಡಿ.ಸಿ ಇಕ್ರಮ್ ಶರೀಫ್

Date:

ಕಲಬುರಗಿ: ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸುವ ಪ್ರಜಾ ಸೇವಾ ಆಂದೋಲನ ಅಂಗವಾಗಿ ಕಲಬುರಗಿ ಜಿಲ್ಲೆಯಾದ್ಯಂತ ಇದೇ ನವೆಂಬರ್ 28 ಶನಿವಾರದಂದು ಆಯಾ ವಿಧಾನಸಭಾ ಕ್ಷೇತ್ರದ ಶಾಸಕರ‌ ಅಧ್ಯಕ್ಷತೆ ಮತ್ತು ತಾಲೂಕು ಮಟ್ಟದ ಅಧಿಕಾರಿಗಳ ಉಪಸ್ಥಿತಿಯಲ್ಲಿ ಹೋಬಳಿ ಮಟ್ಟದ ಪ್ರಜಾ ಸೇವೆ ಸಭೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ತಿಳಿಸಿದ್ದಾರೆ.

ಪ್ರಜಾ ಸೇವೆ ಸಭೆ ಸ್ಥಳದಲ್ಲಿ ಅರ್ಜಿ ಸಲ್ಲಿಸಲು ಕೌಂಟರ್‌ಗಳ ವ್ಯವಸ್ಥೆ ಮಾಡಲಾಗಿರುತ್ತದೆ. ಇಲ್ಲಿ ಪಂಚಾಯತಿವಾರು ಮತ್ತು ಇಲಾಖಾವಾರು ಕೌಂಟರ್ ಇರಲಿದ್ದು, ಸಾರ್ವಜನಿಕರು ತಮಗೆ ಬೇಕಾದ ಸೇವೆ ಅಥವಾ ಅಹವಾಲುಗಳಿಗೆ ಸಂಬಂಧಿಸಿದಂತೆ ಕೌಂಟರ್‌ ಗಳಿಗೆ ಭೇಟಿ ನೀಡಿ ಲಭ್ಯವಿರುವ ನಮೂನೆ-3 ಅನ್ನು ಪಡೆದುಕೊಂಡು ಭರ್ತಿ ಮಾಡಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ನಂತರ ಕಡ್ಡಾಯವಾಗಿ ‘ನಮೂನೆ-05’ ರಲ್ಲಿ ಸ್ವೀಕೃತಿ ರಸೀದಿಯನ್ನು ಪಡೆದುಕೊಳ್ಳಬೇಕು ಎಂದಿದ್ದಾರೆ.

ಮನೆ ಬಾಗಿಲಿಗೆ ಆಡಳಿತ ತೆಗೆದುಕೊಂಡು ಹೋಗಬೇಕೆಂಬ ಉದ್ದೇಶದಿಂದ ಸರ್ಕಾರದ ಪ್ರಜಾ ಸೇವೆ ಸಭೆ ನಡೆಸುತ್ತಿದ್ದು, ಸಾರ್ವಜನಿಕರು ಹಾಗೂ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಸಭೆಯಲ್ಲಿ ಭಾಗವಹಿಸಿ ತಮ್ಮ ಸಮಸ್ಯೆ, ಕುಂದುಕೊರತೆಗಳಿಗೆ ಪರಿಹಾರ ಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ಮನವಿ ಮಾಡಿಕೊಂಡಿದ್ದಾರೆ.

ಎಲ್ಲಿ ಮತ್ತು ಯಾವಾಗ ಸಭೆ?:

ನವೆಂಬರ್ 28 ರಂದು ಅಫಜಲಪೂರ ತಾಲೂಕಿನ ತೆಲ್ಲೂರ ಗ್ರಾಮದ ಕಾಶಿಲಿಂಗೇಶ್ವರ ದೇವಸ್ಥಾನದಲ್ಲಿ ಬೆಳಿಗ್ಗೆ 10.30 ಗಂಟೆಗೆ, ಆಳಂದ ತಾಲೂಕಿನ‌ ಬೋಧನ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಬೆಳಿಗ್ಗೆ 11 ಗಂಟೆಗೆ, ಚಿಂಚೋಳಿ ತಾಲೂಕಿನ ಸಾಲೆಬೀರನಳ್ಳಿ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಬೆಳಿಗ್ಗೆ 11 ಗಂಟೆಗೆ, ಚಿತ್ತಾಪುರ ತಾಲೂಕಿನ ಕಡಬೂರ ಗ್ರಾಮದ ಶ್ರೀ ಈಶ್ವರ ದೇವಸ್ಥಾನದಲ್ಲಿ ಬೆಳಿಗ್ಗೆ 10 ಗಂಟೆಗೆ, ಜೇವರ್ಗಿ ತಾಲೂಕಿನ ರಂಜಣಗಿ ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆ‌ ಆವರಣದಲ್ಲಿ ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.

ಅದೇ ರೀತಿ ಕಲಬುರಗಿ ತಾಲೂಕಿನ ಆಲಗೋಡ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನ ಆವರಣದಲ್ಲಿ ಬೆಳಿಗ್ಗೆ 10 ಗಂಟೆಗೆ, ಕಾಳಗಿ ತಾಲೂಕಿನ ಮಾಡಬೂಳ ಗ್ರಾಮ ಪಂಚಾಯತ್ ಕಚೇರಿ ಆವರಣದಲ್ಲಿ ಬೆಳಿಗ್ಗೆ 11 ಗಂಟೆಗೆ, ಕಮಲಾಪೂರ ತಾಲೂಕಿನ ನಾಗೂರ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಬೆಳಿಗ್ಗೆ 11 ಗಂಟೆಗೆ, ಸೇಡಂ ತಾಲೂಕಿನ ಮೇದಕ ಗ್ರಾಮ ಪಂಚಾಯತ್ ಆವರಣದಲ್ಲಿ ಬೆಳಿಗ್ಗೆ 11 ಗಂಟೆಗೆ, ಶಹಾಬಾದ ತಾಲೂಕಿನ ಭಂಕೂರ ಗ್ರಾಮದ‌ ಮಾದರಿ ಪ್ರಾಥಮಿಕ ಶಾಲೆ‌ ಆವರಣದಲ್ಲಿ ಬೆಳಿಗ್ಗೆ 10 ಗಂಟೆಗೆ ಹಾಗೂ ಯಡ್ರಾಮಿ ತಾಲೂಕಿನ ಕರಕಿಹಳ್ಳಿ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಬೆಳಿಗ್ಗೆ 11 ಗಂಟೆಗೆ ಪ್ರಜಾ ಸೇವೆ ಸಭೆ ನಡೆಯಲಿವೆ.

LEAVE A REPLY

Please enter your comment!
Please enter your name here

Share post:

spot_imgspot_img

Popular

More like this
Related

ಕಲಬುರಗಿ| ಕಾಂಗ್ರೆಸ್ ಅರಾಜಕತೆ ಸೃಷ್ಟಿಸಿ ಅಧಿಕಾರಕ್ಕೆ ಬರುವ ಕನಸು ಕಾಣುತ್ತಿದೆ: ರಾಜನಾಥ್ ಸಿಂಗ್ ಕಿಡಿ

ಕಲಬುರಗಿ: ಕಾಂಗ್ರೆಸ್ ಪಕ್ಷ ಅರಾಜಕತೆ ಸೃಷ್ಟಿಸುವ ಮೂಲಕ ಅಧಿಕಾರಕ್ಕೆ ಮರಳುವ ಪ್ರಯತ್ನ...

ಕಲಬುರಗಿ| ಹಿರಾಪೂರ ಸರ್ಕಲ್‌ನಲ್ಲಿ ಸಂವಿಧಾನ ಸಮರ್ಪಣಾ ದಿನಾಚರಣೆ; 750ಕ್ಕೂ ಹೆಚ್ಚು ಶಾಲಾ ವಿದ್ಯಾರ್ಥಿಗಳಿಂದ ಸಂವಿಧಾನದ ಪ್ರಸ್ತಾವನೆ ವಾಚನ

ಕಲಬುರಗಿ: ನಗರದ ಹಿರಾಪೂರ ಸರ್ಕಲ್‌ನಲ್ಲಿ ಸಂವಿಧಾನ ಸಮರ್ಪಣಾ ದಿನಾಚರಣೆಯ ಅಂಗವಾಗಿ ಸಂವಿಧಾನದ...

ಕಲಬುರಗಿ| 5 ಕೋಟಿ ರೂ.ವೆಚ್ಚದ ಮಾಡಿಯಾಳ-ದೇವಂತಗಿ ರಸ್ತೆ ಕಾಮಗಾರಿಗೆ ಶಾಸಕ ಬಿ.ಆರ್.ಪಾಟೀಲ್ ಚಾಲನೆ

ಕಲಬುರಗಿ: ಸಾರ್ವಜನಿಕ ಕೇಲಸ ನಿರ್ಮಾಣ ಮಾಡುವಾಗ ಯಾವುದೇ ಗುತ್ತಿಗೇದಾರರು ಜನಹಿತ ಗಮನದಲಿರಿಸಿ...

ಕಲಬುರಗಿ| ಶರಣಬಸವ ವಿವಿ ಕ್ರೀಡಾಕೂಟ: ಸೋಮೇಶ್ವರ, ರಮ್ಯಾ ಅತ್ಯಂತ ವೇಗದ ಓಟಗಾರರು

ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದ ನಾಲ್ಕು ದಿನಗಳ ವಾರ್ಷಿಕ ಕ್ರೀಡಾಕೂಟದ 100 ಮೀಟರ್...