ಭಾರತ ಚುನಾವಣಾ ಆಯೋಗ ಅತ್ಯುತ್ತಮ ಚುನಾವಣಾ ಅಭ್ಯಾಸಗಳನ ಪ್ರೋತ್ಸಾಹಿಸಲು ಪ್ರತಿ ವರ್ಷ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ನೀಡುವ ರಾಷ್ಟ್ರಮಟ್ಟದ ಪ್ರಶಸ್ತಿಗೆ ರಾಜ್ಯದ ಇಬ್ಬರು ಅಧಿಕಾರಿಗಳು ಭಾಜನರಾಗಿದ್ದಾರೆ.
2023ನೇ ಸಾಲಿನ ರಾಷ್ಟ್ರಮಟ್ಟದ ಪ್ರಶಸ್ತಿಗಳಿಗೆ ಸಾಮಾನ್ಯ ಪ್ರಶಸ್ತಿ ವರ್ಗದಡಿಯಲ್ಲಿ ಚಿತ್ರದುರ್ಗ ಜಿಲ್ಲಾಧಿಕಾರಿ ದಿವ್ಯಾ ಪ್ರಭು ಜಿ.ಆರ್.ಜೆ. & ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಸರ್ಕಾರಿ ಇಲಾಖೆ ಅಥವಾ ಸಂಸ್ಥೆಗಳಿಗೆ ನೀಡುವ ಪ್ರಶಸ್ತಿಗೆ ವಾಣಿಜ್ಯ ತೆರಿಗೆ ಇಲಾಖೆಯ ಆಯುಕ್ತೆ ಶಿಖಾ ಅವರು ಆಯ್ಕೆಯಾಗಿದ್ದಾರೆ.
ದಿವ್ಯಾ ಪ್ರಭು ಅವರು ಮತದಾರರ ಪಟ್ಟಿ ನಿರ್ವಹಣೆಯಲ್ಲಿ ಯುವ ಹಾಗೂ ವಿಶೇಷ ಮತದಾರರ ನೋಂದಣಿ ಹೆಚ್ಚಳಕ್ಕೆ ಆದ್ಯತೆ ನೀಡಿದ್ದರು. ಚುನಾವಣೆಯಲ್ಲಿ ನಿರ್ವಹಿಸಿದ ಕಾರ್ಯಗಳ ಮೂಲಕ ರಾಷ್ಟ್ರಮಟ್ಟದಲ್ಲಿ ಅತ್ಯುತ್ತಮರಾಗಿ ಗುರುತಿಸಿಕೊಂಡಿದ್ದರು. ಶಿಖಾ