ರಾಜ್ಯದ ಮಾಜಿ ಸಿಎಂ ಎಸ್ಎಂ ಕೃಷ್ಣ ನಿಧನ 

Date:

Share post:

ಬೆಂಗಳೂರು: ಮಾಜಿ ಮುಖ್ಯಮಂತ್ರಿಗಳು, ಮಾಜಿ ರಾಜ್ಯಪಾಲರು, ಕೇಂದ್ರದ ಮಾಜಿ ಸಚಿವರಾದ ಎಸ್. ಎಂ. ಕೃಷ್ಣ (93) ಅವರು ಬೆಂಗಳೂರಿನ ಸದಾಶಿವನಗರದ ಸ್ವಗೃಹದಲ್ಲಿ ಇಂದು ಬೆಳಗಿನ ಜಾವ 2.30ರ ವೇಳೆಗೆ ನಿಧನರಾದರು.

ಎಸ್ ಎಂ ಕೃಷ್ಣ ಅವರು ಕಳೆದ 6 ತಿಂಗಳಿನಿಂದ ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದರು. ಇತ್ತೀಚೆಗೆ ಶ್ವಾಸಕೋಶದ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರಿಗೆ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು.

ಮೂಲತಃ ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಸೋಮನಹಳ್ಳಿ ಗ್ರಾಮದವರು. ಎಸ್.ಸಿ.ಮಲ್ಲಯ್ಯ ಮತ್ತು ತಾಯಮ್ಮ ದಂಪತಿಯ ಪುತ್ರನಾಗಿ ಮೇ 1, 1932ರಲ್ಲಿ ಜನಿಸಿದ್ದರು.

ವಿಧಾನಸಭೆ ಸ್ಪೀಕರ್, ಉಪಮುಖ್ಯಮಂತ್ರಿ, ವಿದೇಶಾಂಗ ವ್ಯವಹಾರಗಳ ಸಚಿವ ಹಾಗೂ ಮಹಾರಾಷ್ಟ್ರದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು.

ಮೃತರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಸದಾಸಶಿವನಗರದ ನಿವಾಸದಲ್ಲಿ ಮಂಗಳವಾರ ಇಡೀ ದಿನ ಇಡಲಾಗುವುದು. ಬಳಿಕ ನಾಳೆ ಬುಧವಾರ ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಅವರ ಅಂತಿಮ ಸಂಸ್ಕಾರ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಎಸ್ಎಂ ಕೃಷ್ಣ ಅವರು 2023ನೇ ಸಾಲಿನ ಪದ್ಮವಿಭೂಷಣ ಪ್ರಶಸ್ತಿಗೆ ಭಾಜನರಾಗಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ವಿಕಲಚೇತನ ಫಲಾನುಭವಿಗಳಿಗೆ ವಿವಿಧ ಬಗೆಯ ಸುಮಾರು 62 ಲಕ್ಷ ರೂ. ಮೊತ್ತದ ಸಾಧನ ಸಲಕರಣೆಗಳ ವಿತರಣೆ

ಕಲಬುರಗಿ: ಹೌಸಿಂಗ್ ಆಂಡ್ ಅರ್ಬನ್ ಡೆವಲಪ್‍ಮೆಂಟ್ ಕಾರ್ಪೋರೇಶನ್ ಲಿಮಿಟೆಡ್ (HUDCO) ಸಂಸ್ಥೆಯ...

ಕಲಬುರಗಿ| ಲಾರಿ – ಬೈಕ್ ಢಿಕ್ಕಿ; ಬೈಕ್ ಸವಾರ ಮೃತ್ಯು; ಇನ್ನೋರ್ವ ಗಂಭೀರ ಗಾಯ

ಕಲಬುರಗಿ: ಲಾರಿ ಹಾಗೂ ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್...

ಕಲಬುರಗಿ| ರಾಮನವಮಿ ಆಚರಣೆ; ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಆದೇಶ

ಕಲಬುರಗಿ: ರಾಮ ನವಮಿ ಆಚರಣೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿಗಳಾದ...

ಕಲಬುರಗಿ| ಬೇಸಿಗೆಯ ಸವಾಲುಗಳ ಎದುರಿಸಲು ಸಿದ್ಧ: ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್

ಕಲಬುರಗಿ: ಕಲಬುರಗಿ ಜಿಲ್ಲಾಡಳಿತವು ಬೇಸಿಗೆಯ ಸವಾಲುಗಳನ್ನು ಎದುರಿಸಲು ಸಂಪೂರ್ಣ ಸನ್ನದ್ಧವಾಗಿದ್ದು, ಸಾರ್ವಜನಿಕರು...