ಕಲಬುರಗಿ: ಸಾರ್ವಜನಿಕರು ಕುಡಿಯುವ ನೀರನ್ನು ಕಾಯಿಸಿ ಕುಡಿಯಲು ಮನವಿ

Date:

Share post:

ಕಲಬುರಗಿ: ಕಲಬುರಗಿ ನಗರಕ್ಕೆ ನೀರು ಸರಬರಾಜು ಮಾಡುವ ಜಲಮೂಲ ನದಿಯಾದ ಭೀಮಾ ನದಿಯಿಂದ ನಿಂತ ನೀರು ಕಲುಷಿತವಾಗಿ ಬರುತ್ತಿರುವ ಹಿನ್ನೆಲೆಯಲ್ಲಿ ಈ ನೀರನ್ನು ಶುದ್ಧೀಕರಿಸಿ, ಸೂಪರ್ ಕ್ಲೋರಿನೇಶನ್ ಮಾಡಿ ನೀರು ಸರಬರಾಜು ಮಾಡಲಾಗುತ್ತಿದೆ. ಆದಾಗ್ಯೂ ಸಹ ಮುನ್ನೆಚ್ಚರಿಕೆ ಕ್ರಮವಾಗಿ ಕಲಬುರಗಿ ನಗರದ ಸಾರ್ವಜನಿಕರು ಕುಡಿಯುವ ನೀರನ್ನು ಕಾಯಿಸಿ, ಆರಿಸಿ ಮತ್ತು ಸೊಸಿ ಕುಡಿಯಬೇಕೆಂದು ಕಲಬುರಗಿ ಕೆಯುಡಬ್ಲ್ಯೂಎಸ್‍ಎಂಪಿ-ಕೆಯುಐಡಿಎಫ್‍ಸಿ ಯೋಜನಾ ಅನುಷ್ಠಾನ ಘಟಕದ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ.

ನಗರದ ಸಾರ್ವಜನಿಕರು ತಮ್ಮ ಮನೆಗಳಿಗೆ ತೆಗೆದುಕೊಂಡ ನಳದ ಜೋಡಣೆಗೆ ತೊಟ್ಟಿಯನ್ನು ಕಡ್ಡಾಯವಾಗಿ ಕೂಡಿಸಿಕೊಳ್ಳಬೇಕು ಮತ್ತು ನಳದ ತಗ್ಗುಗಳನ್ನು ಮುಚ್ಚಬೇಕು. ಏಕೆಂದರೆ ತಗ್ಗುಗಳಲ್ಲಿ ಕಲುಷಿತ ನೀರು ಸಂಗ್ರಹಣೆಯಾಗಿ ಅದೇ ನೀರು ಮತ್ತೇ ನಳದ ತೊಟ್ಟಿಯಲ್ಲಿ ಸೇರುವ ಮೂಲಕ ಮುಂದಿನ ಗ್ರಾಹಕರಿಗೆ ತಲುಪುತ್ತದೆ. ಇದರಿಂದ ಸಂಕ್ರಾಮಿಕ ರೋಗ ಹರಡುವ ಸಾಧ್ಯತೆ ಇರುತ್ತದೆ. ಅದೇ ರೀತಿ ನೀರಿನ ತೊಟ್ಟಿ ಅಳವಡಿಸುವುದರಿಂದ ನೀರು ಪೋಲಾಗದಂತೆ ನೋಡಿಕೊಳ್ಳಬಹುದಾಗಿದೆ.

ನಗರದ ನೀರು ಸರಬರಾಜಿನ ಗ್ರಾಹಕರು ತಮ್ಮ ನೀರಿನ ಬಿಲ್ಲಿನಲ್ಲಿ ಹೆಸರು, ವಿಳಾಸ, ಮನೆ ನಂಬರು ಹಾಗೂ ಮೋಬೈಲ್ ಸಂಖ್ಯೆಗಳನ್ನು ನೊಂದಾಯಿಸಲು, ಬದಲಾಯಿಸಲು ಮತ್ತು ಗೃಹ, ಗೃಹತೇತರ, ವಾಣಿಜ್ಯ ನಳ ಸಂಪರ್ಕಗಳ ಬದಲಾವಣೆ ಮಾಡಿಕೊಳ್ಳಲು ಯೋಜನಾ ಅನುಷ್ಠಾನ ಘಟಕ, ಕುಸ್ಸೆಂಪ್-ಕೆಯುಐಡಿಎಫ್‍ಸಿ, “ಜಲಭವನ” ನೆಲ ಮಹಡಿ, ಜೈ ಭವಾನಿ ಕನ್ವೇಷನ್ ಹಾಲ್, ಎದುರುಗಡೆ, ರಾಜಪೂರ-ಕುಸನೂರ ರಸ್ತೆ, ಕಲಬುರಿಗೆ ಕಚೇರಿಗೆ ಅಗತ್ಯ ದಾಖಲಾತಿಗಳೊಂದಿಗೆ ಭೇಟಿ ನೀಡಿ ಸರಿಪಡಿಸಿಕೊಳ್ಳಬಹುದಾಗಿದೆ.

 

ಆದ್ದರಿಂದ ಸಾರ್ವಜನಿಕರು ಕಲಬುರಗಿ ಮಹಾನಗರ ಪಾಲಿಕೆ, ಕೆಯುಐಡಿಎಫ್‍ಸಿ ಹಾಗೂ ಮೆ|| ಎಲ್ ಆಂಡ್ ಟಿ ಲಿಮಿಟೆಡ್ ಇವರೊಂದಿಗೆ ಸಹಕರಿಸಲು ಹಾಗೂ ನೀರಿನ ಸಮಸ್ಯೆಗಳ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಗ್ರಾಹಕರ ಸೇವಾ ದೂರವಾಣಿ ಸಂಖ್ಯೆ: +91 1800 425 8247 (ಛಿಛಿಛಿ) ಹಾಗೂ 084-722-37247 ಗೆ ಸಂಪರ್ಕಿಸಬೇಕೆಂದು ಅವರು ತಿಳಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ವಿಕಲಚೇತನ ಫಲಾನುಭವಿಗಳಿಗೆ ವಿವಿಧ ಬಗೆಯ ಸುಮಾರು 62 ಲಕ್ಷ ರೂ. ಮೊತ್ತದ ಸಾಧನ ಸಲಕರಣೆಗಳ ವಿತರಣೆ

ಕಲಬುರಗಿ: ಹೌಸಿಂಗ್ ಆಂಡ್ ಅರ್ಬನ್ ಡೆವಲಪ್‍ಮೆಂಟ್ ಕಾರ್ಪೋರೇಶನ್ ಲಿಮಿಟೆಡ್ (HUDCO) ಸಂಸ್ಥೆಯ...

ಕಲಬುರಗಿ| ಲಾರಿ – ಬೈಕ್ ಢಿಕ್ಕಿ; ಬೈಕ್ ಸವಾರ ಮೃತ್ಯು; ಇನ್ನೋರ್ವ ಗಂಭೀರ ಗಾಯ

ಕಲಬುರಗಿ: ಲಾರಿ ಹಾಗೂ ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್...

ಕಲಬುರಗಿ| ರಾಮನವಮಿ ಆಚರಣೆ; ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಆದೇಶ

ಕಲಬುರಗಿ: ರಾಮ ನವಮಿ ಆಚರಣೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿಗಳಾದ...

ಕಲಬುರಗಿ| ಬೇಸಿಗೆಯ ಸವಾಲುಗಳ ಎದುರಿಸಲು ಸಿದ್ಧ: ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್

ಕಲಬುರಗಿ: ಕಲಬುರಗಿ ಜಿಲ್ಲಾಡಳಿತವು ಬೇಸಿಗೆಯ ಸವಾಲುಗಳನ್ನು ಎದುರಿಸಲು ಸಂಪೂರ್ಣ ಸನ್ನದ್ಧವಾಗಿದ್ದು, ಸಾರ್ವಜನಿಕರು...