ಕಲಬುರಗಿ: 2018 ರಿಂದಲೇ ನಾನು ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೇನೆ, ಅದು ಈ ಬಾರಿ ಶೀಘ್ರದಲ್ಲೇ ಈಡೇರಲಿದೆ ಎಂದು ಕೆಕೆ ಆರ್ ಡಿಬಿ ಅಧ್ಯಕ್ಷ, ಜೇವರ್ಗಿ ಶಾಸಕ ಡಾ.ಅಜಯ್ ಸಿಂಗ್ ಹೇಳಿದ್ದಾರೆ.
ನಗರದ ಐವಾನ್ ಎ ಶಾಹಿ ಅತಿಥಿಗೃಹದ ಸಮೀಪದ ಕೆಕೆ ಆರ್ ಡಿಬಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಕ್ಟೋಬರ್ ತಿಂಗಳಲ್ಲಿ ಸಚಿವ ಸಂಪುಟ ಪುನರ್ ರಚನೆ ಆಗುವುದು ಖಚಿತ, ಇದು ದೆಹಲಿಯಲ್ಲಿ ದೊಡ್ಡ ಮಟ್ಟದಲ್ಲಿ ಚರ್ಚೆ ನಡೆಯಲಿದೆ. ಈ ಸಲ ಮಂತ್ರಿಯಾಗಲಿದ್ದೇನೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.
ಕೆಕೆ ಆರ್ ಡಿಬಿ ಅಧ್ಯಕ್ಷನಾಗಿ, ಶಾಸಕನಾಗಿ ಹಲವು ಅಭಿವೃದ್ಧಿ, ಜನಪರ ಕೆಲಸಗಳನ್ನು ಮಾಡಿದ್ದೇನೆ. ಇದೆಲ್ಲ ಹೈಕಮಾಂಡ್ ಗುರುತಿಸುತ್ತಿದೆ. ಹೈಕಮಾಂಡ್ ನಿರ್ಧಾರಕ್ಕೆ ಕಾದುನೋಡೋಣ ಎಂದರು.


