ಕಲಬುರಗಿ| ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ಸ್ಥಾಪನೆ: ಸಚಿವ ಪ್ರಿಯಾಂಕ್ ಖರ್ಗೆ

Date:

Share post:

ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿಗಾಗಿ ಕೆಲಸಗಳನ್ನು ಇನ್ನೂ ಹೆಚ್ಚು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಮತ್ತು ಅಭಿವೃದ್ಧಿ ಕಾಮಗಾರಿಗಳ ಮೇಲುಸ್ತುವಾರಿ ಮಾಡಲು ಕಲ್ಯಾಣ ಕರ್ನಾಟಕ ಪ್ರದೇಶ ಸಚಿವಾಲಯ ಸ್ಥಾಪನೆಗೆ ಇಂದು ಸಚಿವ ಸಂಪುಟ ಸಭೆಯು ಅನುಮೋದನೆ ನೀಡಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಈ ಕುರಿತು ತಮ್ಮ ” ಎಕ್ಸ್ ” ಖಾತೆಯಲ್ಲಿ ಬರೆದುಕೊಂಡಿರುವ ಅವರು, ಸಚಿವಾಲಯ ಸ್ಥಾಪನೆಯಾಗಿರುವುದರಿಂದ ಕಲ್ಯಾಣ ಕರ್ನಾಟಕ ಪ್ರದೇಶದ ಮತ್ತಷ್ಟು ಅಭಿವೃದ್ಧಿ ಸಾಧ್ಯವಾಗಲಿದೆ.

 

ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ಕಾಮಗಾರಿಗಳನ್ನು ಸಕಾಲದಲ್ಲಿ ಪೂರೈಸುವ ಸಲುವಾಗಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ವ್ಯಾಪ್ತಿಯ 7 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಕಚೇರಿಗೆ ಹೆಚ್ಚುವರಿ ಹುದ್ದೆಗಳನ್ನು ಸೃಷ್ಟಿಸುವ ಮೂಲಕ ಈ ಕಚೇರಿಗಳನ್ನು ಮತ್ತಷ್ಟು ಬಲಪಡಿಸಲೂ ಸಚಿವ ಸಂಪುಟ ನಿರ್ಧಾರ ತೆಗೆದುಕೊಂಡಿದೆ.

 

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಯ ನಿಟ್ಟನಲ್ಲಿ ಹೊಸ ಸಚಿವಾಲಯವನ್ನು ಸೃಷ್ಟಿಸಲು ಕಾರಣರಾದ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಹಾಗೂ ಸಚಿವ ಸಂಪಟದ ನನ್ನೆಲ್ಲ ಸಹೋದ್ಯೋಗಿಗಳಿಗೆ ಕೃತಜ್ಞತೆಗಳನ್ನು ಅರ್ಪಿಸುತ್ತೇನೆ ಎಂದು ಸಚಿವರು ಹೇಳಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ: ಕಲಬುರಗಿ ಜಿಲ್ಲೆಯ ಪ್ರವಾಸೋದ್ಯಮಕ್ಕಾಗಿ ಮುಖ್ಯಮಂತ್ರಿಗಳಿಂದ ಕಾಫಿ ಟೇಬಲ್ ಪುಸ್ತಕ, ಬ್ರೋಶರ್ ಬಿಡುಗಡೆ

ಕಲಬುರಗಿ: ಕಲಬುರಗಿ ಜಿಲ್ಲೆಯ ಪ್ರವಾಸೋದ್ಯಮವನ್ನು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರಪಡಿಸಲು...

ಕಲಬುರಗಿ| ಆತ್ಮ ವಿಶ್ವಾಸದಿಂದ ಪರೀಕ್ಷೆ ಎದುರಿಸಿ,ಹೆಚ್ಚು ಅಂಕ ಪಡೆದು ಜಿಲ್ಲೆಯ ಕೀರ್ತಿ ಹೆಚ್ಚಿಸಿ: ಭಂವರ್ ಸಿಂಗ್ ಮೀನಾ

ಕಲಬುರಗಿ: ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18...

ಕಲಬುರಗಿ| ಸೆಂಟ್ರಲ್ ಜೈಲಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹ ಹಾಗೂ ಕಡಗಂಚಿ ಕಾರ್ಮೇಲ್ ಜ್ಯೋತಿ ಪಬ್ಲಿಕ್...

ಕಲಬುರಗಿ| ಎಸ್ಸೆಸ್ಸೆಲ್ಸಿ ಪರೀಕ್ಷೆ: ಒತ್ತಡ ಬಿಟ್ಟು ಸಂತೋಷದಿಂದ ಪರೀಕ್ಷೆ ಬರೆಯುವಂತೆ ಜಿಲ್ಲಾಧಿಕಾರಿ ಪತ್ರ

ಕಲಬುರಗಿ: ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18...