ಕಲಬುರಗಿ| ಕಲ್ಯಾಣ ಕರ್ನಾಟಕ ಪ್ರತ್ಯೇಕ ಇಲಾಖೆಗೆ ಸರ್ಕಾರ ಅಸ್ತು: ಸರ್ಕಾರಿ ಆದೇಶ ಹೊರಡಿಸಿ ಉತ್ಸವ ದಿನದಂದು ಕೊಡುಗೆ ನೀಡಿದ ಸಿದ್ದರಾಮಯ್ಯ ಸರ್ಕಾರ

Date:

Share post:

ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವದ ಸಂಭ್ರಮದಲ್ಲಿರುವ ಪ್ರದೇಶದ ಜನರಿಗೆ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕವಾಗಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಇಲಾಖೆ ಸೃಜಿಸಿ ಸರ್ಕಾರಿ ಆದೇಶ ಹೊರಡಿಸುವ ಮೂಲಕ ಕಲ್ಯಾಣ ಕರ್ನಾಟಕ ಉತ್ಸವದ ಸಂಭ್ರಮ ಇಮ್ಮಡಿಗೊಳಿಸಿದೆ.

 

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿಗಾಗಿ ಪ್ರತ್ಯೇಕ ಇಲಾಖೆಯನ್ನು ಸೃಜಿಸಿ ಆದೇಶಿಸಿದಲ್ಲದೆ ಇಲಾಖೆಯು ಯೋಜನೆ ಮತ್ತು ಸಾಂಖ್ಯಿಕ ಸಚಿವರ ಅಧೀನದಲ್ಲಿ ಕಾರ್ಯನಿರ್ವಹಿಸಬೇಕು‌. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಕಾರ್ಯದರ್ಶಿಯವರು ಈ ನೂತನ  ಇಲಾಖೆಯ ಕಾರ್ಯದರ್ಶಿಯಾಗಿ ಮತ್ತು ಮಂಡಳಿಯ ಎಲ್ಲಾ ಅಧಿಕಾರಿ ಸಿಬ್ಬಂದಿಗಳನ್ನೊಳಗೊಂಡ ಇಲಾಖೆಯು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮತ್ತು ಅನುಚ್ಛೇಧ 371(ಜೆ) ಗೆ ಸಂಬಂಧಿಸಿದ ವಿಷಯಗಳನ್ನು ನಿರ್ವಹಿಸಬೇಕೆಂದು ಆದೇಶಿಸಲಾಗಿದೆ.

 

ಮುಂದುವರೆದು, ಪ್ರದೇಶದಲ್ಲಿನ ಕಾಮಗಾರಿಗಳನ್ನು ಅನುಷ್ಠಾನಗೊಳಿಸುವಲ್ಲಿ ಸಿಬ್ಬಂದಿಗಳ ಕೊರತೆ ಇರುವ ಕಾರಣ ಸದರಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ಹಾಗೂ ಆ ಪ್ರದೇಶ 7 ಜಿಲ್ಲಾಧಿಕಾರಿಗಳ ಕಚೇರಿಗಳಿಗೆ ಹೆಚ್ಚುವರಿ ಹುದ್ದೆಗಳನ್ನು ಮಂಜೂರು ಮಾಡಿ ಬಲಪಡಿಸಲು ಸಹ ನಿರ್ಧರಿಸಲಾಗಿರುತ್ತದೆ.

 

ಕಳೆದ‌ ವರ್ಷ ಕಲಬುರಗಿಯಲ್ಲಿ ಸೆ.17 ರಂದ ನಡೆದ ಸಚಿವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿಗಾಗಿ ಕೆಲಸಗಳನ್ನು ಇನ್ನೂ ಹೆಚ್ಚಿನ ಪರಿಣಾಮಕಾರಿಯಾಗಿ ಜಾರಿಗೊಳಿಸಲು ಮತ್ತು ಅಭಿವೃದ್ಧಿ ಕಾಮಗಾರಿಗಳ ಮೇಲುಸ್ತುವಾರಿ ಮಾಡಲು ಒಂದು ಪ್ರತ್ಯೇಕ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಸಚಿವಾಲಯವನ್ನು ಸ್ಥಾಪಿಸಲು ಐತಿಹಾಸಿಕ ನಿರ್ಧಾರ ತೆಗೆದುಕೊಳ್ಳಲಾಗಿತ್ತು.

Share post:

spot_imgspot_img

Popular

More like this
Related

ಕಲಬುರಗಿಯಲ್ಲಿ ಜೋಯಾಲುಕ್ಕಾಸ್‌ನ ‘ಬ್ರಿಲಿಯನ್ಸ್ ಡೈಮಂಡ್ ಜ್ಯುವೆಲ್ಲರಿ ಶೋ’

ಕಲಬುರಗಿ: ಜಗತ್ತಿನ ಪ್ರಸಿದ್ಧ ಜ್ಯುವೆಲ್ಲರಿ ಬ್ರ್ಯಾಂಡ್ ಜೋಯಾಲುಕ್ಕಾಸ್, ಕಲಬುರಗಿ ನಗರದ ತನ್ನ...

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...