ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವ ಹಿನ್ನೆಲೆಯಲ್ಲಿ ಬುಧವಾರ ಕಲಬುರಗಿ ನಗರದ ತಿಮ್ಮಪುರಿ ಸರ್ಕಲ್ ನಲ್ಲಿರುವ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಪುತ್ಥಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಲಾರ್ಪಣೆ ಮಾಡಿ ಹೈದ್ರಾಬಾದ ಕರ್ನಾಟಕ ವಿಮೋಚನೆಯ ಹರಿಕಾರನಿಗೆ ಗೌರವ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಚಿವರಾದ ಡಿ.ಎಸ್.ಸುಧಾಕರ್, ಪ್ರಿಯಾಂಕ್ ಖರ್ಗೆ, ಭೈರತಿ ಸುರೇಶ, ಕೆ.ಕೆ.ಆರ್.ಡಿ.ಬಿ. ಅಧ್ಯಕ್ಷ ಡಾ.ಅಜಯ್ ಸಿಂಗ್, ಶಾಸಕರಾದ ಅಲ್ಲಮಪ್ರಭು ಪಾಟೀಲ್, ವಿಧಾನ ಪರಿಷತ್ ಶಾಸಕರಾದ ಶಶೀಲ್ ನಮೋಶಿ, ತಿಪ್ಪಣಪ್ಪ ಕಮಕನೂರು, ಜಗದೇವ ಗುತ್ತೇದಾರ, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದ ಅಧ್ಯಕ್ಷ ದೇವೆಂದ್ರಪ್ಪ ಮರತೂರು ಸೇರಿದಂತೆ ಅನೇಕ ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳು ಸಾಕ್ಷಿಯಾದರು.
ಇದೇ ಸಂದರ್ಭದಲ್ಲಿ ಹೋರಾಟಗಾರ ಲಕ್ಷ್ಮಣ ದಸ್ತಿ ನೇತೃತ್ವದ ಕಲ್ಯಾಣ ಕರ್ನಾಟಕ ಭಾಗದ ಹೋರಾಟಗಾರರು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿಗೆ ಪ್ರತ್ಯೇಕ ಇಲಾಖೆ ಸೃಜಿಸಿ ಸರ್ಕಾರಿ ಆದೇಶ ಹೊರಡಿಸಿದಕ್ಕೆ ಸಿ.ಎಂ. ಅವರಿಗೆ ಅಭಿನಂದನೆ ಪತ್ರ ಸಲ್ಲಿಸಿದರು.


