ಕಲಬುರಗಿ| ಕಲ್ಯಾಣ ಕರ್ನಾಟಕ ಉತ್ಸವ ಹಿನ್ನೆಲೆ: ಸರ್ದಾರ್ ಪಟೇಲ್ ಪುತ್ಥಳಿಗೆ ಸಿ.ಎಂ ಸಿದ್ದರಾಮಯ್ಯ ಗೌರವ ನಮನ

Date:

Share post:

ಕಲಬುರಗಿ: ಕಲ್ಯಾಣ‌ ಕರ್ನಾಟಕ ಉತ್ಸವ‌ ಹಿನ್ನೆಲೆಯಲ್ಲಿ ಬುಧವಾರ ಕಲಬುರಗಿ ನಗರದ ತಿಮ್ಮಪುರಿ ಸರ್ಕಲ್ ನಲ್ಲಿರುವ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಪುತ್ಥಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಲಾರ್ಪಣೆ ಮಾಡಿ ಹೈದ್ರಾಬಾದ ಕರ್ನಾಟಕ‌ ವಿಮೋಚನೆಯ ಹರಿಕಾರನಿಗೆ ಗೌರವ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಚಿವರಾದ ಡಿ.ಎಸ್.ಸುಧಾಕರ್, ಪ್ರಿಯಾಂಕ್ ಖರ್ಗೆ, ಭೈರತಿ ಸುರೇಶ, ಕೆ.ಕೆ.ಆರ್.ಡಿ.ಬಿ. ಅಧ್ಯಕ್ಷ ಡಾ.ಅಜಯ್ ಸಿಂಗ್, ಶಾಸಕರಾದ ಅಲ್ಲಮಪ್ರಭು ಪಾಟೀಲ್, ವಿಧಾನ ಪರಿಷತ್ ಶಾಸಕರಾದ ಶಶೀಲ್ ನಮೋಶಿ, ತಿಪ್ಪಣಪ್ಪ ಕಮಕನೂರು, ಜಗದೇವ ಗುತ್ತೇದಾರ, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದ ಅಧ್ಯಕ್ಷ ದೇವೆಂದ್ರಪ್ಪ ಮರತೂರು ಸೇರಿದಂತೆ ಅನೇಕ ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳು ಸಾಕ್ಷಿಯಾದರು.

ಇದೇ ಸಂದರ್ಭದಲ್ಲಿ ಹೋರಾಟಗಾರ ಲಕ್ಷ್ಮಣ‌ ದಸ್ತಿ ನೇತೃತ್ವದ ಕಲ್ಯಾಣ ಕರ್ನಾಟಕ ಭಾಗದ ಹೋರಾಟಗಾರರು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿಗೆ ಪ್ರತ್ಯೇಕ ಇಲಾಖೆ ಸೃಜಿಸಿ ಸರ್ಕಾರಿ ಆದೇಶ ಹೊರಡಿಸಿದಕ್ಕೆ ಸಿ.ಎಂ. ಅವರಿಗೆ ಅಭಿನಂದನೆ ಪತ್ರ ಸಲ್ಲಿಸಿದರು.

Share post:

spot_imgspot_img

Popular

More like this
Related

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...

ಕಲಬುರಗಿ| ಐರಾವತ – ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ; ಇಬ್ಬರು ಚಾಲಕರ ಮೃತ್ಯು

ಕಲಬುರಗಿ: ಐರಾವತ ಬಸ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ ಸಂಭವಿಸಿ...

ಕಲಬುರಗಿ–ಮೈಸೂರು, ಕಲಬುರಗಿ–ಶಿವಮೊಗ್ಗ ಎಸಿ ಸ್ಲೀಪರ್ ಬಸ್ ಕಾರ್ಯಾಚರಣೆಗೆ ಚಾಲನೆ

ಮೂರು ತಿಂಗಳಲ್ಲಿ‌ 120 ಹೊಸ ಬಸ್ ಸೇರ್ಪಡೆ: ಅರುಣಕುಮಾರ ಪಾಟೀಲ ಕಲಬುರಗಿ: ಕಲ್ಯಾಣ...