ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ, ಬೀದರ, ಯಾದಗಿರಿ ಜಿಲ್ಲೆಯಲ್ಲಿ ಶೇ.50 ರಷ್ಟು ಹೆಚ್ಚುವರಿ ಮಳೆಯಿಂದ ಬೆಳೆ ಹಾನಿಯಾಗಿದ್ದು, ಈಗಾಗಲೆ ಜಂಟಿ ಸಮೀಕ್ಷೆಗೆ ಸೂಚಿಸಲಾಗಿದೆ. ವರದಿ ಬಂದ ನಂತರ ಬೆಳೆ ಪರಿಹಾರ ಬಿಡುಗಡೆಗೆ ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಬುಧವಾರ ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮದಲ್ಲಿ ಭಾಗಿಯಾದ ನಂತರ ಸಾರ್ವಜನಿಕರ ಅಹವಾಲು ಆಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಾದ್ಯಂತ ಪ್ರಸಕ್ತ ವರ್ಷ ವಾಡಿಕೆಗ್ಗಿಂತ ಶೇ.4ರಷ್ಟು ಮಳೆಯಾಗಿದೆ. ಕೆಲವು ಭಾಗದಲ್ಲಿ ಇದರ ಪ್ರಮಾಣ ಹೆಚ್ಚಿದೆ ಎಂದ ಅವರು, ರೈತರ ಬೆಳೆಸಾಲ ಮನ್ನಾ ಪರಿಶೀಲಿಸಲಾಗವುದು ಎಂದರು.
ಕಳೆದ 2024-25ನೇ ಸಾಲಿನಲ್ಲಿ ಬೆಳೆ ವಿಮೆ ಯೋಜನೆಯಡಿ ದಾಖಲೆ ಪ್ರಮಾಣದಲ್ಲಿ ಕಲಬುರಗಿ ಜಿಲ್ಲೆಗೆ 650 ಕೋಟಿ ರೂ. ಪರಿಹಾರ ಒದಗಿಸಿದೆ. ಈಗ ನಡೆಯುತ್ತಿರುವ ಜಂಟಿ ಸಮೀಕ್ಷೆ ಒಂದು ವಾರದಲ್ಲಿ ಪೂರ್ಣಗೊಳಗಳಲಿದೆ. ವರದಿ ಸರ್ಕಾರಕ್ಕೆ ಬಂದ ಬಳಿಕ ಬೆಳೆ ಪರಿಹಾರದ ಕುರಿತು ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.
ಕಳೆದ ಚರ್ಷ ಅತಿವೃಷ್ಟಿ ಹಾನಿಗೆ ಎನ್.ಡಿ.ಆರ್.ಎಫ್ ಮಾರ್ಗಸೂಚಿಯಂತೆ ಪರಿಹಾರ ನೀಡಲು ಕೇಂದ್ರಕ್ಕೆ ಪತ್ರ ಬರೆದು ಸ್ವತ ಖುದ್ದಾಗಿ ಕೇಂದ್ರದ ಗೃಹ ಸಚಿವ ಅಮಿತ ಶಹಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ ಅವರನ್ನು ಕಂಡು ಮನವಿ ಸಲ್ಲಿಸಿದರು ಪರಿಹಾರ ದೊರಕಲಿಲ್ಲ. ಕೊನೆಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿ ಪರಿಹಾರ ಪಡೆಯಬೇಕಾಯಿತು ಎಂದು ಕೇಂದ್ರ ಸರ್ಕಾರದ ಅಸಹಕಾರದ ಕುರಿತು ಬೇಸರ ವ್ಯಕ್ತಪಡಿಸಿದರು.
ವಿಜಯಪುರ ಜಿಲ್ಲೆಯ ಚಡಚಣ ಬ್ಯಾಂಕ್ ದರೋಡೆ ಪ್ರಕರಣ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿ.ಎಂ. ಅವರು, ಜಿಲ್ಲೆಯ ಎಸ್.ಪಿ. ಅವರೊಂದಿಗೆ ಮಾತನಾಡಿ ಕೂಡಲೆ ಅರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸುವಂತೆ ಸೂಚನೆ ನೀಡಿದ್ದೇನೆ ಎಂ ಅವರು ಸಮಾಜಿಕ ಮತ್ತು ಶೈಕ್ಷಣಿಕ ಸಮಿಕ್ಷೆಗೆ ಈ ಬಾರಿ ಕಳೆದ ಬಾರಿಗಿಂತ ಹೆಚ್ಚುವರಿ ಶಿಕ್ಷಕರನ್ನು ಎಣಿಕೆಗೆ ನೇಮಿಸಲಾಗಿದೆ. ಒಟ್ಟಾರೆ 1.75 ಲಕ್ಷ ಶಿಕ್ಷಕರನ್ನು ಈ ಕಾರ್ಯಕ್ಕೆ ನಿಯೋಜಿಸಿದೆ ಎಂದರು.
ಸಚಿವ ಪ್ರಿಯಾಂಕ್ ಖರ್ಗೆ, ಕೆ.ಕೆ.ಆರ್.ಡಿ.ಬಿ. ಅಧ್ಯಕ್ಷ ಡಾ.ಅಜಯ್ ಸಿಂಗ್ ಇದ್ದರು.


