ಕಲಬುರಗಿ: ಬಟ್ಟೆ ಬಿಚ್ಚಿ ವ್ಯಕ್ತಿಯೋರ್ವನನ್ನು ಭೀಕರ ಹತ್ಯೆ ಮಾಡಿರುವ ಘಟನೆ ಆಳಂದ ಚೆಕ್ ಪೋಸ್ಟ್ ಸಮೀಪದ ಕುಷ್ಠರೋಗಿಗಳ ಕಾಲೋನಿಯಲ್ಲಿ ನಡೆದಿದೆ.
ಕುಷ್ಠರೋಗಿಗಳ ಕಾಲೋನಿಯ ನಿವಾಸಿ ಚಾಂದಸಾಬ್ ಮಲ್ಲಂಗಸಾಬ್ ಮೂಲಗೆ (38) ಕೊಲೆಯಾದ ದುರ್ದೈವಿ ಎಂದು ಗುರುತಿಸಲಾಗಿದೆ.
ಹಳೆಯ ದ್ವೇಷವೇ ಕೊಲೆಗೆ ಕಾರಣ ಎಂದು ಪೊಲೀಸರು ಶಂಕಿಸಿದ್ದಾರೆ.
ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ, ಡಿಸಿಪಿ ಕನಿಕಾ ಸಿಕ್ರಿವಾಲ್, ಆರ್.ಜಿ ನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಕುರಿತು ಆರ್.ಜಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


