ಕಲಬುರಗಿ| ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ ಸಿದ್ದರಾಮಯ್ಯ 

Date:

Share post:

ಕಲಬುರಗಿ: ಭಾರೀ ಮಳೆ ಹಾಗೂ ಮಹಾರಾಷ್ಟ್ರದ ವಿವಿಧ ನದಿ, ಜಲಾಶಯಗಳಿಂದ 3.50 ಲಕ್ಷಕ್ಕೂ ಹೆಚ್ಚು ಕ್ಯೂಸೆಕ್ ನೀರು ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕದ ಕಲಬುರಗಿ ಸೇರಿದಂತೆ ಇತರ ಜಿಲ್ಲೆಗಳಲ್ಲಿ ಭೀಮಾ ನದಿಯ ಪ್ರವಾಹದಿಂದ ಉಂಟಾಗಿರುವ ಹಾನಿಯನ್ನು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೈಮಾನಿಕ ಸಮೀಕ್ಷೆ ನಡೆಸಿ, ವೀಕ್ಷಿಸಿದರು.

ಸಿಎಂ ಸಿದ್ದರಾಮಯ್ಯ ಅವರು ಮಂಗಳವಾರ ಕಲಬುರಗಿ ವಿಮಾನ‌ ನಿಲ್ದಾಣಕ್ಕೆ ಆಗಮಿಸಿ, ಪ್ರವಾಹದಿಂದಾಗಿ ಭೀಮಾ ತೀರದ ಪ್ರದೇಶಗಳಲ್ಲಿ ಉಂಟಾಗಿರುವ ಹಾನಿ ಬಗ್ಗೆ ವಿಮಾನ‌ ನಿಲ್ದಾಣದಲ್ಲೇ ಪ್ರಾದೇಶಿಕ ಆಯುಕ್ತೆ, ಜಿಲ್ಲಾಧಿಕಾರಿ ಸೇರಿ ಉನ್ನತಮಟ್ಟದ ಅಧಿಕಾರಿಗಳ ಜೊತೆಗೆ ಪ್ರಾಥಮಿಕ ಸಭೆ ನಡೆಸಿ ಮಾಹಿತಿ ಪಡೆದರು.

ಬಳಿಕ ಮೊದಲ ಹಂತದಲ್ಲಿ ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಹಾನಿಗೀಡಾಗಿರುವ ಪ್ರದೇಶಗಳ ವೀಕ್ಷಣೆ ಮಾಡಿದರೆ, ಎರಡನೇ ಹಂತದಲ್ಲಿ ಬೀದರ್ ಹಾಗೂ ಯಾದಗಿರಿ ಜಿಲ್ಲೆಯ ನಷ್ಟವನ್ನು ಅವಲೋಕಿಸಿದರು.

ವೈಮಾನಿಕ ಸಮೀಕ್ಷೆಯ ವೇಳೆಯಲ್ಲಿ ಸಚಿವರಾದ ಪ್ರಿಯಾಂಕ್ ಖರ್ಗೆ, ಎಂ.ಬಿ.ಪಾಟೀಲ್, ಈಶ್ವರ ಖಂಡ್ರೆ, ರಹೀಮ್ ಖಾನ್ ಅವರೊಂದಿಗೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಕೂಡ ಸಿಎಂ ಸಿದ್ದರಾಮಯ್ಯರಿಗೆ ಸಾಥ್ ನೀಡಿದರು.

 

Share post:

spot_imgspot_img

Popular

More like this
Related

ಕಲಬುರಗಿ ಸೆಂಟ್ರಲ್ ಜೈಲಿನಿಂದ ಮೂವರು ಕೈದಿಗಳ ಪರಾರಿ; ತೀವ್ರ ಶೋಧ ಆರಂಭ

ಕಲಬುರಗಿ: ನಗರದ ಜೇವರ್ಗಿ ರಸ್ತೆಯಲ್ಲಿರುವ ಸೆಂಟ್ರಲ್ ಜೈಲಿನಿಂದ ಕೊಲೆ ಪ್ರಕರಣಗಳಲ್ಲಿ ಶಿಕ್ಷೆ...

ಕಲಬುರಗಿ| ಎಸ್ಐಆರ್: ಶೇ.100ರಷ್ಟು ಗಣತಿ ನಮೂನೆ ವಿತರಣೆ ಮಾಡಿ: ವಿ.ಅನ್ಬುಕುಮಾರ್

ಕಲಬುರಗಿ: ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಬಿ.ಎಲ್.ಓ.ಗಳು ತಮ್ಮ ಬಳಿ...

ಕಲಬುರಗಿಗೆ ನಿರಂತರ ನೀರು ಪೂರೈಕೆ ಯೋಜನೆಯ ಕಾಮಗಾರಿ ಮುಗಿಸಿ: ಸಚಿವ ಯತೀಂದ್ರ ಸಿದ್ಧರಾಮಯ್ಯ ವಾರ್ನಿಂಗ್

ಕಲಬುರಗಿ: ಕಲಬುರಗಿ ಮಹಾನಗರಕ್ಕೆ ನಿರಂತರ ಕುಡಿಯುವ ನೀರು ಪೂರೈಕೆ 24x7 ಯೋಜನೆಯ...

Kalaburagi| ಊಟ ಸೇವನೆಯಿಂದ ಮಕ್ಕಳ ಅಸ್ವಸ್ಥ ಪ್ರಕರಣ: ಶಾಲೆಯ ಪ್ರಭಾರಿ ಪ್ರಾಂಶುಪಾಲ, ವಾರ್ಡನ್ ಅಮಾನತ್ತು

ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದ ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತರ...