ಕಲಬುರಗಿ: ಕಲಬುರಗಿ ತಾಲ್ಲೂಕಿನ ಶ್ರೀನಿವಾಸ ಸರಡಗಿ ಗ್ರಾಮದಲ್ಲಿ ಹಳೆಯ ವೈಷಮ್ಯದಿಂದಾಗಿ ವ್ಯಕ್ತಿಯೊಬ್ಬರ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಭೀಕರವಾಗಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ನಗರ ಪೊಲೀಸರು ಕಳೆದ 24 ಗಂಟೆಯಲ್ಲೇ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಶಿವಕುಮಾರ್, ಶ್ರೀಕಾಂತ್ ಹಾಗೂ ಸುದೀಪ್ ಬಂಧಿತ ಆರೋಪಿಗಳಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಆರೋಪಿಗಳು, ಶ್ರೀನಿವಾಸ ಸರಡಗಿ ಗ್ರಾಮದಲ್ಲಿ ಅದೇ ಗ್ರಾಮದ ನಿವಾಸಿ ಶ್ರೀಮಂತರಾವ್(32) ಎಂಬಾತನನ್ನು ಕೊಲೆ ಮಾಡಿ ಪರಾರಿಯಾಗಿದ್ದರು. ಈ ಕುರಿತು ಪ್ರಕರಣ ದಾಖಲಿಸಿಕೊಂಡ ವಿಶ್ವವಿದ್ಯಾಲಯ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.


