ಕಲಬುರಗಿ| ಗಂಡನ ಕಿರುಕುಳಕ್ಕೆ ಬೇಸತ್ತು ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ

Date:

Share post:

ಕಲಬುರಗಿ| ನಿತ್ಯದ ಗಂಡನ ಕಿರುಕುಳಕ್ಕೆ ಬೇಸತ್ತು ಗೃಹಿಣಿಯೋರ್ವಳು ಬಾವಿಯಲ್ಲಿ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜೇವರ್ಗಿ ತಾಲ್ಲೂಕಿನ ಶಕಾಪುರ ಗ್ರಾಮದಲ್ಲಿ ನಡೆದಿದೆ.

ಶಕಾಪುರ ಗ್ರಾಮದ ನಿವಾಸಿ ಭಾಗಮ್ಮ ಶಿವಪ್ಪ ಗೌಂಡಿ(30) ಗಂಡನ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ ಎಂದು ಗುರುತಿಸಿದ್ದು, ಆರೋಪಿ ಗಂಡ ಶಿವಪ್ಪನನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಶಿವಪ್ಪ, ದಿನಾಲೂ ಕುಡಿದ ಅಮಲಿನಲ್ಲಿ ಬಂದು ಮೃತ ಭಾಗಮ್ಮಳನ್ನು ದೈಹಿಕವಾಗಿ ಹಿಂಸೆ ನೀಡುತ್ತಿದ್ದ ಎನ್ನಲಾಗಿದೆ. ಇದನ್ನೇ ಬೇಸತ್ತ ಭಾಗಮ್ಮ ಗ್ರಾಮದ ಹೊರಗಿರುವ ಬಾವಿಯೊಂದರಲ್ಲಿ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ.

ನಾಪತ್ತೆಯಾದ ಭಾಗಮ್ಮ ಬಾವಿಯಲ್ಲಿ ಪತ್ತೆ:

ಭಾಗಮ್ಮ ನಾಪತ್ತೆಯಾಗಿದ್ದಾಳೆ ಎಂದು ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಮೂರು ದಿನಗಳ ಹಿಂದಷ್ಟೇ ದೂರು ದಾಖಲಾಗಿತ್ತು. ಗುರುವಾರ ಬೆಳಗ್ಗೆ ನೋಡಿದರೆ ಬಾವಿಯಲ್ಲಿ ಆಕೆಯ ಶವವಾಗಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಮೃತ ಭಾಗಮ್ಮಳ ತಾಯಿ ಮಹಾದೇವಿ ನೀಡಿದ ದೂರಿನ ಮೇರೆಗೆ ಮೃತಳ ಗಂಡ ಆರೋಪಿ ಶಿವಪ್ಪನನ್ನು ಬಂಧಿಸಿ, ಮುಂದಿನ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿಯಲ್ಲಿ ಜೋಯಾಲುಕ್ಕಾಸ್‌ನ ‘ಬ್ರಿಲಿಯನ್ಸ್ ಡೈಮಂಡ್ ಜ್ಯುವೆಲ್ಲರಿ ಶೋ’

ಕಲಬುರಗಿ: ಜಗತ್ತಿನ ಪ್ರಸಿದ್ಧ ಜ್ಯುವೆಲ್ಲರಿ ಬ್ರ್ಯಾಂಡ್ ಜೋಯಾಲುಕ್ಕಾಸ್, ಕಲಬುರಗಿ ನಗರದ ತನ್ನ...

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...