ಕಲಬುರಗಿ: ನಿಜ ಶರಣ ಅಂಬಿಗರ ಚೌಡಯ್ಯನವರ ಮೂರ್ತಿಯನ್ನು ಭಗ್ನಗೊಳಿಸಿರುವ ಘಟನೆ ಚಿತ್ತಾಪುರ ಮತಕ್ಷೇತ್ರದ ಶಾಹಾಬಾದ ತಾಲ್ಲೂಕಿನ ಮುತ್ತಗಾ ಗ್ರಾಮದಲ್ಲಿ ಗುರುವಾರ ರಾತ್ರೋ ರಾತ್ರಿ ನಡೆದಿದೆ.
ಚೌಡಯ್ಯನವರ ಮೂರ್ತಿಯ ಕೈಯನ್ನು ವಿರೂಪಗೊಳಿಸಿದ್ದು, ಮುಖಕ್ಕೆ ಹಾನಿ ಮಾಡಿ, ಕಿಡಿಗೇಡಿಗಳು ಪರಾರಿಯಾಗಿದ್ದಾರೆ.
ವಿರೂಪಗೊಳಿಸಿದ ಸುದ್ದಿ ತಿಳಿದ ಸ್ಥಳೀಯರು ಹಾಗೂ ಅಂಬಿಗರ ಚೌಡಯ್ಯನವರ ಅನುಯಾಯಿಗಳು ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಿ, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.
ಸ್ಥಳಕ್ಕೆ ಶಹಾಬಾದ ಡಿವೈಎಸ್ಪಿ ಶಂಕರಗೌಡ ಪಾಟೀಲ, ಚಿತ್ತಾಪುರ ಸಿಪಿಐ ಚಂದ್ರಶೇಖರ ತಿಗಡಿ, ಜಗದೇವಪ್ಪ ಪಾಳ, ಸ್ವಾನದಳ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.


