ಕಲಬುರಗಿ| ಚಿತ್ತಾಪುರನಲ್ಲಿ ಆರೆಸ್ಸೆಸ್ ಪಥ ಸಂಚಲನ; ಸರ್ಕಾರದ ನಿಲುವು ತಿಳಿಸುವಂತೆ ಸೂಚಿಸಿ ನ.13ಕ್ಕೆ ವಿಚಾರಣೆ ಮುಂದೂಡಿಕೆ

Date:

Share post:

ಕಲಬುರಗಿ: ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನಕ್ಕೆ ಅನುಮತಿ ನೀಡುವುದರ ಕುರಿತು ಸರ್ಕಾರ ತನ್ನ ಅಂತಿಮ ನಿರ್ಧಾರವನ್ನು ತಿಳಿಸಬೇಕು ಎಂದು ಸೂಚಿಸಿದ ಹೈಕೋರ್ಟ್, ಮುಂದಿನ ವಿಚಾರಣೆಯನ್ನು ನ.13ಕ್ಕೆ ಮುಂದೂಡಿದೆ ಆದೇಶಿಸಿದೆ.

ನ್ಯಾ.ಎಂ.ಜಿ.ಎಸ್ ಕಮಲ್ ಅವರಿದ್ದ ಕಲಬುರಗಿ ಹೈಕೋರ್ಟ್ ಏಕಸದಸ್ಯ ಪೀಠವು, ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರ ಮನವಿ ಮೇರೆಗೆ ಸರ್ಕಾರದ ನಿಲುವು ತಿಳಿಸಬೇಕು, ಎಲ್ಲವೂ ಸರಿಯಾಗಿದ್ದರೆ, ಮುಕ್ತಾಯವು ಸರಿಯಾಗಿಯೇ ಇರುತ್ತದೆ ಎಂದು ತಿಳಿಸಿ, ನ.13ರಂದು ಮಧ್ಯಾಹ್ನ 2.30ಕ್ಕೆ ವಿಚಾರಣೆ ನಡೆಸುವುದಾಗಿ ತಿಳಿಸಿದೆ.

ಬೆಂಗಳೂರಿನ ಅಡ್ವೊಕೇಟ್‌ ಜನರಲ್‌ ಕಚೇರಿಯಲ್ಲಿ ಶಾಂತಿಯುತವಾಗಿ ಶಾಂತಿ ಸಭೆ ನಡೆಸಲಾಗಿದೆ. ಅದಕ್ಕಾಗಿ ನಾವು ನಮ್ಮ ಶುಭಾಯಗಳನ್ನು ತಿಳಿಸುತ್ತೇವೆ. ಅಧಿಕಾರಿಗಳು ಸಹ ಎಲ್ಲಾ ರೀತಿಯಲ್ಲೂ ಉತ್ತಮ ಸಹಕಾರ ನೀಡಿದ್ದಾರೆ ಎಂದು ಆರೆಸ್ಸೆಸ್ ಪರ ವಕೀಲ ಅರುಣ್ ಶ್ಯಾಮ್ ತಿಳಿಸಿದರು.

ಈ ಪ್ರಕರಣವನ್ನು ಶಾಂತಿಯುತವಾಗಿ ಪರಿಹರಿಸಲು ನ್ಯಾಯಾಲಯ ನಿರ್ದೇಶನ ನೀಡಿರುವುದು ಶ್ಲಾಘನೀಯ, ಒಂದೇ ದಿನ ಕಾರ್ಯಕ್ರಮ ನಡೆಸುವುದಾಗಿ 11 ಅರ್ಜಿಗಳು ಬಂದಿವೆ, ಎಲ್ಲರ ಅರ್ಜಿಗಳನ್ನು ಸ್ವೀಕರಿಸಿದ್ದೇವೆ. ಎಲ್ಲರಿಗೂ ಅನುಮತಿ ನೀಡಲಾಗುತ್ತದೆ, ಸರ್ಕಾರದ ನಿಲುವಿಗೆ ಕಾಲಾವಕಾಶ ಕೋರಿದರು.

Share post:

spot_imgspot_img

Popular

More like this
Related

ಕಲಬುರಗಿ: ಕಲಬುರಗಿ ಜಿಲ್ಲೆಯ ಪ್ರವಾಸೋದ್ಯಮಕ್ಕಾಗಿ ಮುಖ್ಯಮಂತ್ರಿಗಳಿಂದ ಕಾಫಿ ಟೇಬಲ್ ಪುಸ್ತಕ, ಬ್ರೋಶರ್ ಬಿಡುಗಡೆ

ಕಲಬುರಗಿ: ಕಲಬುರಗಿ ಜಿಲ್ಲೆಯ ಪ್ರವಾಸೋದ್ಯಮವನ್ನು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರಪಡಿಸಲು...

ಕಲಬುರಗಿ| ಆತ್ಮ ವಿಶ್ವಾಸದಿಂದ ಪರೀಕ್ಷೆ ಎದುರಿಸಿ,ಹೆಚ್ಚು ಅಂಕ ಪಡೆದು ಜಿಲ್ಲೆಯ ಕೀರ್ತಿ ಹೆಚ್ಚಿಸಿ: ಭಂವರ್ ಸಿಂಗ್ ಮೀನಾ

ಕಲಬುರಗಿ: ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18...

ಕಲಬುರಗಿ| ಸೆಂಟ್ರಲ್ ಜೈಲಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹ ಹಾಗೂ ಕಡಗಂಚಿ ಕಾರ್ಮೇಲ್ ಜ್ಯೋತಿ ಪಬ್ಲಿಕ್...

ಕಲಬುರಗಿ| ಎಸ್ಸೆಸ್ಸೆಲ್ಸಿ ಪರೀಕ್ಷೆ: ಒತ್ತಡ ಬಿಟ್ಟು ಸಂತೋಷದಿಂದ ಪರೀಕ್ಷೆ ಬರೆಯುವಂತೆ ಜಿಲ್ಲಾಧಿಕಾರಿ ಪತ್ರ

ಕಲಬುರಗಿ: ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18...