ಕಲಬುರಗಿ: ವಿದ್ಯುತ್ ಕಂಬಕ್ಕೆ ನೇಣು ಬಿಗಿದುಕೊಂಡು ಲೈನ್ ಮ್ಯಾನ್ ವೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಕಲಬುರಗಿ ತಾಲೂಕಿನ ಬಸವಪಟ್ಟಣ ಗ್ರಾಮದಲ್ಲಿ ನಡೆದಿದೆ.
ಬಸವಪಟ್ಟಣ ಗ್ರಾಮದ ನಿವಾಸಿ ಪರಮೇಶ್ವರ ಚೊಬಚಿ, ಅದೇ ಗ್ರಾಮದ ಜಮೀನಿನಿಂದರ ವಿದ್ಯುತ್ ಕಂಬಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದು, ಆತ್ಮಹತ್ಯೆಗೆ ಅಧಿಕಾರಿಗಳ ಕಿರುಕುಳ ಎಂದು ಆರೋಪಿಸಲಾಗಿದೆ.
ಘಟನೆ ಫರಹತಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.


