ಕಲಬುರಗಿ| ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು

Date:

Share post:

ಕಲಬುರಗಿ: ಅಪರಿಚಿತ ವಾಹನವೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಅಫಜಲಪುರ ರಸ್ತೆಯ ಶರಣ ಸಿರಸಗಿ ಗ್ರಾಮದ ನಾಗಲಿಂಗೇಶ್ವರ ದೇವಸ್ಥಾನದ ಸಮೀಪ ಗುರುವಾರ ಬೆಳಗ್ಗೆ ನಡೆದಿದೆ.

ಕಲಬುರಗಿ ತಾಲ್ಲೂಕಿನ ನದಿಸಿನ್ನೂರ್ ಗ್ರಾಮದ ನಿವಾಸಿ ಸತೀಶ್ ಕುಮಾರ್ ನಾಯ್ಕೋಡಿ(33) ಮೃತ ದುರ್ದೈವಿ ಎಂದು ತಿಳಿದುಬಂದಿದೆ.

ಕಲಬುರಗಿಯಿಂದ ಗಾಣಗಾಪುರ ಕಡೆಗೆ ಹೋಗುತ್ತಿದ್ದ ಸತೀಶಕುಮಾರ್ ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ. ತಲೆಗೆ ತೀವ್ರ ಪೆಟ್ಟು ಬಿದ್ದ ಕಾರಣ ಸತೀಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಈ ಕುರಿತು ಸಂಚಾರಿ ಪೊಲೀಸ್ ಠಾಣೆ – 1 ರಲ್ಲಿ ಪ್ರಕರಣ ದಾಖಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ: ಕಲಬುರಗಿ ಜಿಲ್ಲೆಯ ಪ್ರವಾಸೋದ್ಯಮಕ್ಕಾಗಿ ಮುಖ್ಯಮಂತ್ರಿಗಳಿಂದ ಕಾಫಿ ಟೇಬಲ್ ಪುಸ್ತಕ, ಬ್ರೋಶರ್ ಬಿಡುಗಡೆ

ಕಲಬುರಗಿ: ಕಲಬುರಗಿ ಜಿಲ್ಲೆಯ ಪ್ರವಾಸೋದ್ಯಮವನ್ನು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರಪಡಿಸಲು...

ಕಲಬುರಗಿ| ಆತ್ಮ ವಿಶ್ವಾಸದಿಂದ ಪರೀಕ್ಷೆ ಎದುರಿಸಿ,ಹೆಚ್ಚು ಅಂಕ ಪಡೆದು ಜಿಲ್ಲೆಯ ಕೀರ್ತಿ ಹೆಚ್ಚಿಸಿ: ಭಂವರ್ ಸಿಂಗ್ ಮೀನಾ

ಕಲಬುರಗಿ: ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18...

ಕಲಬುರಗಿ| ಸೆಂಟ್ರಲ್ ಜೈಲಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹ ಹಾಗೂ ಕಡಗಂಚಿ ಕಾರ್ಮೇಲ್ ಜ್ಯೋತಿ ಪಬ್ಲಿಕ್...

ಕಲಬುರಗಿ| ಎಸ್ಸೆಸ್ಸೆಲ್ಸಿ ಪರೀಕ್ಷೆ: ಒತ್ತಡ ಬಿಟ್ಟು ಸಂತೋಷದಿಂದ ಪರೀಕ್ಷೆ ಬರೆಯುವಂತೆ ಜಿಲ್ಲಾಧಿಕಾರಿ ಪತ್ರ

ಕಲಬುರಗಿ: ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18...