ಕಲಬುರಗಿ: ಜೇವರ್ಗಿ ತಾಲೂಕಿನ ಹೊರವಲಯದ ಗೌನಳ್ಳಿ ಕ್ರಾಸ್ ಹತ್ತಿರ ಇನೋವಾ ಕರ್ ರಸ್ತೆ ಪಕ್ಕದ ಡಿವೈಡರ್ ಗೇ ಡಿಕ್ಕಿ ಹೊಡೆದು ಸ್ಥಳದಲ್ಲೇ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿದಂತೆ ಮೂರ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಗಳವಾರ ನಡೆದಿದೆ.
ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ, ಸಹೋದರ ಶಂಕರ್ ಬೀಳಗಿ, ಈರಣ್ಣ ಈರಣ್ಣ ಶಿರಸಂಗಿ ಸಾವನಪ್ಪಿದ್ದಾರೆ. ಇನ್ನಿಬ್ಬರು ಕಲಬುರಗಿ ಖಾಸಗಿ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕೆತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

ವಿಜಯಪುರದಿಂದ ಕಲಬುರಗಿಗೆ ಸಂಬಂಧಿಕರ ಮದುವೆಗೆ ತೆರಳುವಾಗ ಈ ಘಟನೆ ನಡೆದಿದೆ. ಒಟ್ಟು ಕಾರಿನಲ್ಲಿ ಐವರು ಪ್ರಯಾಣಿಸುತ್ತಿದ್ದೂ ಅದರಲ್ಲಿ ಮೂವರು ಸಾವನಪ್ಪಿದ್ದಾರೆ.
ಜೇವರ್ಗಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


