ಕಲಬುರಗಿ: ಗುಂಡಿನ ದಾಳಿ; ವ್ಯಕ್ತಿಯ ಭೀಕರ ಕೊಲೆ

Date:

Share post:

ಕಲಬುರಗಿ: ಬಲರಾಮ ಚೌಕ್ ನಿಂದ ವಾಡಿ ಪಟ್ಟಣಕ್ಕೆ ಸ್ಕೂಟಿ ಮೇಲೆ ಹೋಗುತ್ತಿದ್ದ ಯುವಕನೊಬ್ಬನನ್ನು ತಡೆದು ಬರ್ಬರವಾಗಿ ಕೊಲೆ ಮಾಡಿದ ಘಟನೆ ಸೋಮವಾರ ಮಧ್ಯಾಹ್ನ ತಾಲೂಕಿನ ವಾಡಿ ಪಟ್ಟಣದಲ್ಲಿ ನಡೆದಿದೆ.

ಭಾಯ್ ಭಾಯ್ ಗ್ರೂಪ್ ಅಧ್ಯಕ್ಷ ಮಹ್ಮದ್ ಇರ್ಫಾನ್ (40) ಕೊಲೆಯಾದ ವ್ಯಕ್ತಿ ಎಂದು ತಿಳಿದುಬಂದಿದೆ.

ಕೊಲೆಯಾದ ಇರ್ಫಾನ್ ಬಲರಾಮ ಚೌಕ್ ದಿಂದ ಸ್ಕೂಟಿ ಮೇಲೆ ವಾಡಿ ಪಟ್ಟಣಕ್ಕೆ ಬರುತ್ತಿದ್ದ ಎನ್ನಲಾಗಿದ್ದು, ಎದುರಿನಿಂದ ಶಿಫ್ಟ್ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಸ್ಕೂಟಿಗೆ ಡಿಕ್ಕಿ ಹೊಡೆದಿದ್ದಾರೆ. ಸ್ಕೂಟಿಯಿಂದ ಕೆಳಗೆ ಬೀಳುತ್ತಿದ್ದಂತೆ ಗುಂಡು ಹಾರಿಸಿದ್ದಾರೆ. ತಪ್ಪಿಸಿಕೊಂಡು ಹೋಗಲು ಪ್ರಯತ್ನಿಸಿದಾಗ ಮಚ್ಚು ಮತ್ತು ಚಾಕುವಿನಿಂದ ಚುಚ್ಚಿ ಸಾಯಿಸಿದ್ದಾರೆ ಎನ್ನಲಾಗಿದೆ.

ಕೊಲೆಗೈದು ಕಾರಿನಲ್ಲಿ ಪರಾರಿಯಾಗಲು ಪ್ರಯತ್ನಿಸಿದ ಹಂತಕರು, ಆತುರದಲ್ಲಿ ಕಾರು ಗುಂಡಿಗೆ ಬಿದ್ದಿದೆ. ನಂತರ ಕೊಲೆಗೆ ಬಳಸಿದ ಕಾರು ಸ್ಥಳದಲ್ಲೇ ಬಿಟ್ಟು ಇನ್ನೊಂದು ಕಾರಿನಲ್ಲಿ ಫರಾರಿಯಾಗಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ಕೊಲೆಗೆ ಹಳೆಯ ವೈಶ್ಯಮ್ಯವೇ ಕಾರಣ ಎನ್ನಲಾಗಿದೆ.

ಸುದ್ದಿ ತಿಳಿಯುತ್ತಿದ್ದಂತೆ ಡಿಐಜಿ ಹೆಚ್ಚುವರಿ ಎಸ್ಪಿ ಮಹೇಶ ಮೇಘಣ್ಣವರ್, ಡಿವೈಎಸ್ಪಿ ಶಂಕರಗೌಡ ಪಾಟೀಲ, ಸಿಪಿಐ ಎ.ಎಸ್.ಪಾಟೀಲ್, ಪಿಎಸ್ಐ ಕೆ.ತಿರುಮಲೇಶ, ಚಿತ್ತಾಪುರ ಪಿಎಸ್ಐ ಮಂಜುನಾಥ ರೆಡ್ಡಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೃತ ದೇಹ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿಯಲ್ಲಿ ಜೋಯಾಲುಕ್ಕಾಸ್‌ನ ‘ಬ್ರಿಲಿಯನ್ಸ್ ಡೈಮಂಡ್ ಜ್ಯುವೆಲ್ಲರಿ ಶೋ’

ಕಲಬುರಗಿ: ಜಗತ್ತಿನ ಪ್ರಸಿದ್ಧ ಜ್ಯುವೆಲ್ಲರಿ ಬ್ರ್ಯಾಂಡ್ ಜೋಯಾಲುಕ್ಕಾಸ್, ಕಲಬುರಗಿ ನಗರದ ತನ್ನ...

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...