2.50 ಲಕ್ಷ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ 170 ಕೋಟಿ ರೂ. ವಿದ್ಯಾರ್ಥಿ ವೇತನ ಬಿಡುಗಡೆ ಮಾಡಿದ ಜಮೀರ್ ಅಹಮದ್ ಖಾನ್

Date:

Share post:

ಬೆಂಗಳೂರು:ಅಲ್ಪಸಂಖ್ಯಾತರ ಸಮುದಾಯದ 2.50 ಲಕ್ಷ ವಿದ್ಯಾರ್ಥಿಗಳಿಗೆ 2023-24 ಸಾಲಿನ 170.7 ಕೋಟಿ ರೂ. ವಿದ್ಯಾರ್ಥಿ ವೇತನ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಬಿಡುಗಡೆ ಮಾಡಿದರು.

ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾಲಯದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರಾಥಮಿಕ, ಪ್ರೌಢ, ಪದವಿ ಪೂರ್ವ, ಪದವಿ ಹಾಗೂ ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ವಿದ್ಯಾಸಿರಿ ಯೋಜನೆಯಡಿಯಲ್ಲಿ ಹಾಸ್ಟೆಲ್ ಸೌಲಭ್ಯದ ಆರ್ಥಿಕ ನೆರವು ಬಿಡುಗಡೆಗೆ ಚಾಲನೆ ನೀಡಿ , ಇದೇ ಸಂದರ್ಭದಲ್ಲಿ ಇಲಾಖೆಯ ನೂತನ ಡೈರಿ, ಕ್ಯಾಲೆಂಡರ್ ಬಿಡುಗಡೆ ಮಾಡಿದರು.

1 ರಿಂದ 8 ನೇ ತರಗತಿ ವರೆಗಿನ 2, 35, 661 ವಿದ್ಯಾರ್ಥಿಗಳಿಗೆ 1 ಸಾವಿರ ರೂ. ನಿಂದ 3,500 ರೂ. ವರೆಗೆ 90.30 ಕೋಟಿ ರೂ., ವಿದೇಶದಲ್ಲಿ ಉನ್ನತ ವ್ಯಾಸಂಗ ಮಾಡುವ 280 ವಿದ್ಯಾರ್ಥಿಗಳಿಗೆ ತಲಾ 20 ಲಕ್ಷ ರೂ. ನಂತೆ 25.27 ಕೋಟಿ ರೂ., ಪಿಎಚ್ ಡಿ, ಎಂ ಫಿಲ್ ವ್ಯಾಸಂಗ ಮಾಡುವ 308 ವಿದ್ಯಾರ್ಥಿಗಳಿಗೆ ಮಾಸಿಕ 10 ಸಾವಿರ ರೂ. ನಂತೆ 3.50 ಕೋಟಿ ರೂ., ಐ ಐ ಟಿ, ಐಐ ಎಂ ಪ್ರವೇಶ ಪಡೆದಿರುವ 19 ವಿದ್ಯಾರ್ಥಿಗಳಿಗೆ ತಲಾ 2 ಲಕ್ಷ ರೂ. ನಂತೆ 38 ಲಕ್ಷ ರೂ. ವಿದ್ಯಾಸಿರಿ ಯೋಜನೆಯಡಿಯಲ್ಲಿ ಹಾಸ್ಟೆಲ್ ಸೌಲಭ್ಯ ಸಿಗದ 3,330 ವಿದ್ಯಾರ್ಥಿಗಳಿಗೆ ತಲಾ 1,500 ರೂ. ನಂತೆ 13.50 ಕೋಟಿ ರೂ., ಬಿಡುಗಡೆ ಮಾಡಲಾಯಿತು.

ಇಲಾಖೆ ಕಾರ್ಯದರ್ಶಿ ಮನೋಜ್ ಜೈನ್, ನಿರ್ದೇಶಕ ಜಿಲಾನಿ ಮೊಕಾಶಿ, ವಖ್ಫ್ ಬೋರ್ಡ್ ಅಧ್ಯಕ್ಷ ಅನ್ವರ್ ಬಾಷಾ, ಅಧಿಕಾರಿ ಮೆಹಮೂದ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಆದಿವಾಸಿ ತಾಂಡಾಗಳಲ್ಲಿ ಮೂಲಸೌಕರ್ಯ ಕೊರತೆ: ಲತಾ ಮೋಹನ್ ಪರಿಶೀಲನೆ

ಕಲಬುರಗಿ: ಜಿಲ್ಲೆಯ ವಿವಿಧ ಆದಿವಾಸಿ ತಾಂಡಾಗಳಿಗೆ ಭೇಟಿ ನೀಡಿದ ಕರ್ನಾಟಕ ರಾಜ್ಯ...

ಕಲಬುರಗಿಯಲ್ಲಿ ಜೋಯಾಲುಕ್ಕಾಸ್‌ನ ‘ಬ್ರಿಲಿಯನ್ಸ್ ಡೈಮಂಡ್ ಜ್ಯುವೆಲ್ಲರಿ ಶೋ’

ಕಲಬುರಗಿ: ಜಗತ್ತಿನ ಪ್ರಸಿದ್ಧ ಜ್ಯುವೆಲ್ಲರಿ ಬ್ರ್ಯಾಂಡ್ ಜೋಯಾಲುಕ್ಕಾಸ್, ಕಲಬುರಗಿ ನಗರದ ತನ್ನ...

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...