SSLC ಪರೀಕ್ಷೆಯಲ್ಲಿ ಅಕ್ರಮ.. ಇಬ್ಬರು ಮೇಲ್ವಿಚಾರಕರು ಅಮಾನತು 

Date:

Share post:

ಇಂದಿನಿಂದ ಎಸ್ಸೆಸೆಲ್ಸಿ ಪರೀಕ್ಷೆ ಶುರುವಾಗಿದ್ದು, ಮೊದಲ ದಿನವೇ ಲಕ್ಷಾಂತರ ವಿದ್ಯಾರ್ಥಿಗಳು ಹಾಜರಾಗಿ ಪರೀಕ್ಷೆ ಬರೆದಿದ್ದಾರೆ. ಈ ನಡುವೆ ಯಾದಗಿರಿಯಲ್ಲಿ ಹಲವೆಡೆ ನಕಲು ಮಾಡಿರುವ ಮಾಹಿತಿ ಎಲ್ಲೆಡೆ ಹರಿದಾಡಿದೆ.

ಅದರಂತೆಯೇ ಈ ಪರೀಕ್ಷೆಯ ಸಂದರ್ಭದಲ್ಲಿ ನಕಲು ಮಾಡುತ್ತಿದ್ದ ವಿದ್ಯಾರ್ಥಿಗಳನ್ನು ಸಹಕರಿಸಿದ ಇಬ್ಬರು ಶಿಕ್ಷಕರನ್ನು ಅಮಾನತು ಮಾಡಿರುವ ಘಟನೆ ಇದೇ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ.

ಅಲ್ಲಿನ ಹುಣಸಗಿ ಪರೀಕ್ಷಾ ಕೇಂದ್ರದ ಮೇಲ್ವಿಚಾರಕರಾಗಿ ಕೆಲಸ ನಿರ್ವಹಿಸುತ್ತಿದ್ದ ಸುರಪುರ ತಾಲೂಕಿನ ಏವೂರಿನ ಸರ್ಕಾರಿ ಶಾಲೆಯ ಶಿಕ್ಷಕ ಸಾಹೇಬ್ ಗೌಡ & ಸುರಪುರದ ಪರೀಕ್ಷಾ ಕೇಂದ್ರದಲ್ಲಿದ್ದ ಅಲ್ಲಿನ ಝಂಡದಕೇರ ಗ್ರಾಮದ ಶಿಕ್ಷಕ ಹನುಮಂತರಾಯ ಅವರನ್ನು ಅಮಾನತುಗೊಳಿಸಲಾಗಿದೆ.

ಎರಡು ಕಡೆಗಳಲ್ಲಿ ವಿದ್ಯಾರ್ಥಿಗಳು ನಕಲು ಮಾಡುತ್ತಿದ್ದರೂ ಶಿಕ್ಷಕರು ಯಾವುದೇ ಕ್ರಮ ಕೈಗೊಂಡಿಲ್ಲ, ಈ ಕೃತ್ಯಕ್ಕೆ ಮೇಲ್ವಿಚಾರಕರು ನಿರ್ಲಕ್ಷ್ಯ ಮಾಡಿದ್ದಾರೆ. ಹಾಗಾಗಿ ಸಿಸಿ ಕ್ಯಾಮರಾ ದೃಶ್ಯ ಆಧರಿಸಿಕೊಂಡು ಅಲ್ಲಿನ ಜಿಲ್ಲಾ ಪಂಚಾಯ್ತಿಯ ಸಿಇಒ ಗರೀಮಾ ಪನ್ವಾರ್ ಅವರು ಇಬ್ಬರೂ ಶಿಕ್ಷಕರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...

ಕಲಬುರಗಿ| ಐರಾವತ – ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ; ಇಬ್ಬರು ಚಾಲಕರ ಮೃತ್ಯು

ಕಲಬುರಗಿ: ಐರಾವತ ಬಸ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ ಸಂಭವಿಸಿ...

ಕಲಬುರಗಿ–ಮೈಸೂರು, ಕಲಬುರಗಿ–ಶಿವಮೊಗ್ಗ ಎಸಿ ಸ್ಲೀಪರ್ ಬಸ್ ಕಾರ್ಯಾಚರಣೆಗೆ ಚಾಲನೆ

ಮೂರು ತಿಂಗಳಲ್ಲಿ‌ 120 ಹೊಸ ಬಸ್ ಸೇರ್ಪಡೆ: ಅರುಣಕುಮಾರ ಪಾಟೀಲ ಕಲಬುರಗಿ: ಕಲ್ಯಾಣ...