ಕಲಬುರಗಿ| ಮನೆಗಳ್ಳತನ ಪ್ರಕರಣಗಳ ಪತ್ತೆ; ಆರೋಪಿ ಬಂಧಿಸಿ 13.41 ಲಕ್ಷ ಮೌಲ್ಯದ ಸ್ವತ್ತು ವಶಕ್ಕೆ

Date:

Share post:

ಕಲಬುರಗಿ: ಇಲ್ಲಿನ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದ್ದ 3 ಮನೆಗಳ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಿ, ಆತನಿಂದ ಬೈಕ್ ಸೇರಿದಂತೆ 13.41 ಲಕ್ಷ ಮೌಲ್ಯದ ಸ್ವತ್ತು ವಶಪಡಿಸಿಕೊಳ್ಳುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ ಹೇಳಿದ್ದಾರೆ.

ನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಲ್ಲಿನ ಬಿಲಾಲಬಾದ ಕಾಲೋನಿಯ ನಿವಾಸಿ ಮುಹಮ್ಮದ್ ಆರಿಫ್ (50) ಬಂಧಿತ ಆರೋಪಿಯಾಗಿದ್ದು, ಈತ ತಾನು ಮಾಡಿಕೊಂಡಿರುವ ಸಾಲವನ್ನು ತೀರಿಸಲು ಮೂರು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎಂದು ತಿಳಿಸಿದರು.

ವಿವಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಕಳ್ಳತನ ಆಗಿರುವ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖಾ ತಂಡ ರಚಿಸಲಾಗಿತ್ತು. ಕ್ಷಿಪ್ರ ಕಾರ್ಯಾಚರಣೆಯಿಂದ ಆರೋಪಿಯನ್ನು ಬಂಧಿಸಿ, ಆತನಿಂದ 13 ಲಕ್ಷ ಮೌಲ್ಯದ 100 ಗ್ರಾಂ ಬಂಗಾರ, 16, 000 ಮೌಲ್ಯದ 200 ಗ್ರಾಂ ಬೆಳ್ಳಿ ಆಭರಣಗಳ ಜೊತೆಗೆ 25 ಸಾವಿರ ಮೌಲ್ಯದ ಬೈಕ್ ವೊಂದನ್ನು ವಶಕ್ಕೆ ಪಡೆಯಲಾಗಿದೆ ಎಂದು ವಿವರಿಸಿದರು.

ಆರೋಪಿ ಸದ್ಯ 3 ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾದ ಪೊಲೀಸ್ ಅಧಿಕಾರಿ, ಸಿಬ್ಬಂದಿಯವರಿಗೆ ಶ್ಲಾಘಿಸಲಾಗಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಡಿಸಿಪಿ ಪ್ರವೀಣ್ ನಾಯಕ್, ಸುಶೀಲ್ ಕುಮಾರ್ ಸೇರಿದಂತೆ ಮತ್ತಿತರರು ಇದ್ದರು.

Share post:

spot_imgspot_img

Popular

More like this
Related

ಕಲಬುರಗಿ: ಕಲಬುರಗಿ ಜಿಲ್ಲೆಯ ಪ್ರವಾಸೋದ್ಯಮಕ್ಕಾಗಿ ಮುಖ್ಯಮಂತ್ರಿಗಳಿಂದ ಕಾಫಿ ಟೇಬಲ್ ಪುಸ್ತಕ, ಬ್ರೋಶರ್ ಬಿಡುಗಡೆ

ಕಲಬುರಗಿ: ಕಲಬುರಗಿ ಜಿಲ್ಲೆಯ ಪ್ರವಾಸೋದ್ಯಮವನ್ನು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರಪಡಿಸಲು...

ಕಲಬುರಗಿ| ಆತ್ಮ ವಿಶ್ವಾಸದಿಂದ ಪರೀಕ್ಷೆ ಎದುರಿಸಿ,ಹೆಚ್ಚು ಅಂಕ ಪಡೆದು ಜಿಲ್ಲೆಯ ಕೀರ್ತಿ ಹೆಚ್ಚಿಸಿ: ಭಂವರ್ ಸಿಂಗ್ ಮೀನಾ

ಕಲಬುರಗಿ: ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18...

ಕಲಬುರಗಿ| ಸೆಂಟ್ರಲ್ ಜೈಲಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹ ಹಾಗೂ ಕಡಗಂಚಿ ಕಾರ್ಮೇಲ್ ಜ್ಯೋತಿ ಪಬ್ಲಿಕ್...

ಕಲಬುರಗಿ| ಎಸ್ಸೆಸ್ಸೆಲ್ಸಿ ಪರೀಕ್ಷೆ: ಒತ್ತಡ ಬಿಟ್ಟು ಸಂತೋಷದಿಂದ ಪರೀಕ್ಷೆ ಬರೆಯುವಂತೆ ಜಿಲ್ಲಾಧಿಕಾರಿ ಪತ್ರ

ಕಲಬುರಗಿ: ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18...