ಕಲಬುರಗಿ| ಮನೆಗಳ್ಳತನ ಪ್ರಕರಣಗಳ ಪತ್ತೆ; ಆರೋಪಿ ಬಂಧಿಸಿ 13.41 ಲಕ್ಷ ಮೌಲ್ಯದ ಸ್ವತ್ತು ವಶಕ್ಕೆ

Date:

Share post:

ಕಲಬುರಗಿ: ಇಲ್ಲಿನ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದ್ದ 3 ಮನೆಗಳ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಿ, ಆತನಿಂದ ಬೈಕ್ ಸೇರಿದಂತೆ 13.41 ಲಕ್ಷ ಮೌಲ್ಯದ ಸ್ವತ್ತು ವಶಪಡಿಸಿಕೊಳ್ಳುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ ಹೇಳಿದ್ದಾರೆ.

ನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಲ್ಲಿನ ಬಿಲಾಲಬಾದ ಕಾಲೋನಿಯ ನಿವಾಸಿ ಮುಹಮ್ಮದ್ ಆರಿಫ್ (50) ಬಂಧಿತ ಆರೋಪಿಯಾಗಿದ್ದು, ಈತ ತಾನು ಮಾಡಿಕೊಂಡಿರುವ ಸಾಲವನ್ನು ತೀರಿಸಲು ಮೂರು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎಂದು ತಿಳಿಸಿದರು.

ವಿವಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಕಳ್ಳತನ ಆಗಿರುವ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖಾ ತಂಡ ರಚಿಸಲಾಗಿತ್ತು. ಕ್ಷಿಪ್ರ ಕಾರ್ಯಾಚರಣೆಯಿಂದ ಆರೋಪಿಯನ್ನು ಬಂಧಿಸಿ, ಆತನಿಂದ 13 ಲಕ್ಷ ಮೌಲ್ಯದ 100 ಗ್ರಾಂ ಬಂಗಾರ, 16, 000 ಮೌಲ್ಯದ 200 ಗ್ರಾಂ ಬೆಳ್ಳಿ ಆಭರಣಗಳ ಜೊತೆಗೆ 25 ಸಾವಿರ ಮೌಲ್ಯದ ಬೈಕ್ ವೊಂದನ್ನು ವಶಕ್ಕೆ ಪಡೆಯಲಾಗಿದೆ ಎಂದು ವಿವರಿಸಿದರು.

ಆರೋಪಿ ಸದ್ಯ 3 ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾದ ಪೊಲೀಸ್ ಅಧಿಕಾರಿ, ಸಿಬ್ಬಂದಿಯವರಿಗೆ ಶ್ಲಾಘಿಸಲಾಗಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಡಿಸಿಪಿ ಪ್ರವೀಣ್ ನಾಯಕ್, ಸುಶೀಲ್ ಕುಮಾರ್ ಸೇರಿದಂತೆ ಮತ್ತಿತರರು ಇದ್ದರು.

Share post:

spot_imgspot_img

Popular

More like this
Related

ಕಲಬುರಗಿ: ಈಜಲು ಹೋದ ಇಬ್ಬರು ಬಾಲಕರ ಸಾವು

ಕಲಬುರಗಿ: ಮಣ್ಣು ಗಣಿಗಾರಿಕೆ ಹೊಂಡದಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ಮುಳುಗಿ...

ಕಲಬುರಗಿ| ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣಾ ಶೇ.86.97 ರಷ್ಟು ದಾಖಲೆ ಮಟ್ಟದ ಮತದಾನ

ಕಲಬುರಗಿ: ಕರ್ನಾಟಕ ವಿಧಾನ ಪರಿಷತ್ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯು ಶುಕ್ರವಾರ...

ಕಲಬುರಗಿ| ಈಶಾನ್ಯ ಶಿಕ್ಷಕರ ಮತಕ್ಷೇತ್ರ ಚುನಾವಣೆ: ಶಿಕ್ಷಕರಿಂದ ಭರ್ಜರಿ ಮತದಾನ

ಕಲಬುರಗಿ: ವಿಧಾನ ಪರಿಷತ್ ಪ್ರವೇಶಕ್ಕಾಗಿ ನಡೆಯುತ್ತಿರುವ ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣೆಯಲ್ಲಿ...

ಕಲಬುರಗಿ| ಜಿಲ್ಲೆಯಾದ್ಯಂತ ಸಂಭ್ರಮದ ರಾಜ್ಯೋತ್ಸವ ಆಚರಣೆಗೆ ನಿರ್ಧಾರ: ಜಿಲ್ಲಾಧಿಕಾರಿ ಇಕ್ರಮ್ ಶರೀಫ್

ಕಲಬುರಗಿ: ಮುಂಬರುವ ನವೆಂಬರ್ 1 ರಂದು ಜಿಲ್ಲೆಯಾದ್ಯಂತ ಕರ್ನಾಟಕ ರಾಜ್ಯೋತ್ಸವವನ್ನು ಅತ್ಯಂತ...