ಕಲಬುರಗಿ| ಯುವನಿಧಿ ಯೋಜನೆ; ಹಣ ವರ್ಗಾವಣೆ ಬಂದ್?

Date:

Share post:

ಕಲಬುರಗಿ: ಯುವನಿಧಿ ಯೋಜನೆಯ ಪ್ರಯೋಜನ ಪಡೆಯಲು ಇನ್ನು ಮುಂದೆ ಅಭ್ಯರ್ಥಿಗಳು “ಪ್ರತಿ ತಿಂಗಳಿಗೊಮ್ಮೆ” ತಾವು ನಿರುದ್ಯೋಗಿಯೆಂದು ಮತ್ತು ವ್ಯಾಸಂಗವನ್ನು ಮುಂದುವರೆಸುತ್ತಿಲ್ಲವೆoದು ಸ್ವಯಂ ಘೋಷಣೆಯನ್ನು ಮಾಡಬೇಕಿದೆ. ಸದರಿ ಅಭ್ಯರ್ಥಿಗಳು ಪ್ರತಿ ತಿಂಗಳಿಗೊಮ್ಮೆ ಸ್ವಯಂ ಘೋಷಣೆ ಮಾಡದಿದ್ದಲ್ಲಿ ಅಂತಹ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗುವುದಿಲ್ಲ ಎಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಅಭ್ಯರ್ಥಿಗಳು ಕಡ್ಡಾಯವಾಗಿ ಆಧಾರ್ ಸೀಡೆಡ್ ಬ್ಯಾಂಕ್ ಖಾತೆಯನ್ನು ಹೊಂದಿರಬೇಕು. ಸೇವಾ ಸಿಂಧು https://sevasindhugs.karnataka.gov.in ವೆಬ್‌ಸೈಟ್‌ನಲ್ಲಿ ಸ್ವಯಂ ಘೋಷಣೆ ಮಾಡಿಕೊಳ್ಳಬೇಕು. ಉಳಿದಂತೆ ಸೇವಾ ಸಿಂಧು ಪೋರ್ಟಲ್‌ನಲ್ಲಿ ತಮ್ಮ ಅರ್ಜಿ ಯಾವ ಹಂತದಲ್ಲಿದೆ ಎಂಬುವುದನ್ನು ಪರಿಶೀಲಿಸಿಕೊಂಡು, ಒಂದು ವೇಳೆ ಅರ್ಜಿ ಅಪ್ರೂವ್ ಆಗದ ಸಂದರ್ಭದಲ್ಲಿ ಸೂಚಿಸಲ್ಪಟ್ಟ ಇಲಾಖೆಯ ಕಚೇರಿಗಳಿಗೆ ತಮ್ಮ ಎಲ್ಲಾ ಮೂಲ ಅಂಕಪಟ್ಟಿ ಹಾಗೂ ಇತರೆ ಪ್ರಮಾಣ ಪತ್ರಗಳೋಂದಿಗೆ ಖುದ್ದಾಗಿ ಭೇಟಿ ನೀಡಿ ಅವುಗಳ ಜೀರಾಕ್ಸ್ ಪ್ರತಿಗಳನ್ನು ಸಲ್ಲಿಸಿ ಅಪ್ರೂವ್ ಮಾಡಿಕೊಳ್ಳಬೇಕು.

ಯುವನಿಧಿ ಯೋಜನೆಯಡಿ ಪದವಿ ಮತ್ತು ಸ್ನಾತಕೋತರ ಪದವಿ ಹಾಗೂ ಡಿಪ್ಲೋಮಾಗಳನ್ನು 2022-23ನೇ, 2023-2024ನೇ ಹಾಗೂ 2024-2025ನೇ ಶೈಕ್ಷಣಿಕ ವರ್ಷದಲ್ಲಿ ವ್ಯಾಸಂಗ ಮಾಡಿ, 2023, 2024, 2025ರಲ್ಲಿ ತೇರ್ಗಡೆಯಾಗಿ ಅರ್ಹತೆ ಹೊಂದಿದ ಅಭ್ಯರ್ಥಿಗಳು ಸೇವಾಸಿಂಧು ಪೋರ್ಟಲ್‌ನಲ್ಲಿ ನೋಂದಣಿ ಮಾಡಿಕೊಂಡು ಈ ಯೋಜನೆಯನ್ನು ಸದುಪಯೋಗ ಪಡೆದುಕೊಳ್ಳಬೇಕು. ಫಲಿತಾಂಶದ ನಂತರ ನಿರುದ್ಯೋಗಿಗಳಾಗಿ ೧೮೦ ದಿವಸಗಳ ಪೂರೈಸಿದ ನಂತರ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗುತ್ತದೆ.

ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-274846 ಗೆ ಸಂಪರ್ಕಿಸಲು ಕೋರಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...

ಕಲಬುರಗಿ| ಐರಾವತ – ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ; ಇಬ್ಬರು ಚಾಲಕರ ಮೃತ್ಯು

ಕಲಬುರಗಿ: ಐರಾವತ ಬಸ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ ಸಂಭವಿಸಿ...

ಕಲಬುರಗಿ–ಮೈಸೂರು, ಕಲಬುರಗಿ–ಶಿವಮೊಗ್ಗ ಎಸಿ ಸ್ಲೀಪರ್ ಬಸ್ ಕಾರ್ಯಾಚರಣೆಗೆ ಚಾಲನೆ

ಮೂರು ತಿಂಗಳಲ್ಲಿ‌ 120 ಹೊಸ ಬಸ್ ಸೇರ್ಪಡೆ: ಅರುಣಕುಮಾರ ಪಾಟೀಲ ಕಲಬುರಗಿ: ಕಲ್ಯಾಣ...