ಕಲಬುರಗಿ| ಕಾಂಗ್ರೆಸ್ ಅರಾಜಕತೆ ಸೃಷ್ಟಿಸಿ ಅಧಿಕಾರಕ್ಕೆ ಬರುವ ಕನಸು ಕಾಣುತ್ತಿದೆ: ರಾಜನಾಥ್ ಸಿಂಗ್ ಕಿಡಿ

Date:

ಕಲಬುರಗಿ: ಕಾಂಗ್ರೆಸ್ ಪಕ್ಷ ಅರಾಜಕತೆ ಸೃಷ್ಟಿಸುವ ಮೂಲಕ ಅಧಿಕಾರಕ್ಕೆ ಮರಳುವ ಪ್ರಯತ್ನ ಮಾಡುತ್ತಿದೆ. ಆದರೆ ದೇಶದ ಜನತೆ ಇದಕ್ಕೆ ಅವಕಾಶ ನೀಡುವುದಿಲ್ಲ. ಪ್ರಜಾಪ್ರಭುತ್ವಕ್ಕೆ ಯಾವುದೇ ರೀತಿಯ ಆತಂಕ ಎದುರಾದರೂ ಅದನ್ನು ರಕ್ಷಿಸುವ ಶಕ್ತಿ ದೇಶದ ಜನತೆ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಗಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದರು.

ಕಲಬುರಗಿಯಲ್ಲಿ ಬುಧವಾರ ಸಂಜೆ ಜಗತ್ ವೃತ್ತದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕನ್ನಡ ಭಾಷೆಯ ಬಗ್ಗೆ ತಮಗೆ ಅಪಾರ ಪ್ರೀತಿ ಇದೆ. ಹೀಗಾಗಿ ಕನ್ನಡದಲ್ಲಿಯೇ ಭಾಷಣ ಆರಂಭಿಸುವುದಾಗಿ ತಿಳಿಸಿದರು. ತಾವು ರಾಜಕೀಯ ರ್ಯಾಲಿಯಲ್ಲಿ ಪಾಲ್ಗೊಳ್ಳಲು ಬಂದಿಲ್ಲ; ಬದಲಾಗಿ ಲೋಕತಂತ್ರದ ರಕ್ಷಣೆ ಮತ್ತು ಸಂವಿಧಾನದ ಗೌರವ ಕಾಪಾಡುವ ಮಹತ್ವದ ಅಭಿಯಾನದ ಸಂಕಲ್ಪದೊಂದಿಗೆ ಬಂದಿರುವುದಾಗಿ ಹೇಳಿದರು.

ಸ್ವಾತಂತ್ರ್ಯಾನಂತರ ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಲು ಸಂವಿಧಾನ ಜಾರಿಗೆ ತರಲಾಯಿತು. ಆದರೆ ಸುಮಾರು 60 ವರ್ಷಗಳ ಕಾಲ ದೇಶದಲ್ಲಿ ಆಡಳಿತ ನಡೆಸಿದ ಕಾಂಗ್ರೆಸ್ ಪಕ್ಷವೇ ಇಂದು ಅರಾಜಕತೆ ಸೃಷ್ಟಿಸುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.

 

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಆಡಳಿತದ ಅವಧಿಯಲ್ಲಿ ಪ್ರಜಾಪ್ರಭುತ್ವದ ಕತ್ತು ಹಿಸುಕುವ ಪ್ರಯತ್ನ ನಡೆದಿತ್ತು. ಇದೀಗ ಕಾಂಗ್ರೆಸ್ ಚುನಾವಣಾ ಆಯೋಗ ಸೇರಿದಂತೆ ಸಂವಿಧಾನಾತ್ಮಕ ಸಂಸ್ಥೆಗಳ ವಿರುದ್ಧ ಅಪಪ್ರಚಾರ ಮಾಡುತ್ತಿದೆ. ಭಾರತದ ಪ್ರಜಾಪ್ರಭುತ್ವದ ಶಕ್ತಿ ಏನೆಂಬುದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಅರ್ಥವಾಗಿಲ್ಲ ಎಂದು ಟೀಕಿಸಿದರು.

 

ಹೈದರಾಬಾದ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ವಿದೇಶಿ ವ್ಯಕ್ತಿಯೊಬ್ಬರು ಭಾರತದ ಪ್ರಜಾಪ್ರಭುತ್ವದ ಕುರಿತು ಟೀಕಿಸಿದಾಗ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರು ಚಪ್ಪಾಳೆ ತಟ್ಟಿದ್ದಾರೆ. ಕಾಂಗ್ರೆಸ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ದೇಶವನ್ನು ಅವಮಾನಿಸುವಂತಹ ಘಟನೆ ನಡೆದಿದೆ. ‘ವೋಟ್ ಚೋರ್, ಗದ್ದಿ ಚೋರ್’ ಎಂಬ ಘೋಷಣೆಗಳ ಮೂಲಕ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಅವಹೇಳನ ಮಾಡಲಾಗಿದೆ. ಇದನ್ನು ಭಾರತೀಯರು ಎಂದಿಗೂ ಕ್ಷಮಿಸುವುದಿಲ್ಲ ಎಂದು ಹೇಳಿದರು.

 

ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ದೊಡ್ಡ ಗೌರವವಿದೆ. ಇಡೀ ಜಗತ್ತು ಭಾರತ ಏನು ಹೇಳುತ್ತದೆ ಎಂಬುದನ್ನು ಕುತೂಹಲದಿಂದ ಆಲಿಸುತ್ತದೆ. ಆದರೆ ಕಾಂಗ್ರೆಸ್ ನಾಯಕರು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯ ಬಗ್ಗೆ ಅನುಮಾನ ಮೂಡಿಸುವ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಆಕ್ಷೇಪಿಸಿದರು.

 

ಮುಖ್ಯ ಚುನಾವಣಾ ಆಯುಕ್ತರು (ಸಿಇಸಿ) ಇರದಿದ್ದರೆ ನರೇಂದ್ರ ಮೋದಿ ಪ್ರಧಾನಿಯಾಗುತ್ತಿರಲಿಲ್ಲ ಎಂಬ ರಾಹುಲ್ ಗಾಂಧಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ರಾಜನಾಥ್ ಸಿಂಗ್, ಮೋದಿ ಅವರು ಮೊದಲ ಬಾರಿಗೆ ಪ್ರಧಾನಿಯಾದ ಸಂದರ್ಭದಲ್ಲಿ ಕಾಂಗ್ರೆಸ್ ನೇಮಕ ಮಾಡಿದ್ದ ಮುಖ್ಯ ಚುನಾವಣಾ ಆಯುಕ್ತರೇ ಅಧಿಕಾರದಲ್ಲಿದ್ದರು ಎಂಬುದನ್ನು ರಾಹುಲ್ ಗಾಂಧಿ ನೆನಪಿಸಿಕೊಳ್ಳಬೇಕು ಎಂದರು.

 

ದೇಶದ ಬಹುತೇಕ ರಾಜ್ಯಗಳಲ್ಲಿ ಜನರು ಕಾಂಗ್ರೆಸ್ ಪಕ್ಷವನ್ನು ತಿರಸ್ಕರಿಸಿದ್ದಾರೆ. ಆದರೂ ಕಾಂಗ್ರೆಸ್ ನಾಯಕರು ಪ್ರಜಾಪ್ರಭುತ್ವದ ಹೆಸರಿನಲ್ಲಿ ಜನರಲ್ಲಿ ಗೊಂದಲ ಮೂಡಿಸುತ್ತಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ತುಷ್ಟೀಕರಣದ ರಾಜಕಾರಣ ಮಾಡುತ್ತಿದೆ. 2019ರಲ್ಲಿ ಪಿಎಫ್‌ಐ ಸಂಘಟನೆಯ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯುವ ಕ್ರಮವೂ ಇದಕ್ಕೆ ಉದಾಹರಣೆಯಾಗಿದೆ ಎಂದು ಆರೋಪಿಸಿದರು.

 

ಕಾಂಗ್ರೆಸ್ ತನ್ನ ಆಡಳಿತಾವಧಿಯಲ್ಲಿ ಸುಮಾರು 50 ಬಾರಿ ಚುನಾಯಿತ ಸರ್ಕಾರಗಳನ್ನು ವಜಾಗೊಳಿಸಿದೆ. ಕರ್ನಾಟಕದಲ್ಲಿಯೂ ಎಸ್.ಆರ್. ಬೊಮ್ಮಾಯಿ ನೇತೃತ್ವದ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಲಾಗಿತ್ತು. ಈ ಮೂಲಕ ಪ್ರಜಾಪ್ರಭುತ್ವದ ಆಶಯಗಳಿಗೆ ಧಕ್ಕೆ ತರುವ ಹಾಗೂ ಸಂವಿಧಾನಾತ್ಮಕ ಸಂಸ್ಥೆಗಳನ್ನು ದುರ್ಬಲಗೊಳಿಸುವ ಕೆಲಸವನ್ನು ಕಾಂಗ್ರೆಸ್ ಮಾಡಿದೆ ಎಂದು ದೂರಿದರು.

ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ರಕ್ಷಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಜನರು ಜಾಗೃತರಾಗಬೇಕು ಎಂದು ಅವರು ಕರೆ ನೀಡಿದರು. ಇದೇ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮಾತನಾಡಿದರು.

LEAVE A REPLY

Please enter your comment!
Please enter your name here

Share post:

spot_imgspot_img

Popular

More like this
Related

ಕಲಬುರಗಿ| ಹಿರಾಪೂರ ಸರ್ಕಲ್‌ನಲ್ಲಿ ಸಂವಿಧಾನ ಸಮರ್ಪಣಾ ದಿನಾಚರಣೆ; 750ಕ್ಕೂ ಹೆಚ್ಚು ಶಾಲಾ ವಿದ್ಯಾರ್ಥಿಗಳಿಂದ ಸಂವಿಧಾನದ ಪ್ರಸ್ತಾವನೆ ವಾಚನ

ಕಲಬುರಗಿ: ನಗರದ ಹಿರಾಪೂರ ಸರ್ಕಲ್‌ನಲ್ಲಿ ಸಂವಿಧಾನ ಸಮರ್ಪಣಾ ದಿನಾಚರಣೆಯ ಅಂಗವಾಗಿ ಸಂವಿಧಾನದ...

ಕಲಬುರಗಿ| 5 ಕೋಟಿ ರೂ.ವೆಚ್ಚದ ಮಾಡಿಯಾಳ-ದೇವಂತಗಿ ರಸ್ತೆ ಕಾಮಗಾರಿಗೆ ಶಾಸಕ ಬಿ.ಆರ್.ಪಾಟೀಲ್ ಚಾಲನೆ

ಕಲಬುರಗಿ: ಸಾರ್ವಜನಿಕ ಕೇಲಸ ನಿರ್ಮಾಣ ಮಾಡುವಾಗ ಯಾವುದೇ ಗುತ್ತಿಗೇದಾರರು ಜನಹಿತ ಗಮನದಲಿರಿಸಿ...

ಕಲಬುರಗಿ| ಶರಣಬಸವ ವಿವಿ ಕ್ರೀಡಾಕೂಟ: ಸೋಮೇಶ್ವರ, ರಮ್ಯಾ ಅತ್ಯಂತ ವೇಗದ ಓಟಗಾರರು

ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದ ನಾಲ್ಕು ದಿನಗಳ ವಾರ್ಷಿಕ ಕ್ರೀಡಾಕೂಟದ 100 ಮೀಟರ್...

ಕಲಬುರಗಿ| ಚಿಂಚೋಳಿ‌ ಭಾಗದ ಕಬ್ಬು ನುರಿಸಲು ಎನ್.ಎಸ್.ಎಲ್, ರೇಣುಕಾ‌ ಶುಗರ್ಸ್, ಕೆ.ಪಿ.ಆರ್ ಕಾರ್ಖಾನೆಗೆ ಹಂಚಿಕೆ ಮಾಡಿ ಡಿ.ಸಿ. ಆದೇಶ

ಕಲಬುರಗಿ: ಜಿಲ್ಲೆಯ ಚಿಂಚೋಳಿ ಸಿದ್ದಸಿರಿ ಸಕ್ಕರೆ ಕಾರ್ಖಾನೆಯು ಪ್ರಸಕ್ತ 2026-27ನೇ ಸಾಲಿಗೆ...