ಶಕುಂತಲಾ ಬಸವರಾಜ ಭೀಮಳ್ಳಿ ಇನ್ನಿಲ್ಲ, ಶಾಲೆಗೆ ರಜೆ ಘೋಷಣೆ

Date:

Share post:

ಕಲಬುರಗಿ: ನಗರದ ಮಕ್ಕಂಪುರ ಬಡಾವಣೆ ನಿವಾಸಿ, ಮದರ್ ತೆರೇಸಾ ಶಾಲೆಯ ಆಡಳಿತ ಮಂಡಳಿ ಸದಸ್ಯೆ ಶಕುಂತಲಾ ಭೀಮಳ್ಳಿ (77) ಶುಕ್ರವಾರ ನಿಧನರಾದರು.

ಅವರಿಗೆ ಪತಿ, ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಮಾಜಿ ಅಧ್ಯಕ್ಷ ಬಸವರಾಜ ಭೀಮಳ್ಳಿ, ಎಚ್‌ಕೆಇ ಸಂಸ್ಥೆಯ ಹಾಲಿ ಉಪಾಧ್ಯಕ್ಷ ರಾಜಾ ಭೀಮಳ್ಳಿ ಸೇರಿದಂತೆ ಇಬ್ಬರು ಪುತ್ರರು ಹಾಗೂ ಪುತ್ರಿ ಇದ್ದಾರೆ.

ಬಸವ ಸಮಿತಿಯ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದ ಶಕುಂತಲಾ ಭೀಮಳ್ಳಿ ಅವರು ಇತ್ತೀಚೆಗೆ ನಡೆದ ಮಹಾದೇವಿಯಕ್ಕಗಳ ಸಮ್ಮೇಳನದಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿದ್ದರು.

ಮೃತರ ಅಂತ್ಯಕ್ರಿಯೆಯು ನಗರದ ಹುಮನಾಬಾದ್ ರಸ್ತೆಯ ಗಂಜ್ ಪ್ರದೇಶದ ಅವರ ದಾಲ್ ಮಿಲ್ ಆವರಣದಲ್ಲಿ ಶನಿವಾರ ಸಂಜೆ 5 ಗಂಟೆಗೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಮೃತರ ಗೌರವಾರ್ಥ ಅವರು ಆಡಳಿತ ಮಂಡಳಿ ಸದಸ್ಯರಾಗಿರುವ ಕಲಬುರಗಿಯ ಮದರ್ ತೆರೆಸಾ ಶಾಲೆಗೆ ಶನಿವಾರ ರಜೆ ಘೋಷಿಸಲಾಗಿದೆ ಎಂದು ವರದಿಯಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ| ಆದಿವಾಸಿ ತಾಂಡಾಗಳಲ್ಲಿ ಮೂಲಸೌಕರ್ಯ ಕೊರತೆ: ಲತಾ ಮೋಹನ್ ಪರಿಶೀಲನೆ

ಕಲಬುರಗಿ: ಜಿಲ್ಲೆಯ ವಿವಿಧ ಆದಿವಾಸಿ ತಾಂಡಾಗಳಿಗೆ ಭೇಟಿ ನೀಡಿದ ಕರ್ನಾಟಕ ರಾಜ್ಯ...

ಕಲಬುರಗಿಯಲ್ಲಿ ಜೋಯಾಲುಕ್ಕಾಸ್‌ನ ‘ಬ್ರಿಲಿಯನ್ಸ್ ಡೈಮಂಡ್ ಜ್ಯುವೆಲ್ಲರಿ ಶೋ’

ಕಲಬುರಗಿ: ಜಗತ್ತಿನ ಪ್ರಸಿದ್ಧ ಜ್ಯುವೆಲ್ಲರಿ ಬ್ರ್ಯಾಂಡ್ ಜೋಯಾಲುಕ್ಕಾಸ್, ಕಲಬುರಗಿ ನಗರದ ತನ್ನ...

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...