ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಪ್ರವಾಸ

Date:

Share post:

ಕಲಬುರಗಿ: ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಬೆಂಗಳೂರಿನಿಂದ ವಿಮಾನದ ಮೂಲಕ ಮೇ 10 ರಂದು ಶನಿವಾರ ಮಧ್ಯಾಹ್ನ 12.05 ಗಂಟೆಗೆ ಕಲಬುರಗಿಗೆ ಆಗಮಿಸುವರು.

ನಂತರ ಅಂದು ಮಧ್ಯಾಹ್ನ 2 ಗಂಟೆಗೆ ಕಲಬುರಗಿ ಕೆ.ಕೆ.ಆರ್.ಡಿ.ಬಿ. ಕಚೇರಿ ಸಭಾಂಗಣದಲ್ಲಿ ಜರುಗುವ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಸಭೆಯಲ್ಲಿ ಭಾಗವಹಿಸುವರು. ನಂತರ ಸಂಜೆ 5.45 ಗಂಟೆಗೆ ಕಲಬುರಗಿಯಿಂದ ರಸ್ತೆ ಮೂಲಕ ಹೈದ್ರಾಬಾದ್‍ಗೆ ಪ್ರಯಾಣಿಸುವರು.

ಮೇ 12 ರಂದು ಸೋಮವಾರ ಮಧ್ಯಾಹ್ನ 12.05 ಗಂಟೆಗೆ ಬೆಂಗಳೂರಿನಿಂದ ಮರಳಿ ಕಲಬುರಗಿಗೆ ಆಗಮಿಸಿ, ಅಂದು ಮಧ್ಯಾಹ್ನ 12.45 ಗಂಟೆಗೆ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕೇಂದ್ರ ವಲಯದ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸುವರು.

Share post:

spot_imgspot_img

Popular

More like this
Related

ಕಲಬುರಗಿ ಸೆಂಟ್ರಲ್ ಜೈಲಿನಿಂದ ಮೂವರು ಕೈದಿಗಳ ಪರಾರಿ; ತೀವ್ರ ಶೋಧ ಆರಂಭ

ಕಲಬುರಗಿ: ನಗರದ ಜೇವರ್ಗಿ ರಸ್ತೆಯಲ್ಲಿರುವ ಸೆಂಟ್ರಲ್ ಜೈಲಿನಿಂದ ಕೊಲೆ ಪ್ರಕರಣಗಳಲ್ಲಿ ಶಿಕ್ಷೆ...

ಕಲಬುರಗಿ| ಎಸ್ಐಆರ್: ಶೇ.100ರಷ್ಟು ಗಣತಿ ನಮೂನೆ ವಿತರಣೆ ಮಾಡಿ: ವಿ.ಅನ್ಬುಕುಮಾರ್

ಕಲಬುರಗಿ: ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಬಿ.ಎಲ್.ಓ.ಗಳು ತಮ್ಮ ಬಳಿ...

ಕಲಬುರಗಿಗೆ ನಿರಂತರ ನೀರು ಪೂರೈಕೆ ಯೋಜನೆಯ ಕಾಮಗಾರಿ ಮುಗಿಸಿ: ಸಚಿವ ಯತೀಂದ್ರ ಸಿದ್ಧರಾಮಯ್ಯ ವಾರ್ನಿಂಗ್

ಕಲಬುರಗಿ: ಕಲಬುರಗಿ ಮಹಾನಗರಕ್ಕೆ ನಿರಂತರ ಕುಡಿಯುವ ನೀರು ಪೂರೈಕೆ 24x7 ಯೋಜನೆಯ...

Kalaburagi| ಊಟ ಸೇವನೆಯಿಂದ ಮಕ್ಕಳ ಅಸ್ವಸ್ಥ ಪ್ರಕರಣ: ಶಾಲೆಯ ಪ್ರಭಾರಿ ಪ್ರಾಂಶುಪಾಲ, ವಾರ್ಡನ್ ಅಮಾನತ್ತು

ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದ ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತರ...