ಕಲಬುರಗಿ| ಗಾಣಗಾಪೂರದಲ್ಲಿ ಸ್ನಾನ ಘಾಟ್ ನಿರ್ಮಾಣಕ್ಕೆ ನಿರ್ಧಾರ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್

Date:

Share post:

ಕಲಬುರಗಿ: ಅಫಜಲಪೂರ ತಾಲೂಕಿನ ಸುಕ್ಷೇತ್ರ ದೇವಲ ಗಾಣಗಾಪೂರದ ಸಂಗಮ ಸ್ಥಳದಲ್ಲಿ ಯಾತ್ರಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಅವಶ್ಯವಿರುವ ಕಡೆ 5 ಕೋಟಿ ರೂ. ವೆಚ್ಚದಲ್ಲಿ ಸ್ನಾನ್ ಘಾಟ್ ನಿರ್ಮಿಸಲಾಗುವುದು ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ತಿಳಿಸಿದ್ದಾರೆ.

ಶ್ರೀ ದತ್ತಾತ್ರೇಯನ ದೇವಸ್ಥಾನ ಅಭಿವೃದ್ದಿ ಕುರಿತಂತೆ ಇತ್ತೀಚೆಗೆ ಅಫಜಲಪೂರ ಶಾಸಕ ಎಂ.ವೈ.ಪಾಟೀಲ ಮತ್ತು ಸಂಬಂಧಿತ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಕರ್ನಾಟಕ ನೀರಾವರಿ ನಿಗಮದಿಂದ ಅನುದಾನ ಪಡೆದು ಸ್ನಾನ್ ಘಾಟ್ ನಿರ್ಮಿಸಲಾಗುವುದು ಎಂದರು.

ಇನ್ನು ಸ್ನಾನ ಘಾಟ್ ದಲ್ಲಿ ಭಕ್ತರು ತೀರ್ಥ ಸ್ನಾನದ‌ ನಂತರ ಸಂಗಮದಲ್ಲಿ ಬಟ್ಟೆ ಬಿಡುತ್ತಿದ್ದು, ಇದು ಜಲ ಮಾಲಿನ್ಯಕ್ಕೆ ಕಾರಣವಾಗುತ್ತಿದೆ. ಹೀಗಾಗಿ ಜಲ ಮಲೀನವಾಗುವುದನ್ನು ತಡೆಗಟ್ಟಲು ಸದರಿ ಬಟ್ಟೆಗಳನ್ನು ವೈಜ್ಞಾನಿಕವಾಗಿ ಬರ್ನ್ ಮಾಡಲು ಯಂತ್ರ ಖರೀದಿಗೆ ಡಿ.ಸಿ. ಸೂಚಿಸಿದರು.

ದೇವಸ್ಥಾನಕ್ಕೆ ಬರುವ ಭಕ್ತಾದಿಗಳಿಗೆ ಪ್ರಸಾದ ವಿತರಣೆಗೆ ದಾಸೋಹ ಭವನ ತೆರೆಯಬೇಕು. ಇದಕ್ಕಾಗಿ ದಾನಿಗಳ ನೆರವು ಪಡೆಯಲು ಮತ್ತು ಪ್ರತ್ಯೇಕ ಬ್ಯಾಂಕ್ ಖಾತೆ ತೆರೆಯುವಂತೆ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಡಿ.ಸಿ. ಅವರು, ಸಾರ್ವಜನಿಕರು ಇದಲ್ಲದೆ “ಪ್ರಸಾದ” ಯೋಜನೆಯಡಿ ದೇವಸ್ಥಾನ ಅಭಿವೃದ್ಧಿಗೆ 83.52 ಕೋಟಿ ರೂ. ಮೊತ್ತದ ಕ್ರಿಯಾ ಯೋಜನೆಯನ್ನು ರೂಪಿಸಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು ಸಲ್ಲಿಸಿದ್ದು, ಇದು ಅನುಮೋದನೆಯಾಗಿ ಅನುದಾನ ಬಿಡುಗಡೆಯಾದಲ್ಲಿ ದೇವಸ್ಥಾನ ಮತ್ತು ಗಾಣಗಾಪೂರದ ಅಭಿವೃದ್ಧಿಗೆ ಶುಕ್ರದೆಸೆ ಬರಲಿದೆ‌ ಎಂದರು.

ಸಭೆಯಲ್ಲಿ ಪ್ರವಾಸೋದ್ಯಮ ಇಲಾಖೆಯ ಪ್ರಭಾರಿ ಉಪನಿರ್ದೇಶಕಿ ಅನುಸುಯಾ ಹೂಗಾರ, ಅಫಜಲಪೂರ ತಹಶೀಲ್ದಾರ ಸಂಜೀವಕುಮಾರ ದಾಸರ್, ಲೊಕೋಪಯೋಗಿ ಇಲಾಖೆಯ ಎ.ಇ.ಇ ಲಕ್ಷ್ಮಿ ಕಾಂತ ನಾಯಕ್, ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಶಿವಕಾಂತಮ್ಮ ಸೇರಿದಂತೆ ಅನೇಕ ಅಧಿಕಾರಿಗಳು ಭಾಗವಹಿಸಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ನುಡಿದಂತೆ ನಡೆಯುವ ಸರ್ಕಾರ‌ ನಮ್ಮದು, ಇದೂವರೆಗೆ 243 ಭರವಸೆ ಈಡೇರಿಸಿದ್ದೇವೆ: ಸಿದ್ದರಾಮಯ್ಯ

ಕಲಬುರಗಿ: ಚುನಾವಣೆ ಪೂರ್ವ ನೀಡಿದ ಭರವಸೆಯಂತೆ ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆ...

ಕಲಬುರಗಿ| ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಸರ್ಕಾರ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್

ಕಲಬುರಗಿ: "ನಮ್ಮ ಪಕ್ಷ ಚುನಾವಣೆಗೂ ಮುನ್ನ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನ...

ಕಲಬುರಗಿ| ಸುಗಮ ಆಡಳಿತಕ್ಕಾಗಿ ಪ್ರಜಾಸೌಧಗಳ ನಿರ್ಮಾಣ: ಡಾ.ಅಜಯ್ ಧರ್ಮಸಿಂಗ್

ಕಲಬುರಗಿ: ಸುಗಮ ಆಡಳಿತಕ್ಕಾಗಿ ಹೊಸ ತಾಲ್ಲೂಕುಗಳನ್ನು ಘೋಷಣೆ ಮಾಡಲಾಗಿದೆ. ಈ ಭಾಗದ...

ಕಲಬುರಗಿ| ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಕರ ನೇಮಕಾತಿ ಮಾಡಿ: ಮಲ್ಲಿಕಾರ್ಜುನ ಖರ್ಗೆ  

ಕಲಬುರಗಿ: ಕಲ್ಯಾಣ ಕರ್ನಾಟಕ ಶೈಕ್ಷಣಿಕವಾಗಿ ಹಿಂದುಳಿಯಲು ಮುಖ್ಯ ಕಾರಣ ಈ ಭಾಗದಲ್ಲಿ...