ಚಿಂಚೋಳಿ: ಶಾದಿಪುರ ಗ್ರಾಮ ಪಂಚಾಯತ್ ನ ಆಡಳಿತ ದೌರ್ಬಲ್ಯದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯಿಂದ ಆಕ್ರೋಶ

Date:

Share post:

ಕಲಬುರಗಿ: ಚಿಂಚೋಳಿ ತಾಲ್ಲೂಕಿನ ಶಾದಿಪುರ ಗ್ರಾಮ ಪಂಚಾಯತ್ ಕಚೇರಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳ ನಿರ್ಲಕ್ಷ್ಯ ಮತ್ತು ಆಡಳಿತದ ದೌರ್ಬಲ್ಯದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಗ್ರಾಮ ಪಂಚಾಯತ್ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಜ್ಯೋತಿ ಅವರು ಕಚೇರಿಗೆ ನಿಯಮಿತವಾಗಿ ಹಾಜರಾಗದೇ, ಹಾಜರಾತಿ ನಿಯಮಗಳನ್ನು ಉಲ್ಲಂಘಿಸುತ್ತಿದ್ದಾರೆ. ಅವರ ನಿರ್ಲಕ್ಷ್ಯದಿಂದ ಕಚೇರಿಯ ದೈನಂದಿನ ಕಾರ್ಯಗಳು ವಿಳಂಬವಾಗುತ್ತಿದ್ದು, ಸಾರ್ವಜನಿಕ ಸೇವೆಗಳ ಗುಣಮಟ್ಟವು ಕುಸಿತಕ್ಕೀಡಾಗಿದೆ. ಹಳೆ ಕಾರ್ಯದರ್ಶಿಯವರು ನಿಷ್ಠೆಯಿಂದ ತಮ್ಮ ಕರ್ತವ್ಯಗಳನ್ನು ನಿರ್ವಹಿಸುತ್ತಿದ್ದರು. ಆದರೆ ಇವರು ಎಲ್ಲಾ ನಿಯಮಗಳನ್ನು ಉಲ್ಲಂಘಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಇದೇ ರೀತಿಯಲ್ಲಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO) ಸಹ ಅನಿಯಮಿತ ಹಾಜರಾತಿಯಿಂದ ಆಡಳಿತಾತ್ಮಕ ವ್ಯವಹಾರಗಳಲ್ಲಿ ಗೊಂದಲ ಉಂಟಾಗಿದ್ದು, ಸಾರ್ವಜನಿಕರಿಗೆ ಅನುಕೂಲವಾಗಬೇಕಾದ ಯೋಜನೆಗಳಲ್ಲಿ ವಿಳಂಬ ಉಂಟಾಗಿದೆ. ವಿಶೇಷವಾಗಿ ಮನರೇಗಾ ಯೋಜನೆಯಡಿಯಲ್ಲಿ ಕಾರ್ಮಿಕರಿಗೆ ಕೂಲಿ ಪಾವತಿಯಲ್ಲಿ ವಿಳಂಬವಾಗಿದೆ ಎಂದು ಸೇನೆಯ ಪದಾಧಿಕಾರಿಗಳು, ಚಿಂಚೋಳಿ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಲಿಂಬಾಜಿ ಚವ್ಹಾಣ್, ಜಗದೀಶ್, ಭಾಗ್ಯವಂತ್, ವಿಠಲ್ ಚವಾಣ್, ವಿನೋದ್ ಪವಾರ್, ಶಂಕರ್ ಪವಾರ್, ನರ್ಸಿಂಗ್ ಚೌಹಾಣ್, ಸುಭಾಷ್ ಸಿ ರಾಥೋಡ್, ಹೀರಾ ರಾಥೋಡ್, ಅರವಿಂದ್ ಜಾದವ್, ಪಂಡಿತ ಪವಾರ್ ಇದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಸರ್ಕಾರಿ ಅಭಿಯೋಜಕರಿಗೆ ₹5 ಸಾವಿರ ಲಂಚ ನೀಡಲು ಯತ್ನಿಸಿದ ತಂದೆ-ಮಗ ಲೋಕಾ ವಶಕ್ಕೆ

ಕಲಬುರಗಿ: ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಅನುಕೂಲವಾಗುವಂತೆ ಸಹಕರಿಸುವ ಉದ್ದೇಶದಿಂದ...

ಕಲಬುರಗಿ| ಆಸ್ತಿಗಾಗಿ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

ಕಲಬುರಗಿ: ಆಸ್ತಿಗಾಗಿ ವ್ಯಕ್ತಿಯೊಬ್ಬ ತನ್ನ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ...

ಕಲಬುರಗಿ| ಬ್ರೇನ್ ಟಿಬಿಯಿಂದ ಬಳಲುತ್ತಿದ್ದ ತಾಯಿಗೆ ಯಶಸ್ವಿ ಚಿಕಿತ್ಸೆ ನೀಡಿದ ಜೀವ ಕಾಪಾಡಿದ ಬಸವೇಶ್ವರ ಆಸ್ಪತ್ರೆ ವೈದ್ಯರು

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ...

ಕಲಬುರಗಿ| ಕಾಳ‌ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಡಿಸ್ಟ್ರಿಬೂಟರ್ ಮೇಲೆ ಕ್ರಮ: ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್

ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ‌ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ...