ಕಲಬುರಗಿ| ನಾಗರಿಕ ರಕ್ಷಣಾಗಾಗಿ “ಅಪರೇಷನ್‌ ಅಭ್ಯಾಸ್” ಅಣುಕು ಪ್ರದರ್ಶನ: ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್

Date:

Share post:

ಕಲಬುರಗಿ; “ಅಪರೇಷನ್ ಅಭ್ಯಾಸ್” ನಾಗರಿಕ ರಕ್ಷಣಾ ಕಾರ್ಯಚರಣೆಯ ಅಣುಕು ಪ್ರದರ್ಶನ ಶೀಘ್ರದಲ್ಲಿಯೇ ಕಲಬುರಗಿ ನಗರ ಹಾಗೂ ಜಿಲ್ಲೆಯ ವಿವಿಧ ಕಡೆ ಆಯೋಜಿಸಬೇಕಾಗಿರುವ ಹಿನ್ನೆಲೆಯಲ್ಲಿ ಎಲ್ಲಾ ರೀತಿಯ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಡಿ.ಸಿ. ಬಿ.ಫೌಜಿಯಾ ತರನ್ನುಮ್ ಅವರು ಸೂಚನೆ ನೀಡಿದರು.

ಬುಧವಾರ ತಮ್ಮ‌ ಕಚೇರಿ ಸಭಾಂಗಣದಲ್ಲಿ ಈ ಸಂಬಂಧ ಪೂರ್ವಭಾವಿ ಸಭೆ ನಡೆಸಿದ ಅವರು, ಸಂಬಂಧಪಟ್ಟ ಎಲ್ಲಾ ಇಲಾಖೆಯ ಅಧಿಕಾರಿಗಳು ಈ ಅಣುಕು ಪ್ರದರ್ಶನದಲ್ಲಿ ಸಕ್ರಿಯವಾಗಿ ಭಾಗವಹಿಸಿ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ರಕ್ಷಣಾ ಕಾರ್ಯಚರಣೆ ಯಾವ ರೀತಿಯಾಗಿ ನಡೆಯುತ್ತದೆ ಎಂಬುದರ ಕುರಿತು ಅಣಕು ಪ್ರದರ್ಶನದ‌ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸುವುದು ಇದರ ಉದ್ದೇಶವಾಗಿದೆ ಎಂದರು.

ಶಾಲಾ-ಕಾಲೇಜು, ವಾಣಿಜ್ಯ ಅಂಗಡಿ-ಮುಂಗಟ್ಟುಗಳು ಹಾಗೂ ಕೈಗಾರಿಕೆ ಪ್ರದೇಶದಲ್ಲಿ ನಾಗರಿಕ ರಕ್ಷಣಾ ಕಾರ್ಯಚರಣೆ ಕುರಿತು ಹೆಚ್ಚಿನ ರೀತಿಯಲ್ಲಿ ಜನಜಾಗೃತಿ ಮೂಡಿಸಬೇಕು. ಈ ಕುರಿತು ಎಸ್.ಓ.ಪಿ ಜಾರಿಗೊಳಿಸಬೇಕು ಎಂದು ಪೊಲೀಸ್ ಸೇರಿದಂತೆ ಸಂಬಂಧಪಟ್ಟ ಇಲಾಖೆಗೆ ನಿರ್ದೇಶನ ನೀಡಲಾಯಿತು.

ಇನ್ನು ಕಲಬುರಗಿ ನಗರದಲ್ಲಿ 10 ನಿಮಿಷಗಳ ಕಾಲ ಬ್ಲ್ಯಾಕ್ ಔಟ್ ಮಾಡಲು ನಿರ್ಧರಿಸಿದ್ದು, ಕೂಡಲೆ ಜೆಸ್ಕಾಂ ಮತ್ತು ಕೆ.ಪಿ.ಟಿ.ಸಿ.ಎಲ್ ಅಧಿಕಾರಿಗಳು ಅಗತ್ಯ ಮುಂಜಾಗ್ರತೆ ಕ್ರಮ ಕೈಗೊಂಡು ದಿನಾಂಕ ನಿಗದಿಪಡಿಸಿ ಮೊದಲೆ ಸಾರ್ವಜನಿಕರಿಗೆ ತಿಳಿಸಬೇಕು ಎಂದರು.

ಸಭೆಯಲ್ಲಿ ಎಸ್.ಪಿ. ಅಡ್ಡೂರು ಶ್ರೀನಿವಾಸಲು, ಡಿ.ಸಿ.ಪಿ. ಕನಿಕಾ ಸಿಕ್ರಿವಾಲ್, ಡಿ.ಸಿ.ಎಫ್ ಸುಮಿತ್ ಪಾಟೀಲ, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಸಹಾಯಕ ಆಯುಕ್ತ ಪ್ರಭುರೆಡ್ಡಿ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಶಿಕ್ಷಣದ ಜ್ಯೋತಿ ಹೊತ್ತಿಸಿದ ಮಹಾದೇವಪ್ಪ ರಾಂಪುರೆ: ಡಾ.ಮಹೇಶ ಗಂವ್ಹಾರ

ಕಲಬುರಗಿ: ಅಂದಿನ ಹೈದ್ರಾಬಾದ್ ಕರ್ನಾಟಕದಲ್ಲಿ ಶಿಕ್ಷಣದ ಜ್ಯೋತಿ ಹೊತ್ತಿಸಿದ ಪುಣ್ಯಾತ್ಮ ಮಹಾದೇವಪ್ಪ...

ಕಲಬುರಗಿ| ಸರಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಕಲಬುರಗಿ: ನಗರದಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಫೌಜಿಯಾ...

ಕಲಬುರಗಿ| ಜಿಲ್ಲಾಧಿಕಾರಿಗಳಿಂದ ಸಿಟಿ ರೌಂಡ್: ರಸ್ತೆ ದುರಸ್ತಿ,‌ ಗುಂಡಿ ಮುಚ್ಚುವ ಕಾರ್ಯ ಪರಿಶೀಲನೆ

ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಮತ್ತು ಮಹಾನಗರ ಪಾಲಿಕೆ ಆಯುಕ್ತ ಅವಿನಾಶ...

ಕಲಬುರಗಿ| ಬಾಲ್ಯ ವಿವಾಹ, ಫೋಕ್ಸೋ ಪ್ರಕರಣಗಳ ಬಗ್ಗೆ ನಿಗಾವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಬಿ.ಫೌಜಿಯಾ ಸೂಚನೆ

ಕಲಬುರಗಿ: ಬಾಲ್ಯವಿವಾಹ ಮತ್ತು ಫೋಕ್ಸೋ ಪ್ರಕರಣಗಳು ಕಂಡು ಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳು...