ಕಲಬುರಗಿ| ಯಾದಗಿರಿ ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತರ ದಾಳಿ

Date:

Share post:

ಕಲಬುರಗಿ: ನಗರದ ಅಕ್ಕಮಹಾದೇವಿ ಬಡಾವಣೆಯಲ್ಲಿರುವ ಯಾದಗಿರಿ ಜಿಲ್ಲೆಯ ತಹಶೀಲ್ದಾರ್ ಉಮಾಕಾಂತ ಹಳ್ಳೆ ಅವರ ಮನೆಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ.

ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ ಹಿನ್ನೆಲೆ ದಾಳಿ ಮಾಡಿ ಪರಿಶೀಲನೆ ಮಾಡಲಾಗಿದೆ. ಇತ್ತ ಯಾದಗಿರಿ ಜಿಲ್ಲೆಯ ಶಹಾಪುರ ತಹಶೀಲ್ದಾರ್ ಕಚೇರಿ ಮೇಲೂ ದಾಳಿ ಮಾಡಲಾಗಿದೆ. ಮನೆ ಮತ್ತು ಕಚೇರಿಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಪ್ರಮುಖ ಕಡತಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.

ಲೋಕಾಯುಕ್ತ ಡಿವೈಎಸ್ಪಿ ಜೆ.ಎಚ್.ಇನಾಂದಾರ್‌ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಈ ಸಂದರ್ಭದಲ್ಲಿ ಇನ್ಸ್‌ಪೆಕ್ಟರ್ ಗಳಾದ ಸಿದ್ದರಾಯ, ಸಂಗಮೇಶ, ಅರ್ಜುನಪ್ಪ, ಅಕ್ಕಮಹಾದೇವಿ, ಬಾಬಾ ಸಾಹೇಬ ಪಾಟೀಲ್ ಅವರು ದಾಳಿಯ ತಂಡದಲ್ಲಿದ್ದರು.

Share post:

spot_imgspot_img

Popular

More like this
Related

ಕಲಬುರಗಿ: ಕಲಬುರಗಿ ಜಿಲ್ಲೆಯ ಪ್ರವಾಸೋದ್ಯಮಕ್ಕಾಗಿ ಮುಖ್ಯಮಂತ್ರಿಗಳಿಂದ ಕಾಫಿ ಟೇಬಲ್ ಪುಸ್ತಕ, ಬ್ರೋಶರ್ ಬಿಡುಗಡೆ

ಕಲಬುರಗಿ: ಕಲಬುರಗಿ ಜಿಲ್ಲೆಯ ಪ್ರವಾಸೋದ್ಯಮವನ್ನು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರಪಡಿಸಲು...

ಕಲಬುರಗಿ| ಆತ್ಮ ವಿಶ್ವಾಸದಿಂದ ಪರೀಕ್ಷೆ ಎದುರಿಸಿ,ಹೆಚ್ಚು ಅಂಕ ಪಡೆದು ಜಿಲ್ಲೆಯ ಕೀರ್ತಿ ಹೆಚ್ಚಿಸಿ: ಭಂವರ್ ಸಿಂಗ್ ಮೀನಾ

ಕಲಬುರಗಿ: ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18...

ಕಲಬುರಗಿ| ಸೆಂಟ್ರಲ್ ಜೈಲಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹ ಹಾಗೂ ಕಡಗಂಚಿ ಕಾರ್ಮೇಲ್ ಜ್ಯೋತಿ ಪಬ್ಲಿಕ್...

ಕಲಬುರಗಿ| ಎಸ್ಸೆಸ್ಸೆಲ್ಸಿ ಪರೀಕ್ಷೆ: ಒತ್ತಡ ಬಿಟ್ಟು ಸಂತೋಷದಿಂದ ಪರೀಕ್ಷೆ ಬರೆಯುವಂತೆ ಜಿಲ್ಲಾಧಿಕಾರಿ ಪತ್ರ

ಕಲಬುರಗಿ: ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18...