ಕಲಬುರಗಿ| ಕಲಾವಿದ ರೆಹಮಾನ್ ಪಟೇಲ್ ಗೆ ಕರ್ನಾಟಕ ಲಲಿತಕಲಾ ಅಕಾಡೆಮಿ ಪ್ರಶಸ್ತಿ; ಮೇ23ರಂದು ಪ್ರದಾನ

Date:

Share post:

ಕಲಬುರಗಿ: ಕಲಾವಿದ ರೆಹಮಾನ ಪಟೇಲ್ ಅವರನ್ನು 2022–23ನೇ ಸಾಲಿನ 52ನೇ ವಾರ್ಷಿಕ ಕರ್ನಾಟಕ ರಾಜ್ಯ ಲಲಿತಕಲಾ ಅಕಾಡೆಮಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಸಾಂಪ್ರದಾಯಿಕ ಲಘುಚಿತ್ರಕಲೆಯ ಕೃತಿ “ಮಧ್ಯಮದಿ ರಾಗ” ಈ ಪ್ರಶಸ್ತಿಗೆ ಆಯ್ಕೆಯಾಗಿದೆ. ಈ ಪ್ರಶಸ್ತಿಯಲ್ಲಿ 25,000 ನಗದು ಬಹುಮಾನ ಮತ್ತು ಪ್ರಮಾಣಪತ್ರವಿದೆ.

ಪ್ರಶಸ್ತಿ ಪಡೆದ ಚಿತ್ರಕಲಾ ಪ್ರದರ್ಶನವು ಮೇ 23 ರಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರು ನಗರದ ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ವಲ್ರ್ಡ್ ಕಲ್ಚರ ನಲ್ಲಿ ನಡೆಯಲಿದೆ. ಅದೇ ದಿನ ಸಂಜೆ 5 ಗಂಟೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರಶಸ್ತಿಗಳನ್ನು ವಿಜೇತರಿಗೆ ಪ್ರದಾನ ಮಾಡಲಾಗುವುದು ಎಂದು ಅಕಾಡೆಮಿಯ ರಿಜಿಸ್ಟ್ರಾರ್ ಬೀ. ನೀಲಮ್ಮರವರು ಪತ್ರದಲ್ಲಿ ತಿಳಿಸಿದ್ದಾರೆ.

ರೆಹಮಾನ್ ಪಟೇಲ್ ಅವರು ಕಳೆದ ಎರಡು ದಶಕಗಳಿಂದ ಸುರಪುರ ಲಘುಚಿತ್ರಕಲೆ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಕಲಾರೂಪವು 1773 ರಿಂದ 1858ರವರೆಗೆ ಸುರಪುರ ನಾಯಕರ ಆಳ್ವಿಕೆಯಲ್ಲಿ ಅರಳಿದಿತ್ತು.

Share post:

spot_imgspot_img

Popular

More like this
Related

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...