ಕಲಬುರಗಿ| ಗರಿಷ್ಠ ಅಂಕ ಪಡೆದವರಿಗೆ ಮೇ25ರಂದು ಪ್ರಶಸ್ತಿ ಪ್ರದಾನ: ವಿಜಯಕುಮಾರ ತೇಗಲತಿಪ್ಪಿ

Date:

Share post:

ಕಲಬುರಗಿ: ಪ್ರಸಕ್ತ ಸಾಲಿನ ಹತ್ತನೇ ಪರೀಕ್ಷೆಯ ಕನ್ನಡ ವಿಷಯದಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಕಲಬುರಗಿ ನಗರದ ವಿದ್ಯಾರ್ಥಿಗಳನ್ನು ಪುರಸ್ಕರಿಸುವ ಮೂಲಕ ಅವರಲ್ಲಿ ಮಾತೃ ಭಾಷಾಭಿಮಾನ, ನಾಡು-ನುಡಿಯ ಬಗ್ಗೆ ಗೌರವ ಹೆಚ್ಚಿಸಲು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮುಂದಾಗಿದ್ದು, ಕನ್ನಡ ಅಂಕವೀರರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ಇದೇ 25 ರ ಬೆಳಗ್ಗೆ 10.30 ಕ್ಕೆ ನಗರದ ಕನ್ನಡ ಭವನದಲ್ಲಿ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದ್ದಾರೆ.

ಇವತ್ತಿನ ಸ್ಪರ್ಧಾತ್ಮಕ ಯುಗದಲ್ಲಿ ಕನ್ನಡ ಭಾಷೆಯ ಉಳಿವಿಗೆ ಸಂಘಟಿತ ಪ್ರಯತ್ನ ಅಗತ್ಯವಾಗಿದೆ. ಮಾತೃಭಾಷೆಯ ಬೆಳವಣಿಗೆಗೆ ಶ್ರಮಿಸುವುದು ಪ್ರತಿಯೊಬ್ಬ ಕನ್ನಡಿಗನ ಕರ್ತವ್ಯವಾಗಿದೆ. ಇಂದಿನ ಹೊಸ ಪೀಳಿಗೆಯಲ್ಲಿ ಕನ್ನಡ ಭಾಷೆಯ ಅಭಿಮಾನದ ಕಿಚ್ಚು ಹಚ್ಚುವ ಮತ್ತು ಸಾಧನೆಯ ಹೊಸ ಕನಸು ಬಿತ್ತುವ ಪ್ರಾಮಾಣಿಕ ಕಾರ್ಯ  ಪರಿಷತ್ತು ಮಾಡುತ್ತಿದೆ ಎಂದು ಅವರು ವಿವರಿಸಿದರು.

ಕಲಬುರಗಿ ನಗರದ ವ್ಯಾಪ್ತಿಯಲ್ಲಿ ಬರುವ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳು 125ರ ಪೈಕಿ 120 ಕ್ಕೂ ಹೆಚ್ಚು, ಆಂಗ್ಲ ಮಾಧ್ಯಮದ ವಿದ್ಯಾರ್ಥಿಗಳು ಕನ್ನಡದಲ್ಲಿ 100ಕ್ಕೆ 95ಕ್ಕೂ ಹೆಚ್ಚು ಅಂಕ ಪಡೆದ ಆಸಕ್ತ ವಿದ್ಯಾರ್ಥಿಗಳು ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ : 9886560869 ಗೆ ಸಂಪರ್ಕಿಸಿ ತಮ್ಮ ಹೆಸರನ್ನು 20ನೇ ತಾರೀಖಿನೊಳಗೆ ನೋಂದಾಯಿಸಲು ಕೋರಲಾಗಿದೆ.

 

Share post:

spot_imgspot_img

Popular

More like this
Related

ಕಲಬುರಗಿ| ಶಿಕ್ಷಣದ ಜ್ಯೋತಿ ಹೊತ್ತಿಸಿದ ಮಹಾದೇವಪ್ಪ ರಾಂಪುರೆ: ಡಾ.ಮಹೇಶ ಗಂವ್ಹಾರ

ಕಲಬುರಗಿ: ಅಂದಿನ ಹೈದ್ರಾಬಾದ್ ಕರ್ನಾಟಕದಲ್ಲಿ ಶಿಕ್ಷಣದ ಜ್ಯೋತಿ ಹೊತ್ತಿಸಿದ ಪುಣ್ಯಾತ್ಮ ಮಹಾದೇವಪ್ಪ...

ಕಲಬುರಗಿ| ಸರಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಕಲಬುರಗಿ: ನಗರದಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಫೌಜಿಯಾ...

ಕಲಬುರಗಿ| ಜಿಲ್ಲಾಧಿಕಾರಿಗಳಿಂದ ಸಿಟಿ ರೌಂಡ್: ರಸ್ತೆ ದುರಸ್ತಿ,‌ ಗುಂಡಿ ಮುಚ್ಚುವ ಕಾರ್ಯ ಪರಿಶೀಲನೆ

ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಮತ್ತು ಮಹಾನಗರ ಪಾಲಿಕೆ ಆಯುಕ್ತ ಅವಿನಾಶ...

ಕಲಬುರಗಿ| ಬಾಲ್ಯ ವಿವಾಹ, ಫೋಕ್ಸೋ ಪ್ರಕರಣಗಳ ಬಗ್ಗೆ ನಿಗಾವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಬಿ.ಫೌಜಿಯಾ ಸೂಚನೆ

ಕಲಬುರಗಿ: ಬಾಲ್ಯವಿವಾಹ ಮತ್ತು ಫೋಕ್ಸೋ ಪ್ರಕರಣಗಳು ಕಂಡು ಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳು...