ಕಲಬುರಗಿ| ಸಾಮಾಜಿಕ ಜಾಲತಾಣಕ್ಕಿಂತ ಸಮಾಜ ಮುಖ್ಯ: ಸತ್ಯಂಪೇಟೆ

Date:

Share post:

ಕಲಬುರಗಿ: ಯಾವುದೋ ಭ್ರಮಾಲೋಕದಲ್ಲಿ ಮುಳುಗಿ ಗೊಂದಲದ ಗೂಡಾಗಿರುವ ಇಂದಿನ ಯುವಕರು ಸಂವಿಧಾದ ರಕ್ಷಣೆಗೆ ಮುಂದಾಗಬೇಕು ಎಂದು ಲೇಖಕ ಡಾ. ಶಿವರಂಜನ ಸತ್ಯಂಪೇಟೆ ಹೇಳಿದರು.

ನಗರದ ಹೊರ ವಲಯದಲ್ಲಿರುವ ಪಂಚಾಯತ್ ರಾಜ್ ಇಲಾಖೆಯ ಅಬ್ದುಲ್ ನಜೀರ್ ಸಾಬ್ ತರಬೇತಿ ಕೇಂದ್ರದಲ್ಲಿ ಸೋಮವಾರ ಆಯೋಜಿಸಿದ್ದ 4ನೇ ದಿನದ ತರಬೇತಿ ಕಾರ್ಯಕ್ರಮದಲ್ಲಿ ಸಂವಿಧಾನ‌ ಮತ್ತು ಮಾಧ್ಯಮ ವಿಷಯ ಕುರಿತು ಮಾತನಾಡಿದ ಅವರು, ಪ್ರಬಲ ಮಾಧ್ಯಮವಾಗಿ ಬೆಳೆಯುತ್ತಿರುವ ಸಾಮಾಜಿಕ ಜಾಲತಾಣ ನೆಚ್ಚಿಕೊಂಡಿರುವ ಯುವಕರಿಗೆ ಸಮಾಜ ಮುಖ್ಯವಾಗಬೇಕು ಎಂದು ಕರೆ ನೀಡಿದರು.

ಬಸವಣ್ಣನವರು ಕಳಬೇಡ, ಕೊಲಬೇಡ ಎಂಬ ವಚನದ ಮೂಲಕ ಸಾರ್ಥಕ ಬದುಕಿಗೆ ಸಪ್ತ ಸೂತ್ರಗಳನ್ನು ಹೇಳಿದರೆ, ಡಾ. ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಭಾರತೀಯರ ಬದುಕಿಗೆ ಘನತೆ ತಂದು ಕೊಟ್ಟರು ಎಂದು ಅಭಿಪ್ರಾಯಪಟ್ಟರು.

ಸಂವಿಧಾನದ ರಕ್ಷಣೆಯಲ್ಲಿ ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಮಾಧ್ಯಮದ ಮೇಲೆ ಸಾಕಷ್ಟು ಜವಾಬ್ದಾರಿಯಿದ್ದು, ಸಂವಿಧಾನದ ಓದು ಮತ್ತು ಅನುಸರಣೆ ಬಹಳ ಅಗತ್ಯ ಎಂದು ಅವರು ಪ್ರತಿಪಾದಿಸಿದರು.

ಅಧ್ಯಕ್ಷತೆ ವಹಿಸಿದ್ದ ತರಬೇತಿ ಕೇಂದ್ರದ ಹಿರಿಯ ಕಾರ್ಯಕ್ರಮಾಧಿಕಾರಿ ನಾಗೇಶ ಹರಳಯ್ಯ ಮಾತನಾಡಿ, ಸಂವಿಧಾನವನ್ನು ಕೇವಲ ಶಾಸನವನ್ನಾಗಿ ನೋಡದೆ, ಸಂವಿಧಾನವನ್ನು ಮೌಲ್ಯವಾಗಿ ನೋಡಬೇಕು ಎಂಬ ದಿಸೆಯಲ್ಲಿ ಶಿಕ್ಷಣ ಮತ್ತು ಸಂವಿಧಾನ, ಸಂವಿಧಾನ ಮತ್ತು ಲಿಂಗ ಸಮಾನತೆ, ಸಂವಿಧಾನ ಮತ್ತು ಮಾಧ್ಯಮ ಎಂಬಿತ್ಯಾದಿ ವಿಷಯಗಳ ಮೂಲಕ ಯುವಕರಲ್ಲಿ ಜಾಗ್ರತೆ ಮೂಡಿಸಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ತರಬೇತಿ ಕೇಂದ್ರದ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ನುಡಿದಂತೆ ನಡೆಯುವ ಸರ್ಕಾರ‌ ನಮ್ಮದು, ಇದೂವರೆಗೆ 243 ಭರವಸೆ ಈಡೇರಿಸಿದ್ದೇವೆ: ಸಿದ್ದರಾಮಯ್ಯ

ಕಲಬುರಗಿ: ಚುನಾವಣೆ ಪೂರ್ವ ನೀಡಿದ ಭರವಸೆಯಂತೆ ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆ...

ಕಲಬುರಗಿ| ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಸರ್ಕಾರ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್

ಕಲಬುರಗಿ: "ನಮ್ಮ ಪಕ್ಷ ಚುನಾವಣೆಗೂ ಮುನ್ನ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನ...

ಕಲಬುರಗಿ| ಸುಗಮ ಆಡಳಿತಕ್ಕಾಗಿ ಪ್ರಜಾಸೌಧಗಳ ನಿರ್ಮಾಣ: ಡಾ.ಅಜಯ್ ಧರ್ಮಸಿಂಗ್

ಕಲಬುರಗಿ: ಸುಗಮ ಆಡಳಿತಕ್ಕಾಗಿ ಹೊಸ ತಾಲ್ಲೂಕುಗಳನ್ನು ಘೋಷಣೆ ಮಾಡಲಾಗಿದೆ. ಈ ಭಾಗದ...

ಕಲಬುರಗಿ| ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಕರ ನೇಮಕಾತಿ ಮಾಡಿ: ಮಲ್ಲಿಕಾರ್ಜುನ ಖರ್ಗೆ  

ಕಲಬುರಗಿ: ಕಲ್ಯಾಣ ಕರ್ನಾಟಕ ಶೈಕ್ಷಣಿಕವಾಗಿ ಹಿಂದುಳಿಯಲು ಮುಖ್ಯ ಕಾರಣ ಈ ಭಾಗದಲ್ಲಿ...