ಕಲಬುರಗಿ| ಕೇಬಲ್ ವಾಯರ್ ಕಳ್ಳತನ; ಇಬ್ಬರು ಆರೋಪಿಗಳ ಬಂಧನ

Date:

Share post:

ಕಲಬುರಗಿ: ಆಳಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ಮೇ.16ರಿಂದ 18ರವರೆಗೆ ನಡೆದಿದ್ದ ಮೂರು ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಕೃತ್ಯ ನಡೆದ 24 ಗಂಟೆಯೊಳಗೆ ಇಬ್ಬರು ಕಳ್ಳರನ್ನು ಬಂಧಿಸಿ, ಅವರಿಂದ 210 ಫೀಟ್ ಕೇಬಲ್ ವಾಯರ್ ಮತ್ತು 60 ಫೀಟ್ ಸರ್ವಿಸ್ ವಾಯರ್‌ನ್ನು ಜಪ್ತಿ ಮಾಡಿಕೊಳ್ಳುವಲ್ಲಿ ಆಳಂದ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.

ಆಳಂದ ತಾಲೂಕಿನ ಪಡಸಾವಳಿ ಗ್ರಾಮದ ನಿವಾಸಿಗಳಾದ ಭೀಮಾಶಂಕರ ಅಲಿಯಾಸ್ ಭೀಮಶ್ಯಾ ತಂದೆ ನಾಗಪ್ಪ ಜಮಾದಾರ (32) ಹಾಗೂ ಅಶೋಕ ತಂದೆ ಅಂಬಾಜಿ ಜಾಧವ (40) ಎಂಬಾತರೆ ಬಂಧಿತ ಆರೋಪಿಗಳಾಗಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

ಆಳಂದ ತಾಲೂಕಿನಪಡಸಾವಳಗಿ ಗ್ರಾಮದ ನಾಮದೇವ ತಂದೆ ದಿಗಂಬರ್, ರಾಜಾಬಾಹಿ ತಂದೆ ಭಾಷಾಸಾಬ ಹಾಗೂ ಸಿದ್ದರಾಮ ತಂದೆ ಕಾಶಿನಾಥ ಎಂಬಾತರ ವಾಯರ್‌ಗಳು ಕಳ್ಳತನವಾಗಿದ್ದ ಕುರಿತು ಆಳಂದ ಪೊಲೀಸ್ ಠಾಣೆಯಲ್ಲಿ ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದವು.

ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಕಳ್ಳರ ಪತ್ತೆಗೆ ವ್ಯಾಪಕ ಜಾಲವನ್ನು ಬೀಸಿದ್ದರು, ಇತ್ತ ರವಿವಾರ ಕಳ್ಳರಿಬ್ಬರು ಆಳಂದ ಹಳೆ ಚೆಕ್‌ಪೊಸ್ಟ್ ಹತ್ತಿರವಿರುವ ಕುರಿತು ಖಚಿತ ಮಾಹಿತಿ ಕಲೆ ಹಾಕಿದ ಬಳಿಕ ಎಸ್ಪಿ ಅಡ್ಡೂರು ಶ್ರೀನಿವಾಸುಲು, ಹೆಚ್ಚುವರಿ ಎಸ್ಪಿ ಮಹೇಶ ಮೇಘಣ್ಣನವ‌ರ್, ಡಿಎಸ್ಪಿ ಅವರ ಮಾರ್ಗದರ್ಶನದಲ್ಲಿ ಸಿಪಿಐ ಶರಣಬಸಪ್ಪ ಕೋಡ್ತಾ ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಚಂದ್ರಶೇಖರ, ಗಣಪತರಾವ, ಸಚೀನ, ಜಾಕೀರ, ವೆಂಕಟೇಶ, ಸಿದ್ದರಾಮ, ಮೌಲಾಲಿ ಅವರು ಸ್ಥಳಕ್ಕೆ ಧಾವಿಸಿ, ಇಬ್ಬರು ಆರೋಪಿಗಳನ್ನು ಬಂಧಿಸಿ, ಅವರಿಂದ ವಾಯರ್‌ಗಳನ್ನು ಜಪ್ತಿ ಮಾಡಿಕೊಂಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು, ಬಂಧಿತ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆಂದು ತಿಳಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ಶಿಕ್ಷಣದ ಜ್ಯೋತಿ ಹೊತ್ತಿಸಿದ ಮಹಾದೇವಪ್ಪ ರಾಂಪುರೆ: ಡಾ.ಮಹೇಶ ಗಂವ್ಹಾರ

ಕಲಬುರಗಿ: ಅಂದಿನ ಹೈದ್ರಾಬಾದ್ ಕರ್ನಾಟಕದಲ್ಲಿ ಶಿಕ್ಷಣದ ಜ್ಯೋತಿ ಹೊತ್ತಿಸಿದ ಪುಣ್ಯಾತ್ಮ ಮಹಾದೇವಪ್ಪ...

ಕಲಬುರಗಿ| ಸರಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಕಲಬುರಗಿ: ನಗರದಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಫೌಜಿಯಾ...

ಕಲಬುರಗಿ| ಜಿಲ್ಲಾಧಿಕಾರಿಗಳಿಂದ ಸಿಟಿ ರೌಂಡ್: ರಸ್ತೆ ದುರಸ್ತಿ,‌ ಗುಂಡಿ ಮುಚ್ಚುವ ಕಾರ್ಯ ಪರಿಶೀಲನೆ

ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಮತ್ತು ಮಹಾನಗರ ಪಾಲಿಕೆ ಆಯುಕ್ತ ಅವಿನಾಶ...

ಕಲಬುರಗಿ| ಬಾಲ್ಯ ವಿವಾಹ, ಫೋಕ್ಸೋ ಪ್ರಕರಣಗಳ ಬಗ್ಗೆ ನಿಗಾವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಬಿ.ಫೌಜಿಯಾ ಸೂಚನೆ

ಕಲಬುರಗಿ: ಬಾಲ್ಯವಿವಾಹ ಮತ್ತು ಫೋಕ್ಸೋ ಪ್ರಕರಣಗಳು ಕಂಡು ಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳು...