ಕಲಬುರಗಿ| ಮೇ.25ರಂದು ಯಳಸಂಗಿ ಯಲ್ಲಿ ಡಾ.ಅಂಬೇಡ್ಕರ್ ಜಯಂತಿ: ಸಂತೋಷ ಪಾಳಾ

Date:

Share post:

ಕಲಬುರಗಿ: ದಲಿತ ಸೇನೆ ವತಿಯಿಂದ ಇದೇ ಮೇ.25ರಂದು ಆಳಂದ ತಾಲ್ಲೂಕಿನ ಯಳಸಂಗಿ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ರವರ 134ನೇ ಜಯಂತ್ಯೋತ್ಸವನ್ನು ಹಮ್ಮಿಕೊಳ್ಳಲಾಗಿದೆ ಎಂದು ದಲಿತ ಸೇನೆ ಗುಲಬರ್ಗಾ ವಿಭಾಗೀಯ ಪ್ರಧಾನ ಕಾರ್ಯದರ್ಶಿ ಸಂತೋಷ ಪಾಳಾ ಹೇಳಿದ್ದಾರೆ.

ನಗರದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅಂದು ಮುಂಜಾನೆ 9.30 ಗಂಟೆಗೆ ಬಹಿರಂಗ ಸಭೆ ಹಮ್ಮಿಕೊಳ್ಳಲಾಗಿದ್ದು, ಪೂಜ್ಯ ಭಂತೆ ಅಮರಜ್ಯೋತಿ ಧ್ಯಾನ ಭೂಮಿ, ಗುರುಪಾದಲಿಂಗಪ್ಪ ಶಿವಯೋಗಿ, ಪರಮಾನಂದ ಮಹಾಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದಾರೆ ಎಂದರು.

ಶಾಸಕ ಬಿ.ಆರ್.ಪಾಟೀಲ್ ಕಾರ್ಯಕ್ರಮವನ್ನು ಉದ್ಘ‌ಾಟಿಸುವರು. ದಲಿತ ಸೇನೆ ರಾಜ್ಯಾಧ್ಯಕ್ಷ ಹನುಮಂತ ಯಳಸಂಗಿ ಅಧ್ಯಕ್ಷೆ ವಹಿಸಲಿದ್ದಾರೆ. ಉಪನ್ಯಾಸಕರಾದ ಡಾ.ಅನೀಲ್ ಟೆಂಗಳಿ, ಪತ್ರಕರ್ತ ಮತ್ತು ಸಾಹಿತಿ ಸುರೇಶ ಬಡಿಗೇರ್ ಮುಖ್ಯ ಭಾಷಣಕಾರರಾಗಿ ಆಗಮಿಸುವರು. ದತ್ತರಾಜ್ ಗುತ್ತೇದಾರ್, ಸಿದ್ದರಾಮ ಪ್ಯಾಟಿ, ನಿಂಬರ್ಗಾ ಪಿಎಸ್ಐ ಇಂದುಮತಿ, ವೀರಯ್ಯ ಮಠಪತಿ, ವಿಶ್ವನಾಥ ಕವಂಟಗಿ ಸೇರಿದಂತೆ ಅನೇಕರು ಬಹಿರಂಗ ಸಭೆಯ ವೇದಿಕೆಯ ಮೇಲೆ ಉಪಸ್ಥಿತವಿರುವರು ಎಂದು ವಿವರಿಸಿದರು.

ಅಂದು ಮಧ್ಯಾಹ್ನ 2.00 ಗಂಟೆಗೆ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ವರ್ಣರಂಜಿತ ಮೆರವಣಿಗೆಗೆ ಚಾಲನೆ ನೀಡುವರು, ಗ್ರಾಮದ ಸರಕಾರಿ ನೌಕರಸ್ಥರಿಗೆ ಸನ್ಮಾನ ಸಮಾರಂಭ ಕೂಡ ನಡೆಯಲಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಉದಯ ಖಣಗೆ, ಶಿವಶರಣಪ್ಪ ಶಿಂಗೆ, ಶರಣಬಸಪ್ಪ ಚಂಡಕೆ, ಶಿವಲಿಂಗಪ್ಪ ಗೊಚ್ಚೆ, ಅಮರ ಚಂಡಕೆ ಸೇರಿದಂತೆ ಇತರರು ಇದ್ದರು.

Share post:

spot_imgspot_img

Popular

More like this
Related

ಕಲಬುರಗಿಯಲ್ಲಿ ಜೋಯಾಲುಕ್ಕಾಸ್‌ನ ‘ಬ್ರಿಲಿಯನ್ಸ್ ಡೈಮಂಡ್ ಜ್ಯುವೆಲ್ಲರಿ ಶೋ’

ಕಲಬುರಗಿ: ಜಗತ್ತಿನ ಪ್ರಸಿದ್ಧ ಜ್ಯುವೆಲ್ಲರಿ ಬ್ರ್ಯಾಂಡ್ ಜೋಯಾಲುಕ್ಕಾಸ್, ಕಲಬುರಗಿ ನಗರದ ತನ್ನ...

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...