ಕಲಬುರಗಿ| ವಾಹನ ಡಿಕ್ಕಿ; ಬೈಕ್ ಸವಾರ ಸಾವು

Date:

Share post:

ಕಲಬುರಗಿ: ವಾಹನವೊಂದು ಬೈಕ್‌ಗೆ ಮುಖಾ ಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ಸಿರನೂರ ಪ್ರದೇಶದಲ್ಲಿ ಗುರುವಾರ ಸಂಜೆ ನಡೆದಿದೆ.

ಆಳಂದ ತಾಲ್ಲೂಕಿನ ಚಲಗೇರಿ ಗ್ರಾಮದ ನಿವಾಸಿಯಾಗಿರುವ ಅಂಬಾರಾಯ ಮಾರುತಿ ಚಲಗೇರಿ(47) ಮೃತ ದುರ್ದೈವಿ ಎಂದು ತಿಳಿದುಬಂದಿದೆ. ಮಾದಿಗ ಸಮುದಾಯದ ಮುಖಂಡ ಎನ್ನಲಾಗುತ್ತಿರುವ ಅಂಬಾರಾಯ ಅವರು, ಸದ್ಯ ಕಲಬುರಗಿ ನಗರದ ಹಳೆ ಆರ್.ಟಿ.ಓ ಕ್ರಾಸ್ ಹತ್ತಿರದಲ್ಲಿ ವಾಸವಾಗಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಈ ಕುರಿತು ಸಂಚಾರಿ ಪೊಲೀಸ್ ಠಾಣೆ-1ರಲ್ಲಿ ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

Share post:

spot_imgspot_img

Popular

More like this
Related

ಕಲಬುರಗಿಯಲ್ಲಿ ಜೋಯಾಲುಕ್ಕಾಸ್‌ನ ‘ಬ್ರಿಲಿಯನ್ಸ್ ಡೈಮಂಡ್ ಜ್ಯುವೆಲ್ಲರಿ ಶೋ’

ಕಲಬುರಗಿ: ಜಗತ್ತಿನ ಪ್ರಸಿದ್ಧ ಜ್ಯುವೆಲ್ಲರಿ ಬ್ರ್ಯಾಂಡ್ ಜೋಯಾಲುಕ್ಕಾಸ್, ಕಲಬುರಗಿ ನಗರದ ತನ್ನ...

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...