ಕಲಬುರಗಿ: ಮೆಟ್ರಿಕ್ ಪೂರ್ವ, ನಂತರದ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶಕ್ಕೆ ಅರ್ಜಿ ಆಹ್ವಾನ

Date:

Share post:

ಕಲಬುರಗಿ: ಪ್ರಸಕ್ತ 2025-26ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿ ನಡೆಯುತ್ತಿರುವ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಅಹ್ವಾನಿಸಲಾಗಿದೆ ಎಂದು ಕಲಬುರಗಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು (ಗ್ರೇಡ್-1) ತಿಳಿಸಿದ್ದಾರೆ.

 

5ನೇ ತರಗತಿಯಿಂದ 10ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅದೇ ರೀತಿ ಮೆಟ್ರಿಕ್ ನಂತರದ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಸಲ್ಲಿಸಹುದಾಗಿದೆ.

 

ಅರ್ಹ ಅಭ್ಯರ್ಥಿಗಳು https://swd.karnataka.gov.in ವೆಬ್‍ಸೈಟ್‍ದಲ್ಲಿ ಆನ್‍ಲೈನ್ ಮೂಲಕ ಅಗತ್ಯ ದಾಖಲಾತಿಗಳೊಂದಿಗೆ 2025ರ ಆಗಸ್ಟ್ 31 ರೊಳಗಾಗಿ ಅರ್ಜಿಯನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಮಿನಿ ವಿಧಾನ ಸೌಧ ಎದುರುಗಡೆಯಿರುವ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಅಥವಾ ಸಂಬಂಧಪಟ್ಟ ವಿದ್ಯಾರ್ಥಿನಿಲಯಗಳ ವಾರ್ಡನ್ ಇವರನ್ನು ಸಂಪರ್ಕಿಸಲು ಕೋರಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ| ವಿ.ಜಿ ವುಮನ್ಸ್ ಕಾಲೇಜಿನಲ್ಲಿ ವಿಶ್ವ ಮಾತೃ ಭಾಷೆ ದಿನಾಚರಣೆ ಆಚರಣೆ

ಕಲಬುರಗಿ: ಕಲಬುರಗಿ ನಗರದ ಪ್ರತಿಷ್ಠಿತ ಮಹಿಳಾ ಮಹಾವಿದ್ಯಾಲಯವಾದ ಶ್ರೀಮತಿ ವೀರಮ್ಮ ಗಂಗಸಿರಿ...

ಕಲಬುರಗಿ| ಎರಡು ದಿನಗಳ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ತೆರೆ

ಕಲಬುರಗಿ: ಸೋಮವಾರದಿಂದ ಪ್ರಾರಂಭವಾದ 22ನೆಯ ಕಲಬುರಗಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು...

ಕಲಬುರಗಿ ಜಿಲ್ಲೆಯನ್ನು ರಾಜ್ಯದ ಉಪರಾಜಧಾನಿಯನ್ನಾಗಿ ಘೋಷಿಸಿ: ಮುಡುಬಿ ಗುಂಡೇರಾವ

ಕಲಬುರಗಿ: ಕಲಬುರಗಿ ನಗರವನ್ನು ಕೇವಲ ಪ್ರಾದೇಶಿಕ ಕೇಂದ್ರವಾಗಿ ನೋಡದೆ, ಈ ಭಾಗದ...

ಕಲಬುರಗಿ| ಶಿಕ್ಷಣದ ಜ್ಯೋತಿ ಹೊತ್ತಿಸಿದ ಮಹಾದೇವಪ್ಪ ರಾಂಪುರೆ: ಡಾ.ಮಹೇಶ ಗಂವ್ಹಾರ

ಕಲಬುರಗಿ: ಅಂದಿನ ಹೈದ್ರಾಬಾದ್ ಕರ್ನಾಟಕದಲ್ಲಿ ಶಿಕ್ಷಣದ ಜ್ಯೋತಿ ಹೊತ್ತಿಸಿದ ಪುಣ್ಯಾತ್ಮ ಮಹಾದೇವಪ್ಪ...