ಕಲಬುರಗಿ| 11.50 ಲಕ್ಷ ಮೌಲ್ಯದ 3 ಟ್ರಾಕ್ಟರ್ ವಶ: ಮೂವರು ಆರೋಪಿಗಳ ಬಂಧನ

Date:

Share post:

ಕಲಬುರಗಿ: ನಗರದ ಹೊರವಲಯದ ಫರಹತಾಬಾದ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಟ್ರಾಕ್ಟರ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ 11.50 ಲಕ್ಷ ಮೌಲ್ಯದ 3 ಟ್ರಾಕ್ಟರ್ ಗಳನ್ನು ವಶಪಡಿಸಿಕೊಂಡು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಫರಹತಾಬಾದ್ ಪೊಲೀಸರು ಯಶಸ್ವಿಯಾಗಿದ್ದಾರೆ.

ಕಲಬುರಗಿ ತಾಲ್ಲೂಕಿನ ಅದೇ ಫರಹತಾಬಾದ್ ಗ್ರಾಮದ ನಿವಾಸಿ, ಡ್ರೈವರ್ ಕೆಲಸ ಮಾಡುತ್ತಿದ್ದ ರಾಜಶೇಖರ್ ನಾಗಪ್ಪ ಮಂಡರವಾಡ(20), ಅಫಜಲಪುರ ತಾಲ್ಲೂಕಿನ ಹಸರಗುಂಡಗಿ ಗ್ರಾಮದ ನಿವಾಸಿ ರಿಯಾಜ್ ಪಟೇಲ್ (25) ಮತ್ತು ಅಫಜಲಪುರ ತಾಲ್ಲೂಕಿನ ಬಂದರವಾಡ ಗ್ರಾಮದ ನಾಗರಾಜ್ ಚಂದ್ರಕಾಂತ್ ಬಾಲಮಾರ್(25) ಬಂಧಿತ ಆರೋಪಿಗಳಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಲಬುರಗಿ ತಾಲ್ಲೂಕಿನ ಹಾಗರಗುಂಡಗಿ ಗ್ರಾಮದ ಗುಂಡಪ್ಪ ಹಣಮಂತ ನೀಲೂರ್ ಅವರು ಕೆಂಪು ಬಣ್ಣದ ಟ್ರಾಕ್ಟರ್ ಅನ್ನು ಯಾರೋ ಕಳ್ಳರು ಕಳ್ಳತನ ಮಾಡಿಕೊಂಡು ಹೋಗಿದ್ದಾರೆ ಎಂದು ಆರೋಪಿಸಿ ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ದೂರು ನೀಡಿದ ಒಂದು ಟ್ರಾಕ್ಟರ್ ಸಮೇತ ಒಟ್ಟು 11.50 ಲಕ್ಷ ಮೌಲ್ಯದ 3 ಟ್ರಾಕ್ಟರ್ ಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಪ್ರಕರಣ ಬೆನ್ನಟ್ಟಿ ಕಳ್ಳತನ ಮಾಡಿರುವ ಟ್ರಾಕ್ಟರ್ ಮತ್ತು ಆರೋಪಿಗಳನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಲ್ಲಿ ಯಶಸ್ವಿಯಾದ ಪೊಲೀಸರ ತನಿಖಾ ತಂಡಕ್ಕೆ ಪೊಲೀಸ್ ಕಮಿಷನರ್ ಡಾ.ಶರಣಪ್ಪ ಎಸ್.ಡಿ ಅವರು ಶ್ಲಾಘಿಸಿ, ಅಭಿನಂದಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Share post:

spot_imgspot_img

Popular

More like this
Related

ಕಲಬುರಗಿ| ವಿಕಲಚೇತನ ಫಲಾನುಭವಿಗಳಿಗೆ ವಿವಿಧ ಬಗೆಯ ಸುಮಾರು 62 ಲಕ್ಷ ರೂ. ಮೊತ್ತದ ಸಾಧನ ಸಲಕರಣೆಗಳ ವಿತರಣೆ

ಕಲಬುರಗಿ: ಹೌಸಿಂಗ್ ಆಂಡ್ ಅರ್ಬನ್ ಡೆವಲಪ್‍ಮೆಂಟ್ ಕಾರ್ಪೋರೇಶನ್ ಲಿಮಿಟೆಡ್ (HUDCO) ಸಂಸ್ಥೆಯ...

ಕಲಬುರಗಿ| ಲಾರಿ – ಬೈಕ್ ಢಿಕ್ಕಿ; ಬೈಕ್ ಸವಾರ ಮೃತ್ಯು; ಇನ್ನೋರ್ವ ಗಂಭೀರ ಗಾಯ

ಕಲಬುರಗಿ: ಲಾರಿ ಹಾಗೂ ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್...

ಕಲಬುರಗಿ| ರಾಮನವಮಿ ಆಚರಣೆ; ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಆದೇಶ

ಕಲಬುರಗಿ: ರಾಮ ನವಮಿ ಆಚರಣೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿಗಳಾದ...

ಕಲಬುರಗಿ| ಬೇಸಿಗೆಯ ಸವಾಲುಗಳ ಎದುರಿಸಲು ಸಿದ್ಧ: ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್

ಕಲಬುರಗಿ: ಕಲಬುರಗಿ ಜಿಲ್ಲಾಡಳಿತವು ಬೇಸಿಗೆಯ ಸವಾಲುಗಳನ್ನು ಎದುರಿಸಲು ಸಂಪೂರ್ಣ ಸನ್ನದ್ಧವಾಗಿದ್ದು, ಸಾರ್ವಜನಿಕರು...