ಕಲಬುರಗಿ ನಗರಕ್ಕೆ ಕುಡಿಯುವ ನೀರಿನ ಕಾಮಗಾರಿ ವಿಳಂಬ: ಅಧಿಕಾರಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನಿಂಗ್

Date:

Share post:

ಕಲಬುರಗಿ: ಕಲಬುರಗಿ ನಗರಕ್ಕೆ ವಾರದ ಏಳುದಿನಗಳಲ್ಲಿ ದಿನದ 24 ಗಂಟೆ ನಿರಂತರ ( 24/7) ಕುಡಿಯುವ ನೀರು ಒದಗಿಸುವ ಯೋಜನೆ ಜಾರಿಗೆ ತಡವಾಗುತ್ತಿರುವ ಹಿನ್ನೆಲೆಯಲ್ಲಿ ಎಲ್ ಅಂಡ್ ಟಿ ಕಂಪನಿಯ ಅಧಿಕಾರಿಗಳೊಂದಿಗೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರಿನಲ್ಲಿ ಸಭೆ ನಡೆಸಿ ಚರ್ಚಿಸಿದರು.

ಈ ಯೋಜನೆ ಕಲಬುರಗಿ ‌ನಗರದ ನಾಗರಿಕರಿಗೆ ಪ್ರಮುಖವಾಗಿದ್ದು, ಪ್ರಸ್ತುತ ನಡೆಯುತ್ತಿರುವ ಕಾಮಗಾರಿ ಸಂತೃಪ್ತಿ ತಂದಿಲ್ಲ ಎಂದು ಸಚಿವರು ಅಧಿಕಾರಿಗಳ ತಂಡಕ್ಕೆ ತಿಳಿಸಿದರು.

ಯೋಜನೆಯ ಪ್ರಗತಿ ಪರಿಶೀಲಿಸಿ ತಂಡದ ಅಧಿಕಾರಿಗಳು ಒದಗಿಸಿದ ಮಾಹಿತಿಯನ್ನು ಪರಿಶೀಲಿಸಿದ ನಂತರ ಸಚಿವರು ಯೋಜನೆ ಪೂರ್ಣಗೊಳಿಸಲು ಸಮಯ ನಿಗದಿಪಡಿಸುವುದರ ಜೊತೆಗೆ ಕಂಪನಿಗೆ ಕೆಲ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ಯೋಜನೆ ವಿಳಂಬ ಕುರಿತಂತೆ ಯಾವುದೇ ರಿಯಾಯಿತಿ ನೀಡಲಾಗುವುದಿಲ್ಲ. ಎಲ್ ಅಂಡ್ ಟಿ ಕಂಪನಿಗೆ ನಿಗದಿಪಡಿಸಿದ ಪರಿಷ್ಕೃತ ಕಾಲಮಿತಿಯೊಳಗೆ ಯೋಜನೆ ಪೂರ್ಣಗೊಳಿಸಬೇಕು. ಒಂದು ವೇಳೆ ವಿಫಲವಾದರೆ ಗುತ್ತಿಗೆಯನ್ನು ರದ್ದುಗೊಳಿಸಿ ಬೇರೆ ಏಜೆನ್ಸಿಗೆ ಕೊಡಲಾಗುವುದು. ಕಾಲಮಿತಿಯೊಳಗೆ ಮುಗಿಸುವ ಉದ್ದೇಶದ ಸಾರ್ವಜನಿಕರ ಅತ್ಯಗತ್ಯ ಸೇವೆಗಳಲ್ಲಿ ಯಾವುದೇ ರಾಜಿ ಮಾಡಿಕೊಳ್ಳಲಾಗುವುದಿಲ್ಲ. ಕಲಬುರಗಿಯ ಜನರು ಇದಕ್ಕೆ ಅರ್ಹರಿದ್ದಾರೆ ಎಂದು ಸಚಿವರು ಹೇಳಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...