ಕಲಬುರಗಿ| ಛಲವಾದಿ ನಾರಾಯಣಸ್ವಾಮಿ ಗಡಿಪಾರು ಮಾಡುವಂತೆ ಮಲ್ಲಿಕಾರ್ಜುನ ನೀಲೂರ ಆಗ್ರಹ

Date:

Share post:

ಕಲಬುರಗಿ: ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವಾಚ್ಯ ಶಬ್ದದಿಂದ ನಿಂದನೆ ಮಾಡಿದ್ದಾರೆ. ಅವರ ವಿಧಾನ ಪರಿಷತ್ ಸದಸ್ಯತ್ವ ರದ್ದು ಮಾಡಿ, ಅವರನ್ನು ಬಂಧಿಸಿ ಕೂಡಲೇ ಗಡಿಪಾರು ಮಾಡಬೇಕೆಂದು ಕಾಂಗ್ರೆಸ್ ನ ಪರಿಶಿಷ್ಠ ಜಾತಿ ವಿಭಾಗದ ಉಪಾಧ್ಯಕ್ಷ ಮಲ್ಲಿಕಾರ್ಜುನ ನೀಲೂರ ಹೇಳಿದ್ದಾರೆ.

ನಾರಾಯಣಸ್ವಾಮಿ ಕ್ಷಮೆ ಕೇಳಿದರೆ ಸಾಲದು, ಯಾವುದೇ ಕಾರ್ಯಕ್ರಮಕ್ಕೆ ಹೋದರೆ ಕಪ್ಪು ಬಾವುಟ ಪ್ರದರ್ಶನ ಮಾಡಬೇಕಾಗುತ್ತದೆ. ಛಲವಾದಿ ಬಿಜೆಪಿ ರಾಷ್ಟ್ರೀಯ ನಾಯಕರಿಗೆ, ಹೈಕಮಾಂಡ್ ಮೆಚ್ಚಿಸಲು ಖರ್ಗೆ ಕುಟುಂಬದ ಬಗ್ಗೆ ಇಲ್ಲ ಸಲ್ಲದ ಕೀಳುಮಟ್ಟದ ಹೇಳಿಕೆ ನೀಡುತ್ತಾ ಬಂದಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಮುಖಂಡರು ಇವರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ಛಲವಾದಿ ನಾರಾಯಣಸ್ವಾಮಿ ಅವರು ಬಿಜೆಪಿ ಪಕ್ಷದಲ್ಲಿ ಬಂದಾಗ ಮುಂಚಿತ ಇದ್ದ ದಲಿತರನ್ನೇ ಬದಿಗಿಟ್ಟು ಈಗ ತಮ್ಮ ಸ್ವಾರ್ಥಕ್ಕಾಗಿ ತಾವೇ ವಿಧಾನಪರಿಷತ್ ಸದಸ್ಯರಾಗಿದ್ದೀರಿ ಇದು ದಲಿತರಿಗೆ ಮಾಡಿರು ಅನ್ಯಾಯ ಅಲ್ವ ಎಂದು ಅವರು ಪ್ರಶ್ನಿಸಿದರು?. ತನ್ನ ನೀಚ ಬುದ್ಧಿ ಕರ್ನಾಟಕ ಜನತೆಗೆ ಗೊತ್ತಿಲ್ವಾ ಮತ್ತು ಬಿಜೆಪಿಯ ಸರ್ವ ಮುಖಂಡರು ಮಾಡುತ್ತಿರುವ ಕುತಂತ್ರವನ್ನು ಎಳೆ ಎಳೆಯಾಗಿ ಬಿಚ್ಚಿಡುತ್ತಿರುವ ಡೈನಾಮಿಕ್ ಲೀಡರ್ ನಾಯಕರಾಗಿ ಹೊರಹೊಮ್ಮುತ್ತಿರುವುದು ಅವರನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದು ಹೇಳಿದರು.

ಕಲಬುರಗಿ ಜಿಲ್ಲೆಗೆ ವಿಶೇಷವಾಗಿ ಅಭಿವೃದ್ಧಿ ಆಗುತ್ತಿರುವುದನ್ನು ಹಾಗೂ ಉದ್ಯೋಗ ಮೇಳ ಹೀಗೆ ಹತ್ತು ಹಲವಾರು ಯೋಜನೆಗಳನ್ನು ಮಾಡುತ್ತಿರುವುದನ್ನು ಇವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದು ಅವರು ಆರೋಪಿಸಿದರು.

Share post:

spot_imgspot_img

Popular

More like this
Related

ಕಲಬುರಗಿ| ಸರ್ಕಾರಿ ಅಭಿಯೋಜಕರಿಗೆ ₹5 ಸಾವಿರ ಲಂಚ ನೀಡಲು ಯತ್ನಿಸಿದ ತಂದೆ-ಮಗ ಲೋಕಾ ವಶಕ್ಕೆ

ಕಲಬುರಗಿ: ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಅನುಕೂಲವಾಗುವಂತೆ ಸಹಕರಿಸುವ ಉದ್ದೇಶದಿಂದ...

ಕಲಬುರಗಿ| ಆಸ್ತಿಗಾಗಿ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

ಕಲಬುರಗಿ: ಆಸ್ತಿಗಾಗಿ ವ್ಯಕ್ತಿಯೊಬ್ಬ ತನ್ನ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ...

ಕಲಬುರಗಿ| ಬ್ರೇನ್ ಟಿಬಿಯಿಂದ ಬಳಲುತ್ತಿದ್ದ ತಾಯಿಗೆ ಯಶಸ್ವಿ ಚಿಕಿತ್ಸೆ ನೀಡಿದ ಜೀವ ಕಾಪಾಡಿದ ಬಸವೇಶ್ವರ ಆಸ್ಪತ್ರೆ ವೈದ್ಯರು

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ...

ಕಲಬುರಗಿ| ಕಾಳ‌ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಡಿಸ್ಟ್ರಿಬೂಟರ್ ಮೇಲೆ ಕ್ರಮ: ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್

ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ‌ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ...